ಡಿಕೆ ರವಿ ನಿಗೂಢ ಸಾವು : ಸಿಬಿಐಗೆ ಪತ್ರ ಬರೆಯಲಿದೆ ಸರ್ಕಾರ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 17 : 'ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐಗೆ ಪತ್ರ ಬರೆದು, ವರದಿ ನೀಡುವಂತೆ ಮನವಿ ಮಾಡಲಾಗುತ್ತದೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ ಅವರು, 'ಸಿಬಿಐ ತನಿಖೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದರೆ, ಡಿ.ಕೆ.ರವಿ ಅವರ ಸಾವಿನ ಕುರಿತು ಸತ್ಯಾಂಶ ಹೊರಬರಲಿದೆ' ಎಂದು ತಿಳಿಸಿದರು. [ರವಿ ಮರಣೋತ್ತರ ಪರೀಕ್ಷೆ ಮತ್ತೊಮ್ಮೆ ಮಾಡಿ: ಗೌರಮ್ಮ]

g parameshwara

ಮಾರ್ಚ್ 16ಕ್ಕೆ ಡಿ.ಕೆ.ರವಿ ಅವರು ಸಾವನ್ನಪ್ಪಿ ಒಂದು ವರ್ಷ ಕಳೆದಿದೆ. ರವಿ ಅವರ ತಾಯಿ ಗೌರಮ್ಮ ಮತ್ತು ಇತರ ಕುಟುಂಬ ಸದಸ್ಯರು ಬೆಂಗಳೂರಿನಲ್ಲಿ ಬುಧವಾರದಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಸಿಬಿಐ ನಡೆಸಿರುವ ತನಿಖಾ ವರದಿಯನ್ನು ಒಂದು ವಾರದೊಳಗೆ ನೀಡುವಂತೆ ಗಡುವು ನೀಡಿದ್ದಾರೆ. [ಡಿಕೆ ರವಿ ಆತ್ಮಹತ್ಯೆ ಕಾರಣ? ತನಿಖೆಯೇ ಅನುಮಾನ!]

ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅವರು 2015ರ ಮಾ.16ರಂದು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು. ಮೊದಲು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ್ಯಾಂತ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಒಪ್ಪಿಸಿದ್ದರು. [ಡಿಕೆ ರವಿ ಶವ ಪರೀಕ್ಷೆ ಗೊಂದಲದಲ್ಲಿ ಸಿಬಿಐ]

2015ರ ಏಪ್ರಿಲ್‌ನಿಂದ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಆದರೆ, ಅಂತಿಮ ವರದಿಯನ್ನು ಇನ್ನೂ ಸರ್ಕಾರಕ್ಕೆ ಸಲ್ಲಿಕೆ ಮಾಡಿಲ್ಲ. ಆದ್ದರಿಂದ ಸರ್ಕಾರ ಸಿಬಿಐಗೆ ಪತ್ರ ಬರೆದು ಶೀಘ್ರವಾಗಿ ತನಿಖೆ ಪೂರ್ಣಗೊಳಿಸುವಂತೆ ಮನವಿ ಮಾಡಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka home minister Dr.G.Parameshwara on Thursday said, state government will write to the Central Bureau of Investigation (CBI), which is probing into the death of IAS officer D.K.Ravi with a request to expedite the submission of its report.
Please Wait while comments are loading...