KPCC President Post: ಡಿ ಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣ: ಮರು ಆಯ್ಕೆ ಆಗ್ತಾರಾ ಕನಕಪುರ ಬಂಡೆ?

ಬೆಂಗಳೂರು, ಮಾರ್ಚ್‌ 12: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ. ರಾಜ್ಯ ಬಜೆಟ್‌ ಅಧಿವೇಶನದ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಹಾಲಿ ಕೆಪಿಸಿಸಿ ಅಧ್ಯಕ್ಷರನ್ನ ಕೆಳಗಿಳಿಸಲು ಸಚಿವ ಕೆ ರಾಜಣ್ಣ ಹಾಗೂ ಸಚಿವ ಸತೀಶ್‌ ಜಾರಿಕಿಹೊಳಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಮಾರ್ಚ್ 11ಕ್ಕೆ ಪಕ್ಷದ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡು ಡಿ ಕೆ ಶಿವಕುಮಾರ್ ಅವರು ಐದು ವರ್ಷ ಪೂರೈಸಿದ್ದಾರೆ. ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ ಇಂದಿಗೆ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ ಐದು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

D K Shivakumar completes 5 years as KPCC President

ಇತ್ತ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತ ಡಿ ಕೆ ಶಿವಕುಮಾರ್‌ ಬರೋಬ್ಬರಿ ಐದು ವರ್ಷ ಪೂರೈಸಿದ್ದು, ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರು ಲಾಬಿ ನಡೆಸಿದ್ದರು. ಲೋಕಸಭಾ ಚುನಾವಣೆಯವರೆಗೂ ಮಾತ್ರ ಡಿ ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ನಿರ್ವಹಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಹಲವು ಘಟಾನುಘಟಿ ನಾಯಕರು ಹೈಕಮಾಂಡ್‌ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ಬಿಟ್ಟು ಕೊಡಲು ಡಿ ಕೆ ಶಿವಕುಮಾರ್‌ ಹಿಂದೇಟು ಹಾಕಿದ್ದು, ಮತ್ತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಶಿವಕುಮಾರ್‌ ಅವರೇ ಮರು ಆಯ್ಕೆಯಾಗುತ್ತಾರಾ ಎಂದು ಕಾದುನೋಡಬೇಕಾಗಿದೆ.

ಇನ್ನು, ಸೋನಿಯಾ ಗಾಂಧಿ ಅವರು ಕರೆ ಮಾಡಿ ಶಿವಕುಮಾರ್ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದರು. ನಾನು ಕಷ್ಟಕಾಲದಲ್ಲಿ ಜವಾಬ್ದಾರಿವಹಿಸಿಕೊಂಡೆ. ನಾವು ಆಗ ಉಪಚುನಾವಣೆಯಲ್ಲಿ ಸೋತಿದ್ದೆವು. ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಅವರೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರು ಮರು ಆಯ್ಕೆ ಮಾಡಿದರು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ನಾವು ಗಮನ ಹರಿಸುತ್ತೇವೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ ಎಂದರು.

ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ನಾವು ಗಮನ ಹರಿಸುತ್ತೇವೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ. ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ ₹4 ಲಕ್ಷ ಪರಿಹಾರ ಸಿಕ್ಕಿದೆ.‌ ಅದೇ ಸರ್ವೇ ನಂಬರ್ ಅಲ್ಲಿ ಕೆಲವರಿಗೆ ₹20 ಲಕ್ಷ ಪರಿಹಾರ ಸಿಕ್ಕಿದ್ದು ತಾರತಮ್ಯವಾಗಿದೆ ಎಂದು ರೈತರು ಕೆಲಸ ಮುಂದುವರೆಸಲು ಬಿಟ್ಟಿರಲಿಲ್ಲ ಎಂದು ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

ಈ ಮೊದಲು ನಾನು, ಒಂದಷ್ಟು ಸಚಿವರು, ಶಾಸಕರು, ಅಧಿಕಾರಿಗಳು ರೈತರ ಬಳಿ ಕೆಲಸ ಮುಂದುವರೆಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದೇ ರೀತಿ ಪರಿಹಾರದ ತಾರತಮ್ಯ ಹೋಗಲಾಡಿಸಲು ಕಾನೂನಿನ ಅಡಿ ಏನು ಮಾಡಬಹುದು ಎಂದು ಚರ್ಚೆ ನಡೆಸಿದೆವು. ಮೂರು- ನಾಲ್ಕು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ತಿಳಿಸಿದರು.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಗ್ಯಾರಂಟಿ ಸಮಿತಿ ನೇಮಕಾತಿ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ನೀಡಿದ್ದೇವೆ. ಇದರಿಂದ ಶಾಸಕರ ಅಧಿಕಾರವನ್ನು ನಾವು ಕಿತ್ತು ಕೊಳ್ಳುವುದಿಲ್ಲ. ಅವರಿಗೆ ಇರುವ ಅಧಿಕಾರ ಇದ್ದೇ ಇರುತ್ತದೆ. ಅನುಷ್ಠಾನ ಸಮಿತಿ ಮೂಲಕ ಫಲಾನುಭವುಗಳನ್ನು ಗುರುತಿಸುವ ಹಾಗೂ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕಾರ್ಯಕರ್ತರ ನೇಮಕಾತಿಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಅನುಷ್ಠಾನ ಸಮಿತಿಗಳ ವಿರುದ್ಧ ಬಿಜೆಪಿ ಹೋರಾಟದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಹೋರಾಟ ಮಾಡುವವರಿಗೆ ಬೇಡ ಎಂದು ಹೇಳಲು ಆಗುವುದಿಲ್ಲ. ಅವರಿಗೂ ಅರಿವಿದೆ, ಏಕೆಂದರೆ ಇದು ರಾಜಕೀಯ ಕಾರ್ಯಕ್ರಮವಲ್ಲ. ಜನರ ಬದುಕಿಗೆ ಇರುವ ಕಾರ್ಯಕ್ರಮ. ಅನುಷ್ಠಾನ ಸಮಿತಿಯವರಿಗೆ ಗೌರವಧನ ಎಂದು ಹೇಳಿ 25- 30 ಸಾವಿರ, ಸಭೆಗೆ ಬಂದರೆ 1 ಸಾವಿರ ಕೊಡಲಾಗುತ್ತಿದೆ. ಇದು ಹೊರತಾಗಿ ಬೇರೆ ಏನಿಲ್ಲ. ಶಾಸಕರಿಗೆ ಯಾವ ಹಕ್ಕು ಇದೆಯೋ ಅದು ಇರುತ್ತದೆ. ಗ್ಯಾರಂಟಿಗಳ ಅನುಷ್ಠಾನ ಚೆನ್ನಾಗಿ ಆಗಲಿ ಎಂದು ಇದನ್ನು ನಮ್ಮ ಸರ್ಕಾರ ಹೊಸದಾಗಿ ಸೃಷ್ಟಿಸಿದ್ದು.‌ ಇದಕ್ಕೆ ಸಹಕಾರ ಕೊಡಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+