'ಡಿ' ಗ್ರೂಪ್ ನೌಕರರ ವರ್ಗಾವಣೆ; ಸಿಹಿಸುದ್ದಿ ಕೊಟ್ಟ ಸರ್ಕಾರ

ಪತಿ, ಪತ್ನಿ 'ಡಿ' ಗ್ರೂಪ್ ನೌಕರಾಗಿದ್ದರೆ ವರ್ಗಾವಣೆ ಕುರಿತು ಕರ್ನಾಟಕ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಮೂಲಕ ನೌಕರರಿಗೆ ಸಿಹಿಸುದ್ದಿ ನೀಡಿದೆ.

ಬೆಂಗಳೂರು, ಮಾರ್ಚ್ 10; 7ನೇ ವೇತನ ಆಯೋಗದ ಶಿಫಾರಸು ಜಾರಿಗಾಗಿ ಮುಷ್ಕರ ಆರಂಭಿಸಿದ್ದ ನೌಕರರಿಗೆ ಕರ್ನಾಟಕ ಸರ್ಕಾರ ಶೇ 17ರಷ್ಟು ವೇತನ ಹೆಚ್ಚಳ ಮಾಡಿತ್ತು. ಈಗ 'ಡಿ' ಗ್ರೂಪ್ ನೌಕರರ ವರ್ಗಾವಣೆ ವಿಚಾರದಲ್ಲಿ ಮತ್ತೊಂದು ಸಿಹಿಸುದ್ದಿ ನೀಡಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಸರ್ಕಾರಿ ನೌಕರರ ಮತಗಳನ್ನು ಪಡೆಯಲು ಬಿಜೆಪಿ ಸರ್ಕಾರ ಮುಂದಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಆದೇಶವೊಂದನ್ನು ಹೊರಡಿಸಿದ್ದಾರೆ. ಪತಿ ಮತ್ತು ಪತ್ನಿ 'ಡಿ' ದರ್ಜೆಯ ನೌಕರರಾಗಿದ್ದರೆ ಅವರ ವರ್ಗಾವಣೆಗೆ ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ನಿಯಮ ಮತ್ತು ಷರತ್ತುಗಳ ಅನ್ವಯ ಈ ವರ್ಗಾವಣೆ ನಡೆಯಲಿದೆ.

D Group Employees Transfer New Order Form Karnataka Government

ಆದೇಶದಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ), ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ 21/12/2022ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ IV- ಎ (ನಂ-611)ರಲ್ಲಿ ಅಧಿಸೂಚಿಸಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು.

ಸದರಿ ರಾಜ್ಯಪತ್ರವನ್ನು ದಿನಾಂಕ 21ನೇ ಡಿಸೆಂಬರ್ 2022 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ, ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ, ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990 ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪುಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

D Group Employees Transfer New Order Form Karnataka Government

ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2023 ಎಂದು ಕರೆಯತಕ್ಕದ್ದು. ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು. ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 16ರ ನಂತರ ಈ ಕೆಳಕಂಡಂತೆ ಸೇರಿಸತಕ್ಕದ್ದು ಎಂದು ಆದೇಶದಲ್ಲಿ ಹೇಳಿದೆ.

ಈ ನಿಯಮಗಳಲ್ಲಿ ಅಥವಾ ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಲಾದ ವಿಶೇಷ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಒಬ್ಬ ಇಲಾಖಾ ಮುಖ್ಯಸ್ಥರು ಸೇವೆಗೆ ಸಂಬಂಧಿಸಿದಂತೆ ಕಾರಣಗಳನ್ನು ಲಿಖಿತದಲ್ಲಿ ದಾಖಲಿಸಿ ಮತ್ತು ಈ ಬಗ್ಗೆ ಸರ್ಕಾರವು ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು, ಪತಿ-ಪತ್ನಿ ಇಬ್ಬರೂ ಸರ್ಕಾರಿ ಸೇವೆಯಲ್ಲಿರುವ ಪ್ರಕರಣಗಳಲ್ಲಿ ಮಾತ್ರ ಗುಂಪು-ಸಿ ಅಥವಾ ಗುಂಪು-ಡಿ ಸೇವೆಗೆ ಸೇರಿದ ಒಬ್ಬ ಸದಸ್ಯರನ್ನು ಮತ್ತು ಈ ನಿಯಮಗಳಡಿ ಪತಿ ಅಥವಾ ಪತ್ನಿ ಇವರಲ್ಲಿ ಯಾರಾದರೊಬ್ಬರಿಂದ ಕೋರಿಕೆ ಬಂದಲ್ಲಿ, ಹುದ್ದೆಯ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕದಲ್ಲಿನ ಅದೇ ಕೇಡರ್‌ನ ಸಮಾನ ಹುದ್ದೆಗೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ವರ್ಗಾವಣೆ ಮೂಲಕ ನೇಮಕ ಮಾಡಬಹುದು.

ಷರತ್ತುಗಳು; ಒಬ್ಬ ಸರ್ಕಾರಿ ನೌಕರನು ಪುಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕನಿಷ್ಠ 7 ವರ್ಷ ಸೇವೆಯನ್ನು ಪೂರ್ಣಗೊಳಿಸಿರಬೇಕು. ವರ್ಗಾಯಿಸಬೇಕಾದ ಘಟಕ ಅಥವಾ ಸ್ಥಳದಲ್ಲಿ ಮಂಜೂರಾದ ಹುದ್ದೆಯು ಖಾಲಿಯಿರತಕ್ಕದ್ದು. ಅಂತಹ ವರ್ಗಾವಣೆಯನ್ನು ಒಂದು ಕೇಡರ್‌ನಿಂದ ಮತ್ತೊಂದು ಕೇಡರಿಗೆ ಮಾಡತಕ್ಕದ್ದಲ್ಲ. ಈ ನೇಮಕಾತಿಯನ್ನು ಸರ್ಕಾರಿ ನೌಕರರ ಕೋರಿಕೆಯ ಮೇರೆಗೆ ಮಾಡುವುದರಿಂದ ಅವರ ಜೇಷ್ಠತೆಯನ್ನು ವರ್ಗಾವಣೆಗೊಂಡ ಘಟಕದಲ್ಲಿನ ಕೇಡರ್‌ನ ಕೊನೆಯ ವ್ಯಕ್ತಿಯ ಕೆಳಗಿರಿಸತಕ್ಕದ್ದು. ವರ್ಗಾವಣೆಯ ಮೂಲಕ ಅಂತಹ ನೇಮಕಾತಿಯನ್ನು ಸರ್ಕಾರಿ ನೌಕರನ ಸೇವೆಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಮಾಡತಕ್ಕದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+