KSRTC; ನೌಕರರ ತುಟ್ಟಿಭತ್ಯೆ ಹೆಚ್ಚಳ, ಎಷ್ಟು?, ವಿವರ
ಬೆಂಗಳೂರು, ನವೆಂಬರ್ 16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ನೌಕರರಿಗೆ ಸಿಹಿಸುದ್ದಿ. ರಾಜ್ಯ ಸರ್ಕಾರದ ಆದೇಶದ ಅನ್ವಯ ಸಿಬ್ಬಂದಿಗಳ ತುಟ್ಟಿಭತ್ಯೆಯನ್ನು ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಮುಖ್ಯ ಲೆಕ್ಕಾಧಿಕಾರಿ ಹಾಗೂ ಆ. ಸ. ಕರಾರಸಾ ನಿಗಮ; ಕೇಂದ್ರ ಕಛೇರಿ ಇವರು ಆದೇಶ ಹೊರಡಿಸಿದ್ದಾರೆ. ಈ ಆದೇಶ ದಿನಾಂಕ 01/07/2023ರಿಂದ ತುಟ್ಟಿಭತ್ಯೆ ದರ ಪರಿಷ್ಕರಣೆ ಕುರಿತು ಎಂಬ ವಿಷಯ ಒಳಗೊಂಡಿದೆ. ಸರ್ಕಾರಿ ಆದೇಶ 21/10/2023 ಮತ್ತು ಸಕ್ಷಮ ಪ್ರಾಧಿಕಾರಿಗಳ ಆದೇಶ ದಿನಾಂಕ 15/11/2023 ಉಲ್ಲೇಖ ಮಾಡಲಾಗಿದೆ.

ಎಷ್ಟು ತುಟ್ಟಿಭತ್ಯೆ ಹೆಚ್ಚಳ; ಆದೇಶದಲ್ಲಿ ಕರ್ನಾಟಕ ಸರ್ಕಾರದ ಆದೇಶ ದಿನಾಂಕ 21/10/2023ರಲ್ಲಿ ಸರ್ಕಾರಿ ನೌಕರರಿಗೆ ದಿನಾಂಕ 01/07/2023ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.35 ರಿಂದ ಶೇ.38.75ಕ್ಕೆ ಹೆಚ್ಚಿಸಿ ಆದೇಶಿಸಿರುತ್ತದೆ.
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ಅವರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿರುವ ಪ್ರಯುಕ್ತ ಕೆಳಕಂಡಂತೆ ಕ್ರಮ ಜರುಗಿಸುವುದು ಎಂದು ಹೇಳಿದೆ.
* ನಾಲ್ಕೂ ಸಾರಿಗೆ ನಿಗಮಗಳಲ್ಲಿ ನವಂಬರ್-2023ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ. 35 ರಿಂದ ಶೇ 38.75ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸುವುದು.
* ಕರಾರಸಾ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜುಲೈ-2023ರಿಂದ ಅಕ್ಟೋಬರ್-2023ರ ವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಕುರಿತು ಪ್ರತ್ಯೇಕವಾಗಿ ಆದೇಶಿಸಲಾಗುವುದು.
* ಸಹೋದರ ಸಂಸ್ಥೆಗಳಾದ ಬೆಂಮನಸಾ/ ವಾಕರಸಾ/ ಕಕರಸಾ ಸಂಸ್ಥೆಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸುವುದು.
ಸರ್ಕಾರದ ಆದೇಶದ ವಿವರ; ಕರ್ನಾಟಕ ಸರ್ಕಾರ ಅಕ್ಟೋಬರ್ 21ರಂದು ತುಟ್ಟಿಭತ್ಯೆಯ ದರಗಳ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ (ಉಮಾ.ಕೆ) ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಈ ಕುರಿತು ಆದೇಶ ಹೊರಡಿಸಿದ್ದರು.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 35 ರಿಂದ ಶೇಕಡ 38.75ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿತ್ತು.
ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ' ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ.
2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಸರ್ಕಾರಿ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೈಯಕ್ತಿಕ ವೇತನ. ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಬೆಂಗಳೂರು
ಅವುಗಳು ಸೇರುತ್ತವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿತ್ತು.
ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2023 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 35 ರಿಂದ ಶೇಕಡ 38.75 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿತ್ತು.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ತಿಳಿಸಲಾಗಿತ್ತು.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.
ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2023ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಸ್ಪಷ್ಟಪಡಿಸಿತ್ತು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications