Cyclone Mocha: ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆಯವ ಮುನ್ಸೂಚನೆ, ಪ್ರಮುಖ ಎಚ್ಚರಿಕೆ ಸಂದೇಶಗಳು ಇಲ್ಲಿವೆ
ಕರ್ನಾಟಕ, ಮೇ, 14: ಈಗಾಗಲೇ ಮೋಚಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದಾನೆ. ಕೆಲವೆಡೆ ಬಿರುಗಾಳಿ ಸಹತ ಮಳೆ ಸುರಿದ ಹಿನ್ನೆಲೆ ಬೆಟ್ಟಗುಡ್ಡಗಳು ಕುಸಿದಿವೆ. ಇನ್ನು ಕೆಲವೆಡೆ ಕೃಷಿ ಭೂಮಿಗಳು ಜಲಾವೃತ ಆದ ಘಟನೆಗಳು ನಡೆದಿವೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮದ್ದೂರು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗಿದ್ದು, ಈಗಾಗಲೇ ಈ ಗುಡುಗು, ಮಿಂಚು ಸಹಿತ ಮಳೆಯಿಂದ ಹಲವರು ಪ್ರಾಣ ಕಳೆದುಕೊಂಡ ಘಟನೆಯೂ ಕೂಡ ಸಂಭವಿಸಿದೆ. ಆದ್ದರಿಂದ ಈ ಭಾಗದ ಮೀನುಗಾರರಿಗೆ ಮೂರು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಳಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊನ್ನೆ ಸಂಜೆ ಮಳೆ ಸುರಿದದ್ದು, ನಿನ್ನೆ ಮಾತ್ರ ಬಿಡುವು ಕೊಟ್ಟಿದೆ. ಆದರೆ ಇಂದು ಮೋಡ ಕವಿದ ವಾತವರಣ ಇದ್ದು, ನಗರದಲ್ಲಿ ಮಳೆ ಬೀಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಮತ್ತೊಂಡೆ ಕರ್ನಾಟಕದ ಕರಾವಳಿ ಭಾಗದಲ್ಲಿ ಬೆಳ್ಳಂಬೆಳ್ಳಗ್ಗೆಯೇ ಮಳೆ ಶುರುವಾಗಿದೆ.
ಮೋಚಾ ಸೈಕ್ಲೋನ್ ಎಫೆಕ್ಟ್ ಹೀಗಿದೆ
ಇನ್ನು ಮೋಚಾ ಸೈಕ್ಲೋನ್ ಬಾಂಗ್ಲಾದೇಶ-ಮ್ಯಾನ್ಮಾರ್ ಗಡಿ ಭಾಗದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ, ಒಡಿಶಾ, ಬಾಂಗ್ಲಾ-ಮ್ಯಾನ್ಮಾರ್‌ನ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆರಂಭವಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ಸಹ ನೀಡಿದೆ.
ಚಂಡಮಾರುತವು ಪ್ರಸ್ತುತ ಕಾಕ್ಸ್ ಬಜಾರ್‌ನ ದಕ್ಷಿಣ-ನೈಋತ್ಯಕ್ಕೆ 700 ಕಿಲೋ ಮೀಟರ್ ದೂರದಲ್ಲಿ ಅಪ್ಪಳಿಸಲಿದೆ. ಕಳೆದ 6 ಗಂಟೆಗಳಲ್ಲಿ ಈ ಚಂಡಮಾರುತವು ನಿಧಾನವಾಗಿ ಈಶಾನ್ಯ ಕಡೆಗೆ 10 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದೆ. ಅಲ್ಲದ ಭಾನುವಾರ ಅಂದರೆ ಇಂದಯ ಮಧ್ಯಾಹ್ನದ ವೇಳೆಗೆ ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಕ್ಯವ್ಪಿಯು (ಮ್ಯಾನ್ಮಾರ್) ನಡುವೆ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಹಾಗೆಯೆ ಈ ಚಂಡಮಾರುತವು ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗಾಳಿಯ ವೇಗ ಗಂಟೆಗೆ 160 ರಿಂದ 175 ಕಿಲೋ ಮೀಟರ್ ಇದ್ದು, ಇದು ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ. ಕರಾವಳಿಯನ್ನು ದಾಟಿದ ನಂತರ ಚಂಡಮಾರುತದ ವೇಗ ಕಡಿಮೆ ಆಗಲಿದೆ. ಈ ಹಿನ್ನೆಲೆ ಇಂದು ಪಶ್ಚಿಮ ಬಂಗಾಳ, ಒಡಿಶಾ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ತಿಳಿಸಿದೆ.
ಕಾಕ್ಸ್ ಬಜಾರ್ ಎನ್ನುವುದು ಜಗತ್ತಿನ ಅತಿದೊಡ್ಡ ನಿರ್ವಸಿತರ ಶಿಬಿರವಾಗಿದ್ದು, ಇಲ್ಲಿ ಮ್ಯಾನ್ಮಾರ್‌ನಿಂದ ವಲಸೆ ಬಂದ ಸುಮಾರು 9 ಲಕ್ಷ ರೊಹಿಂಗ್ಯಾ ಮುಸ್ಲಿಮರು ವಾಸಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಶುಕ್ರವಾರವೇ ಬಾಂಗ್ಲಾ ಸರ್ಕಾರ ಸುಮಾರು 5 ಲಕ್ಷ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭಿಸಿದೆ. 500ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ಕೂಡ ಸ್ಥಾಪಿಸಿದೆ. ಅಲ್ಲದೆ ಎನ್‌ಡಿಆರ್‌ಎಫ್ ತಂಡಗಳು ಕೂಡ ಬೀಡುಬಿಟ್ಟಿವೆ ಎನ್ನುವ ವಿಷಯ ತಿಳಿದುಬಂದಿದೆ.
ಹಾಗೆಯೆ ಇದು ಈ ವರ್ಷ ಹಿಂದೂ ಮಹಾಸಾಗರದಲ್ಲಿ ಕಂಡುಬರುತ್ತಿರುವ ಮೊದಲ ಚಂಡಮಾರುತ ಆಗಿದೆ. ಇದು ಬಹಳ ಅಪಾಯಕಾರಿ ಸೈಕ್ಲೋನ್ ಆಗಿದ್ದು, ಸಾವಿರಾರು ಮಂದಿ ಮೀನುಗಾರರು ಮತ್ತು ಕರಾವಳಿಯ ಜನರಿಗೆ ಹಾನಿ ಉಂಟುಮಾಡುವ ಭೀತಿ ಎದುರಾಗಿದೆ. ಅಲ್ಲದ 2008ರಲ್ಲಿ ಅಪ್ಪಳಿಸಿದ್ದ ನರ್ಗಿಸ್ ಚಂಡಮಾರುತವು 1.38 ಲಕ್ಷ ಜನರನ್ನು ನುಂಗಿಬಿಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಡಮಾರುತವು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಿ ಅಪ್ಪಳಿಸುತ್ತಿದೆ. ಆದರೂ ಭಾರತದ ಈಶಾನ್ಯ ಭಾಗದಲ್ಲಿ ಇದರ ಪ್ರಭಾವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ದಕ್ಷಿಣ ಅಸ್ಸಾಂನಲ್ಲಿ ಭಾರಿ ಮಳೆ ಆಗಲಿದೆ. ಅಲ್ಲದೆ ಕೇರಳ, ಒಡಿಶಾ ಮತ್ತು ಕರ್ನಾಟಕದಲ್ಲಿಯೂ ಗುಡುಗು, ಮಿಂಚು ಸಹಿತ ಮಳೆ ಬೀಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಇತ್ತೀಚೆಗಷ್ಟೇ ಈ ಮೋಚಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಹಾನಿಗಳು ಸಂಭವಿಸಿದದ್ದವು. ಮತ್ತೆ ಇದೀಗ ಈ ಚಂಡಮಾರುತದ ಪ್ರಭಾವ ಹೆಚ್ಚಾಗಲಿದ್ದು, ಇನ್ನು ಅನಾಹುತಗಳು ಹೆಚ್ಚಾಗುವ ಸಾಧ್ಯತೆಯು ಇದೆ. ಆದ್ದರಿಂದ ಈಗಾಗಲೇ ನರ ರಕ್ಷಣೆಗಾಗಿ ಹಲವೆಡೆ ಎನ್‌ಡಿಆರ್‌ಎಫ್ ತಂಡಗಳು ಬೀಡುಬಿಟ್ಟಿವೆ.












Click it and Unblock the Notifications