ಬೆಚ್ಚಿ ಬೀಳಿಸುವಂತಿವೆ ಗೃಹ ಇಲಾಖೆ ಸರ್ಕಾರಕ್ಕೆ ಸಲ್ಲಿಸಿರುವ ವರದಿ!
ಬೆಂಗಳೂರು, ಡಿ. 10: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿದ್ದ ಅವ್ಯವಹಾರಗಳ ಕುರಿತು ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ವರದಿ ತಯಾರಿಸಿ ಇಲಾಖೆಗೆ ಸಲ್ಲಿಸಿದ್ದರು. ಆದರೆ ಆ ವರದಿ ಸೋರಿಕೆಯಾಗಿದ್ದರಿಂದ ತೀವ್ರ ಮುಜುಗುರಕ್ಕೆ ಒಳಗಾಗಿದ್ದ ಆಗಿನ ಸರ್ಕಾರ ಬಂಧಿಖಾನೆ ಇಲಾಖೆಯ ಡಿಐಜಿ ಆಗಿದ್ದ ಡಿ. ರೂಪಾ ಅವರನ್ನು ಬೆಂಗಳೂರು ನಗರದ ರಸ್ತೆ ಸುರಕ್ಷತೆ ಹಾಗೂ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಆ ವರ್ಗಾವಣೆ ರಾಷ್ಟ್ರಮಟ್ಟದಲ್ಲಿಯೂ ತೀವ್ರ ಚರ್ಚೆಗೆ ಈಡಾಗಿತ್ತು.
ಬಳಿಕ ಕಳೆದ ಆಗಷ್ಟ್ ತಿಂಗಳಿನಲ್ಲಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಡಿ. ರೂಪಾ ಅವರು ಆಧಿಕಾರ ವಹಿಸಿಕೊಂಡಾಗ ಜೈಲಿನ ಅವ್ಯವಹಾರಗಳನ್ನು ಸಂಪೂರ್ಣವಾಗಿ ಮಟ್ಟಹಾಕುತ್ತಾರೆ ಎನ್ನಲಾಗಿತ್ತು. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಬಂಧಿಖಾನೆ ಇಲಾಖೆಯಲ್ಲಿ ಸುಧಾರಣೆ ತರಲು ರೂಪಾ ಅವರು ಪ್ರಯತ್ನಿಸಿದ್ದರು. ಹೀಗಾಗಿ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರು ಅಧಿಕಾರ ವಹಿಸಿಕೊಂಡಾಗ ಮಹತ್ವದ ಬದಲಾವಣೆಗಳನ್ನು ನಾಡಿನ ಜನತೆ ನಿರೀಕ್ಷಿಸಿದ್ದರು.
ಅದರಂತೆಯೆ ಇದೀಗ ಡಿ. ರೂಪಾ ಅವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಾಜ್ಯ ಗೃಹ ಇಲಾಖೆಯಿಂದ ಸಲ್ಲಿಸಿರುವ ವರದಿಯಲ್ಲಿ ರಾಜ್ಯದಲ್ಲಿರುವ ಜೈಲುಗಳ ಸ್ಥಿತಿಗತಿಗಳನ್ನು ವಿವರಿಸಿದ್ದಾರೆ.

ಆಂತರಿಕ ವ್ಯವಸ್ಥೆ ವರದಿ
ಬಂಧಿಖಾನೆ ಇಲಾಖೆಯಲ್ಲಿನ ಆಂತರಿಕ ನಿಯಂತ್ರಣ ವ್ಯವಸ್ಥೆಯ ಕುರಿತು ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ವರದಿಯನ್ನು ಕೊಟ್ಟಿದೆ. ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿ. ರೂಪಾ ಅವರು ಕೊಟ್ಟಿರುವ ಆ ಅನುಸರಣಾ ವರದಿಯಲ್ಲಿ ಜೈಲುಗಳಲ್ಲಿನ ಸುರಕ್ಷತೆ ಹಾಗೂ ಭದ್ರತೆಯನ್ನು ವಿವರಿಸಲಾಗಿದ್ದು, ರಾಜ್ಯದಲ್ಲಿರುವ ಪ್ರಮುಖ ಕಾರಾಗೃಹಗಳಲ್ಲಿನ ವ್ಯವಸ್ಥೆಯನ್ನು ವರದಿಯಲ್ಲಿ ಸೇರಿಸಲಾಗಿದೆ.

ತಪ್ಪಿಸಿಕೊಂಡಿರುವ ಬಂಧಿಗಳು
ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಿ. ರೂಪಾ ಅವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಕೊಟ್ಟಿರುವ ವರದಿಯಲ್ಲಿ ಕಳೆದ 2012ರ ಜನವರಿ 1 ರಿಂದ 2017ರ ಜುಲೈ 31ರ ವರೆಗೆ ವಿವಿಧ ಕಾರಾಗೃಹಗಳಿಂದ ಒಟ್ಟು 84 ಆರೋಪಿಗಳು ಪರಾರಿಯಾಗಿದ್ದರು. ಅವರಲ್ಲಿ 53 ಜನರನ್ನು ಮತ್ತೆ ಬಂಧಿಸಲಾಗಿದ್ದು, ಉಳಿದ 31 ಬಂಧಿಗಳನ್ನು ಮತ್ತೆ ಬಂಧಿಸಲಾಗಿಲ್ಲ.
ತಪ್ಪಿಸಿಕೊಂಡಿರುವ 31 ಬಂಧಿಗಳನ್ನು ಮರು ಬಂಧಿಸಲಾಗಿದೆಯೆ ಇಲ್ಲವೇ ಎಂಬ ವರದಿ ಕೊಡುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಇಲಾಖೆ ಸೂಚಿಸಿರುವುದು ವರದಿಯಲ್ಲಿದೆ. ಬಂಧಿಗಳು ತಪ್ಪಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿ ಸೇರಿದಂತೆ ಒಟ್ಟು 88 ಸಿಬ್ಬಂದಿ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ನಿಯಮಾವಳಿಗಳಂತೆ ವಿಚಾರಣೆ ನಡೆಯುತ್ತಿದೆ ಎಂದು ವರದಿಯಲ್ಲಿದೆ.

ಮೊಬೈಲ್ ಜಾಮರ್ ಉನ್ನತೀಕರಣ
ಬೆಂಗಳೂರು, ಮೈಸೂರು, ಧಾರವಾಡ, ಬಳ್ಳಾರಿ ಮತ್ತು ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ವ್ಯವಸ್ಥೆಯನ್ನು ಉನ್ನತೀಕರಣ ಮಾಡಲಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸದ್ಯ 4ಜಿ ನೆಟ್‌ವರ್ಕ್ ಬಳಕೆಯಲ್ಲಿ ಇರುವುದರಿಂದ 3ಜಿ ನೆಟ್‌ವರ್ಕ್ ತಡೆಯಲು ಹಾಕಿರುವ ಮೊಬೈಲ್ ಜಾಮರ್‌ಗಳು ಸರಿಯಾಗಿ ಮೊಬೈಲ್ ನೆಟ್‌ವರ್ಕ್ ನಿಯಂತ್ರಣ ಮಾಡುತ್ತಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರು ಜಿಲ್ಲಾ ಕೇಂದ್ರ ಕಾರಾಗೃಹಗಳಲ್ಲಿನ ಒಟ್ಟು 66 ಮೊಬೈಲ್ ಜಾಮರ್‌ಗಳನ್ನು 3ಜಿ ಯಿಂದ 4ಜಿ ವ್ಯವಸ್ಥೆಗೆ ಉನ್ನತೀಕರಿಸಲು 3 ವರ್ಷಗಳ ನಿರ್ವಹಣೆ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆಗೆ ಕಳುಹಿಸಲಾಗಿದೆ. ಆದರೆ ಕೇಂದ್ರ ಸಚಿವವಾಲಯದಿಂದ ಇನ್ನೂ ಅನುಮತಿ ಸಿಕ್ಕಿಲ್ಲ ಎಂಬುದು ವರದಿಯಲ್ಲಿದೆ.
Recommended Video

ಅಧಿಕಾರಿಗಳ ಕರ್ತವ್ಯಲೋಪ
ಮಾದಕ ವಸ್ತುಗಳು (ಹೆಚ್ಚಾಗಿ ಗಾಂಜಾ), ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಕಾರಾಗೃಹದ ಒಳಗೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿಲ್ಲ. ಕಳೆದ 8 ವರ್ಷಗಳಲ್ಲಿ ಇದರಲ್ಲಿ ವಿಫಲರಾಗಿ ಕರ್ತವ್ಯಲೋಪ ಎಸಗಿದ್ದ 38 ಅಧಿಕಾರಿಗಳಲ್ಲಿ 33 ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ಆದರೆ ಯಾವ ಹಂತದ ಅಧಿಕಾರಿಗಳು ವಿಫಲರಾಗಿದ್ದಾರೆ? ಹಾಗೂ ಯಾವ ಶಿಸ್ತುಕ್ರಮ ಜರುಗಿಸಿಲ್ಲ ಎಂಬುದನ್ನು ಉಲ್ಲೇಖಿಸಲಾಗಿಲ್ಲ. ಹೀಗಾಗಿ ಬಂಧಿಖಾನೆಗಳ ಸುರಕ್ಷೆತೆಗೆ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications