Rain Alert: ಚಂಡಮಾರುತ ಪ್ರಭಾವ: ಕರ್ನಾಟಕದ ಈ ಭಾಗಗಳಲ್ಲಿ ಅಕ್ಟೋಬರ್ 08ರ ವರೆಗೆ ಧಾರಾಕಾರ ಮಳೆ!
Rain Alert: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ / ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನು ಕರ್ನಾಟಕದಲ್ಲಿ ಅಕ್ಟೋಬರ್ 08ರ ವರೆಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಚಂಡಮಾರುತ ಪ್ರಭಾವದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ತುಸು ಬಿಡುವು ಕೊಟ್ಟಿತ್ತು. ಇದೀಗ ಏಕಕಾಲಕ್ಕೆ ಎರಡು ಚಂಡಮಾರುತಗಳು ರೂಪುಗೊಂಡಿರುವುದರಿಂದ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ.
ಈ ಬಾರಿ ಮುಂಗಾರು ಮಳೆ ಅವಧಿ ವಿಸ್ತರಿಸಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯಕ್ಕೆ ಮುಂಗಾರು ಮಳೆ ಅಂತ್ಯವಾಗುತ್ತಿತ್ತು. ಆದರೆ, ಈ ಬಾರಿ ಮುಂಗಾರು ಅವಧಿ ಅಂದಾಜು 15 ದಿನಗಳು ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಭಾಗದಲ್ಲಿ ಕಡಿಮೆ ಒತ್ತಡ ರೂಪುಗೊಂಡಿದೆ.

ಎಲ್ಲೆಲ್ಲಿ ಮಳೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಒಳನಾಡಿನ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದ್ದು. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆ ಇರಲಿದೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖ ಮಾಡಿದೆ.












Click it and Unblock the Notifications