DK Shivakumar: ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದ ಡಿ.ಕೆ ಶಿವಕುಮಾರ್!
DK Shivakumar: ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿರುವಾಗಲೇ ಮಹತ್ವದ ಟ್ವೀಟ್ ಮಾಡಿದ್ದು. ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ಕಾರಣಗಳಿಗೆ ಚರ್ಚೆಗೆ ಗ್ರಾಸವಾಗಿದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆ ನಡೆದಿದೆ. 2.5 ವರ್ಷಗಳ ನಂತರ, ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಲ್ಲೇ ಇದ್ದಾರೆ. ಆದರೆ, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ ನಿರಾಕರಿಸುತ್ತಲ್ಲೇ ಇದೆ. ಇದೀಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2.5 ವರ್ಷ ಅಧಿಕಾರ ಅವಧಿಯನ್ನು ಪೂರೈಸಿದ್ದು, ಕಳೆದ ಹಲವು ತಿಂಗಳುಗಳಿಂದ ಚರ್ಚೆ ಆಗುತ್ತಿರುವ ನವೆಂಬರ್ ಕ್ರಾಂತಿ ಚರ್ಚೆಯ ಮುನ್ನೆಲೆಗೆ ಬಂದಿದೆ.

ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದು ಹೇಳುವ ಮೂಲಕ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಮತ್ತು ಮುಂದೆ ಅಧಿಕಾರ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂಬರ್ಥದಲ್ಲಿ ಡಿ.ಕೆ ಶಿವಕುಮಾರ್ ಅವರ ಟ್ವೀಟ್ ಇದೆ.
ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಸಂಘಟನೆಗೆ ದುಡಿದ ಕಾರ್ಯಕರ್ತರಿಗೆ ಅಧಿಕಾರ ಕೊಟ್ಟಿದ್ದೇವೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ಅನೇಕ ನಿಗಮಮಂಡಳಿ ನಿರ್ದೇಶಕರ ಪಟ್ಟಿ ಸಿದ್ಧವಾಗಿದ್ದು, ಮರುಪರಿಶೀಲನೆ ಮಾಡಿಸಿ, ಬ್ಲಾಕ್ ಅಧ್ಯಕ್ಷರಿಗೆ ಅಧಿಕಾರ ಕೊಡಬೇಕಾಗಿದೆ.
ಎನ್ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಿದ್ದೇವೆ. ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಗ್ಯಾರಂಟಿ ಸಮಿತಿಗಳ ಮೂಲಕ ಪ್ರತಿ ಸಮಿತಿಯಲ್ಲಿ 15 ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಇಡೀ ದೇಶದಲ್ಲಿ ಕಾರ್ಯಕರ್ತರಿಗೆ ಈ ರೀತಿ ಅಧಿಕಾರ ನೀಡಿರುವುದು ನಮ್ಮಲ್ಲಿ ಮಾತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಬರಹ ವೈರಲ್ ಆಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications