ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಬಿಎಂಪಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್‌ಗೆ

|
Google Oneindia Kannada News

Recommended Video

Karnataka Elections 2018 : ಬಿಬಿಎಂಪಿ ಮಾಜಿ ಮೇಯರ್ ಡಿ ವೆಂಕಟೇಶ ಮೂರ್ತಿ ಕಾಂಗ್ರೆಸ್ ಗೆ | Oneindia Kannada

ಬೆಂಗಳೂರು, ಮಾರ್ಚ್ 19 : ಚುನಾವಣೆ ಹತ್ತಿರವಾಗುತ್ತಿರುವಾಗ ಬೆಂಗಳೂರು ನಗರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ. ಆರ್.ಅಶೋಕ್ ಅವರ ಬೆಂಬಲಿಗ, ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ಬಿಜೆಪಿಯಿಂದ ವೆಂಕಟೇಶಮೂರ್ತಿ ಅಮಾನತುಗೊಂಡಿದ್ದರು. ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಒತ್ತಡದ ಬಳಿಕ ಅವರ ಅಮಾನತನ್ನು ವಾಪಸ್ ಪಡೆಯಲಾಗಿತ್ತು.

ಪದ್ಮನಾಭನಗರ : ಆರ್.ಅಶೋಕ ಸೋಲಿಸಲು ಜೆಡಿಎಸ್, ಕಾಂಗ್ರೆಸ್ ತಂತ್ರ!ಪದ್ಮನಾಭನಗರ : ಆರ್.ಅಶೋಕ ಸೋಲಿಸಲು ಜೆಡಿಎಸ್, ಕಾಂಗ್ರೆಸ್ ತಂತ್ರ!

ಸದ್ಯ, ವೆಂಕಟೇಶಮೂರ್ತಿ ಅವರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಷ ಸೇರುವ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ. ಡಿ.ವೆಂಕಟೇಶಮೂರ್ತಿ ಅವರು ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರ ಬೆಂಬಲಿಗರು ಡಿ.ವೆಂಕಟೇಶಮೂರ್ತಿ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿದ್ದ ಡಿ.ವೆಂಕಟೇಶಮೂರ್ತಿ ಅವರು ಪದ್ಮನಾಭನಗರ ಕ್ಷೇತ್ರದಲ್ಲಿ ಆರ್.ಅಶೋಕ್ ವಿರುದ್ಧವೇ ಸ್ಪರ್ಧಿಸಲಿದ್ದಾರೆಯೇ? ಕಾದು ನೋಡಬೇಕು.

ಆರ್.ಅಶೋಕ್ ಆಪ್ತ ಕಾಂಗ್ರೆಸ್‌ಗೆ

ಆರ್.ಅಶೋಕ್ ಆಪ್ತ ಕಾಂಗ್ರೆಸ್‌ಗೆ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡಿದ್ದ ಬಿಬಿಎಂಪಿಯ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಪಕ್ಷ ಸೇರಿದರೆ ಪದ್ಮನಾಭನಗರ ಕ್ಷೇತ್ರದಿಂದ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪದ್ಮನಾಭನಗರ ಕ್ಷೇತ್ರದ ಹಾಲಿ ಶಾಸಕರು ಆರ್.ಅಶೋಕ. ಒಂದು ವೇಳೆ ವೆಂಕಟೇಶಮೂರ್ತಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದರೆ ಗುರುವಿನ ವಿರುದ್ಧವೂ ಸ್ಪರ್ಧೆ ಮಾಡಿದಂತೆ ಆಗುತ್ತದೆ. ಎಂ.ಶ್ರೀನಿವಾಸ ಅವರು ಸಹ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಇವರು ಆರ್.ಅಶೋಕ ಅವರ ಗುರುಗಳು.

ಸಿದ್ದರಾಮಯ್ಯ ಅವರ ಜೊತೆ ಚರ್ಚೆ

ಸಿದ್ದರಾಮಯ್ಯ ಅವರ ಜೊತೆ ಚರ್ಚೆ

ಡಿ.ವೆಂಕಟೇಶಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷ ಸೇರ್ಪಡೆಗೆ ಒಪ್ಪಿಗೆ ನೀಡಿದ್ದಾರೆ. ಆದರೆ, ಎಂದು ಪಕ್ಷ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.

'ಬಿಜೆಪಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗಿದೆ. ಕಾಂಗ್ರೆಸ್ ಸೇರುವ ಬಗ್ಗೆ ಹಿಂದಿನಿಂದಲೂ ಆಲೋಚನೆ ನಡೆಸುತ್ತಿದ್ದೆ. ಈಗ ಪಕ್ಷ ಸೇರುವ ಕುರಿತು ತೀರ್ಮಾನ ಕೈಗೊಂಡಿದ್ದೇನೆ. ಶೀಘ್ರದಲ್ಲಿಯೇ ಪಕ್ಷಕ್ಕೆ ಸೇರಲಿದ್ದೇನೆ' ಎಂದು ಡಿ.ವೆಂಕಟೇಶಮೂರ್ತಿ ಹೇಳಿದ್ದಾರೆ.

ಬಿಜೆಪಿಯಿಂದ ಅಮಾನತುಗೊಂಡಿದ್ದರು

ಬಿಜೆಪಿಯಿಂದ ಅಮಾನತುಗೊಂಡಿದ್ದರು

ಡಿ.ವೆಂಕಟೇಶಮೂರ್ತಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡಿದ್ದರು. ರಾಯಣ್ಣ ಬ್ರಿಗೇಡ್ ಗೊಂದಲ ತಾರಕಕ್ಕೇ ಏರಿದಾಗ ಡಿ.ವೆಂಕಟೇಶಮೂರ್ತಿ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿತ್ತು. ನಂತರ ಕೆ.ಎಸ್.ಈಶ್ವರಪ್ಪ ಅವರ ಒತ್ತಡದ ಬಳಿಕ ಅದನ್ನು ವಾಪಸ್ ಪಡೆಯಲಾಗಿತ್ತು.

ಬಿಬಿಎಂಪಿಯ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಪದ್ಮನಾಭನಗರದಿಂದಲೇ ಸ್ಪರ್ಧಿಸಲಿದ್ದಾರೆಯೇ? ಕಾದು ನೋಡಬೇಕು. ಕ್ಷೇತ್ರಕ್ಕೆ ವಿ.ಕೆ.ಗೋಪಾಲ್ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಪೈಫೋಟಿ ನಡೆಯುತ್ತಿದೆ.

2013ರಲ್ಲಿ ಸೋತಿದ್ದರು ವೆಂಕಟೇಶಮೂರ್ತಿ

2013ರಲ್ಲಿ ಸೋತಿದ್ದರು ವೆಂಕಟೇಶಮೂರ್ತಿ

ಡಿ.ವೆಂಕಟೇಶಮೂರ್ತಿ ಅವರು 2013ರ ಚುನಾವಣೆಯಲ್ಲಿ ಶಾಂತಿನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 10,930 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

English summary
The Bruhat Bengaluru Mahanagara Palike (BBMP) former Mayor and BJP leader D.Venkatesha Murthy all set to quit BJP. D.Venkatesha Murthy will join Congress and contest for 2018 assembly elections from Padmanabhanagar assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X