Cyclone Rainfall: ಸೈಕ್ಲೋನ್ ಪ್ರಭಾವ: ರಾಜ್ಯದಲ್ಲಿ 6 ದಿನ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ!
Karnataka Cyclone Impact: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಗುರುವಾರದಿಂದ ಮಳೆ ಆರ್ಭಟ ಇನ್ನಷ್ಟು ಜೋರಾಗಲಿದ್ದು ಮುಂದಿನ ಒಂದು ವಾರದ ಅವಧಿಗೆ ರಾಜ್ಯದಲ್ಲಿ ರಣಭೀಕರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ವಿವರ ಇಲ್ಲಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು ಕರ್ನಾಟಕದಲ್ಲೂ ಮಳೆ ಆರ್ಭಟ ಜೋರಾಗಿದೆ. ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ನಡುವೆ ಮೇಲ್ಮಟ್ಟದ ವಾಯುವ್ಯ ಚಂಡಮಾರುತವು ಸೃಷ್ಟಿ ಆಗಲಿದೆ. ಇದರ ಪ್ರಭಾವದಿಂದಾಗಿ ಆಗಸ್ಟ್ 13ರಂದು ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಕರ್ನಾಟಕದಲ್ಲಿ ಮುಂದಿನ ಒಂದು ವಾರದ ಅವಧಿಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯುವ್ಯ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ತೆಲಂಗಾಣಕ್ಕೆ ಹೊಂದಿಕೊಂಡಂತೆ ಸಮುದ್ರ ಮಟ್ಟಕ್ಕಿಂತ ಸರಾಸರಿ 3.1 ಮತ್ತು 5.8 ಕಿ.ಮೀ. ಎತ್ತರದ ಮೇಲಿನ ವಾಯು ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಕರ್ನಾಟಕದ ಈ ಭಾಗದಲ್ಲಿ ಮಳೆ ಆರ್ಭಟ: ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 7 ದಿನಗಳ ಅವಧಿಗೆ ಮಳೆ ಆರ್ಭಟ ಇರಲಿದೆ ಎಂದು ಐಎಂಡಿ ವರದಿ ಹೇಳಿದೆ. ಆಗಸ್ಟ್ 14ರಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಭಾರೀ ಮಳೆ ಆಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇದೆ. ಈ ಭಾಗದಲ್ಲಿ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ಬೆಂಗಳೂರು ಸೇರಿ ಈ ಭಾಗದಲ್ಲಿ ಮಳೆ!
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಯಲ್ಲಿ ಹಾಗೂ ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಇನ್ನು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications