Get Updates
Get notified of breaking news, exclusive insights, and must-see stories!

D.Sudhakar Profile: ಹಿರಿಯೂರು ಕ್ಷೇತ್ರಕ್ಕೆ ಮಂತ್ರಿ ಸ್ಥಾನ: ಡಿ. ಸುಧಾಕರ್ ರಾಜಕೀಯ ಪರಿಚಯ

ಚಿತ್ರದುರ್ಗ, ಮೇ 27: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯೂರು ಕ್ಷೇತ್ರಕ್ಕೆ ಮಂತ್ರಿ ಸ್ಥಾನ ಸಿಕ್ಕಿದೆ. ಇಲ್ಲಿನ ಶಾಸಕ ಡಿ.ಸುಧಾಕರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ. ಸುಧಾಕರ್ ಅವರ ವ್ಯಕ್ತಿ ಪರಿಚಯ ಇಲ್ಲಿದೆ.

ದಿವಂಗತ ಎನ್. ದಯಶರಥಯ್ಯ ಮಗನಾಗಿ, 28/03/1961ರಲ್ಲಿ ಡಿ.ಸುಧಾಕರ್ ಚಳ್ಳಕೆರೆಯಲ್ಲಿ ಜನಿಸಿದರು. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಜನಿಸಿರುವ ಇವರು, ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಬಿಕಾಂ ಪದವಿ ಶಿಕ್ಷಣವನ್ನು ನ್ಯಾಷನಲ್ ಕಾಲೇಜು, ಶಿವಮೊಗ್ಗದಲ್ಲಿ ಮುಗಿಸಿದ್ದಾರೆ.

 D.Sudhakar Profile

ಪದವಿ ಶಿಕ್ಷಣ ಮುಗಿಸಿದ ಬಳಿಕ ಬ್ಯುಸಿನೆಸ್ ಕಡೆ ಗಮನಹರಿಸಿದ್ದರು. ನಂತರ ಶ್ರೀಮತಿ ಹರ್ಷಿಣಿ ಎಂಬುವರೊಂದಿಗೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರಿಗೆ ಒಂದು ಗಂಡು ಮತ್ತು ಒಬ್ಬ ಹೆಣ್ಣು ಮಗಳಿದ್ದಾರೆ. ಇನ್ನು ಇವರ ಚಿಕ್ಕಪ್ಪರಾದ ಎನ್.ಜಯಣ್ಣ ಅವರು ಚಳ್ಳಕೆರೆ ಕ್ಷೇತ್ರದಲ್ಲಿ 1978 ಹಾಗೂ 1989ರಲ್ಲಿ ಎರಡು ಬಾರಿ ಶಾಸಕರಾಗಿದ್ದರು.

ಚಿಕ್ಕಪ್ಪನ ರಾಜಕೀಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಡಿ.ಸುಧಾಕರ್ ರಾಜಕೀಯ ದಾರಿಯನ್ನು ಕಂಡುಕೊಂಡರು. ಡಿ.ಸುಧಾಕರ್‌ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 47,550 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದರು.

ನಂತರ ಚಳ್ಳಕೆರೆ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾದ್ದರಿಂದ 2008ರಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ದಿಢೀರ್‌ ಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 43,078 ಮತಗಳನ್ನು ಪಡೆದು 16,158 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದರು.

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಸುಧಾಕರ್‌

ಈ ಮೂಲಕ ಅವರು ಬಿಜೆಪಿ ಸರ್ಕಾರದಲ್ಲಿ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದರು. ಬದಲಾದ ಸಮಯದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆದರು. ಇನ್ನು 2013ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆಗ ಇವರಿಗೆ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ನಡೆದವು. ಆದರೆ ಅದು ಸಾಧ್ಯವಾಗಲಿಲ್ಲ.

2013ರಲ್ಲಿ ಡಿ.ಸುಧಾಕರ್ ಅವರಿಗೆ ಕಾಂಗ್ರೆಸ್ ಪಕ್ಷ ಬಿ ಫಾರಂ ನೀಡಿತ್ತು. ಜೆಡಿಎಸ್ ಅಭ್ಯರ್ಥಿ ದಿವಂಗತ ಎ.ಕೃಷ್ಣಪ್ಪ ವಿರುದ್ಧ ಕೂದಲೆಳೆ ಅಂತರದಲ್ಲಿ ಅಂದರೆ 1,205 ಮತಗಳನ್ನು ಪಡೆದು, ಮರು ಆಯ್ಕೆಯಾದರು. (71,661ಒಟ್ಟು ಮತಗಳು) ಇದರ ಜೊತೆಗೆ ಚಿತ್ರದುರ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸಹ ಆಯ್ಕೆಯಾದರು.

ಸೋತ ಜಾಗದಲ್ಲೇ ಗೆದ್ದ ಡಿ.ಸುಧಾಕರ್

ಡಿ.ಸುಧಾಕರ್ 2018ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಆದರೆ ಈ ಚುನಾವಣೆಯಲ್ಲಿ 64,858 ಮತಗಳನ್ನು ಪಡೆದು, ಮತದಾರರ ತೀರ್ಪಿಗೆ ಸುಧಾಕರ್ ತಲೆ ಭಾಗಿದರು. ಯಾಕಂದರೆ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸುಮಾರು 12 ಸಾವಿರ ಮತಗಳಿಂದ ಪರಾಭವಗೊಂಡರು. ಇದೀಗ ಮೇ 10 ರಂದು ನಡೆದ 2023ರ ರಾಜ್ಯ ವಿಧಾನಸಭಾ ಚುನಾವಣೆಯ ಮೇ 13 ರಂದು ನಡೆದ ಮತದಾನ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರ ವಿರುದ್ಧ 30,322 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಇದೀಗ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಒದಗಿ ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+