Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಎರಡು ದಿನ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 24 : ಬಂಗಾಳಕೊಲ್ಲಿಯ ಆಗ್ನೇಯದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿದ್ದು ಕರ್ನಾಟಕದಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶನಿವಾರ ಸಂಜೆ ಸಾಧಾರಣ ಮಳೆ ಸುರಿದಿದೆ.

ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಕಡಿಮೆಯಾಗಿತ್ತು. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿತ್ತು. ಕೃಷ್ಣಾ ನದಿಗೆ ನೀರು ಹರಿದು ಬರುತ್ತಿರುವುದರಿಂದ ಉತ್ತರ ಕರ್ನಾಟಕದ ಕೆಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿತ್ತು.

rain

ಭಾನುವಾರದಿಂದ ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ ಸಂಜೆ ಸಾಧಾರಣ ಮಳೆ ಸುರಿದಿದೆ.

ಕುಮುಟಾ 3, ಮೂಡಬಿದಿರೆ, ಕೋಟಾದಲ್ಲಿ 2, ಬಂಟ್ವಾಳ, ಧರ್ಮಸ್ಥಳ, ಸುಳ್ಯ, ಹೊನ್ನಾವರ, ಲಿಂಗನಮಕ್ಕಿ, ಆಗುಂಬೆ, ಕಮ್ಮರಡಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+