ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್
ಬಾಗಲಕೋಟೆ, ಮಾರ್ಚ್ 14: ರಾಜ್ಯದ ಮಹತ್ವಾಕಾಂಕ್ಷೆಯ ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ತುಂಗಭದ್ರಾ ನೀರಾವರಿ ಯೋಜನೆಗೆ ಆಂಧ್ರ ಪ್ರದೇಶ ಸರ್ಕಾರ ಒಡ್ಡುತ್ತಿರುವ ಅಡ್ಡಿಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೆರೆಯ ರಾಜ್ಯದ ತಗಾದೆಗೆ ತಿರುಗೇಟು ನೀಡಲು ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಈ ವಿಷಯವಾಗಿ ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, "ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲಾಗುವುದು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಮುಂಬರುವ ಮಂಗಳವಾರ ಸಭೆ ನಡೆಸಲಾಗುವುದು," ಎಂದು ತಿಳಿಸಿದರು.

26,000 ಕೋಟಿ ಮೊತ್ತದ ಕಾಮಗಾರಿ ಆರಂಭ
"ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ," ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿವರಿಸಿದರು.
ತಗಾದೆ ತೆಗೆದ ಆಂಧ್ರ ಸರ್ಕಾರ
ನಾವು ಈಗಲೇ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಮಾಡುತ್ತಿಲ್ಲ. 2010ರಲ್ಲಿ ಆಗಿರುವ ಆದೇಶದ ಅನುಸಾರ ನಮ್ಮ ಪಾಲಿನ ನೀರು ಬಳಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಆಂಧ್ರ ಪ್ರದೇಶ ಸರ್ಕಾರ ತಗಾದೆ ತೆಗೆದಿದೆ. ಜೊತೆಗೆ, ತುಂಗಭದ್ರಾ ಅಣೆಕಟ್ಟೆಯಿಂದ ನಮಗೆ 30 ಟಿಎಂಸಿ ನೀರು ವ್ಯರ್ಥವಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಲು ಆಂಧ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ.
ಕರ್ನಾಟಕದ ಸಂಸದರ ಜೊತೆ ಚರ್ಚೆ ಎಂದ ಡಿಸಿಎಂ
ಈ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ಸಂಸದರ ಜೊತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ನಾನು, ಸಚಿವರಾದ ಹೆಚ್.ಕೆ ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು ಅವರು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications