Manmohan Singh: ಮನಮೋಹನ್ ಸಿಂಗ್ ಸ್ಮರಣಾರ್ಥ ರಾಜ್ಯ ಸರ್ಕಾರದಿಂದ ಸಂಶೋಧನಾ ಕೇಂದ್ರದ ಕೊಡುಗೆ, ಎಲ್ಲಿ?
ನಿನ್ನೆ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ತೆರೆಯಲಿದ್ದೇವೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಗೌರವಪೂರ್ವಕ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದ್ದಾರೆ. ದೇಶದ ಆರ್ಥಿಕತೆಗೆ ಮನಮೋಹನ ಸಿಂಗ್ ಅವರು ನೀಡಿದ ಕೊಡುಗೆ ಅಪಾರ. ಹಲವಾರು ಶಾಸನಬದ್ಧ ಕಾರ್ಯಕ್ರಮಗಳ ಮೂಲಕ ಅವರು ದೇಶದ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ಡಿಕೆಶಿ ನೆನೆದಿದ್ದಾರೆ.
ಆಹಾರ ಭದ್ರತಾ ಕಾಯ್ದೆ, ನರೇಗಾ ಯೋಜನೆ, ಆರ್‌ಟಿಇ, ಆರ್‌ಟಿಐ ಸೇರಿದಂತೆ ಅನೇಕ ಯೋಜನೆಗಳು ವಿಶ್ವಕ್ಕೆ ಮಾದರಿ. ದೇಶದ ಬಡವರು ನೀರುದ್ಯೋಗಿಗಳ ಪರವಾಗಿ ಅವರು ಕೆಲಸ ಮಾಡಿದ್ದಾರೆ. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಮನಮೋಹನ ಸಿಂಗ್ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಬದುಕು ಹಾಗೂ ಅವರು ಮಾಡಿದ ಕೆಲಸಗಳು ನಮಗೆ ಸದಾ ಪ್ರೇರಣೆ ಎಂದು ಸಂತಾಪ ಸೂಚಿಸಿದ್ದಾರೆ.

ಅವರ ಕಾಲದಲ್ಲಿ ಕರ್ನಾಟಕದ ಆರ್ಥಿಕತೆ ಉತ್ತಮ: ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಲ್ಲರಿಗೂ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರಂಥವರೇ 2013-18ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂದು ಬಣ್ಣಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಮೆಲುಕು ಹಾಕಿದ್ದಾರೆ.
ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ.ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಸಾಧ್ಯವಾಯಿತು ಎಂದಿದ್ದಾರೆ.
2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು ಎಂದು ಶ್ಲಾಘಿಸಿದ್ದಾರೆ.
ಇವರು ದೇಶ ಕಂಡ ದಕ್ಷ ಹಾಗೂ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ನೋಡುವುದು ವಿರಳ. ಆದರೆ, ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ. ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಫೂರ್ತಿ. ಅವರು ಅತ್ಯಂತ ಸರಳ, ವಿನಯವಂತರಾಗಿದ್ದರು, ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನಗಲಿದ್ದು, ಭಾರತಕ್ಕೆ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅನ್ನಭಾಗ್ಯಕ್ಕೂ ಅವರೇ ಪ್ರೇರಣೆ: ಮನಮೋಹನ್ ಸಿಂಗ್ ಅವರು ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದುದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂಪಾಯಿ ದರದಲ್ಲಿ ಒಂದು ಕೆ.ಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ನಂತರದ ದಿನಗಳಲ್ಲಿ ಐದು ಕೆ.ಜಿಯಿಂದ ಏಳು ಕೆ.ಜಿಯವರೆಗೆ ಹೆಚ್ಚಿಸಿ, ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆ.ಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದಲೇ. ಅವರು ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಸ್ಮರಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications