Cyclone Mocha Update: ರಾಜ್ಯದ ಈ ಜಿಲ್ಲೆಗಳ ಮೇಲೆಯೇ ಮೋಚಾ ಚಂಡಮಾರುತದ ಹೆಚ್ಚು ಪರಿಣಾಮ, ಇಲ್ಲಿದೆ ಮಾಹಿತಿ

ಕರ್ನಾಟಕ, ಮೇ, 14: ರಾಜ್ಯದ ಮೇಲೆ ಮೋಚಾ ಚಂಡಮಾರುತದ ಪ್ರಭಾವ ಬೀರಿದ್ದು, ಈ ಚಂಡಮಾರುತವು ಇಂದಿನಿಂದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇಂದು ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಂಗಾಳಕೊಲ್ಲಿಯಲ್ಲಿ ಹುಟ್ಟಿಕೊಂಡಿದ್ದ ಈ ಮೋಚಾ ಚಂಡಮಾರುತ ಇಲ್ಲಿಯವರೆಗೆ ಸುಮ್ಮನೆ ಇತ್ತು. ಆದರೆ ಇಂದಿನಿಂದ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದರ ಪರಿಣಾಮ ಎದುರಿಸಲು ಪಶ್ಚಿಮಬಂಗಾಳ, ಮ್ಯಾನ್ಮಾರ್‌ ಹಾಗೂ ಬಾಂಗ್ಲಾದೇಶಗಳು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿವೆ. ಇನ್ನು ಈಶಾನ್ಯ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲೂ ಇದರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Cyclone Mocha Update: Cyclone Mocha Impact on many districts of Karnataka, Know details

ಈ ಜಿಲ್ಲೆಗಳ ಮೇಲೆಯೇ ಚಂಡಮಾರುತದ ಹೆಚ್ಚು ಪರಿಣಾಮ

ಭಾನುವಾರ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧರಣ ಮಳೆ ಬೀಳಲಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆ ಬೀಳುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಹೀಗೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳ ಮುಂದಿನ 48 ಗಂಟೆಗಳ ಕಾಲದವರೆಗಿನ ವರದಿ ನೀಡಿದೆ.

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಮಿಂಚು ಕಾಣಿಸಲಿದೆ.

ಈಗಾಗಲೇ ಹಲವು ದಿನಗಳಿಂದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆ ಆಗುತ್ತಿದ್ದು, ಇಂದು ಕೂಡ ಇಲ್ಲಿ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದೆ. ಇನ್ನು ಚಂಡಮಾರುತವು ಕರಾವಳಿ ಜಿಲ್ಲೆಗಳ ಮೇಲೆ ಪರಿಣಾಮ ಬೀರಲಿದ್ದು, ಗುಡುಗು, ಮಿಂಚು ಸಹಿತ ಮಳೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಹಾಗೆಯೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಮತ್ತೊಂದೆಡೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬಿಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ಮಂಡ್ಯ, ಮೈಸೂರು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಮತ್ತೊಂದೆಡೆ ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ಹೇಳುವುದಾದರೆ ರಾಜ್ಯದ ಮೇಲೆ ಮೋಚಾ ಚಂಡಮಾರುತ ಪ್ರಭಾವ ಬೀರಿದ್ದು, ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ಸಾಧ್ಯೆಯಿದೆ. ಅಲ್ಲದೆ ಅನಾಹುತಗಳು ಸಂಭವಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈಗಾಗಲೇ ಅನಾಹುತಗಳನ್ನು ತಡೆಯಲು ಹಲವು ಕಡೆಗಳಲ್ಲಿ ಎನ್‌ಡಿಆರ್‌ಎಫ್‌ ತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+