ಯುಜಿಸಿ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗೆ ತುಟ್ಟಿಭತ್ಯೆ ಪರಿಷ್ಕರಣೆ
ಬೆಂಗಳೂರು, ಜೂನ್ 02; ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈಗ ಕರ್ನಾಟಕ ಸರ್ಕಾರದ ನಡಾವಳಿಗಳಲ್ಲಿ 2016ರ ಪರಿಷ್ಕೃತ ಯುಜಿಸಿ/ ಐಸಿಏಆರ್/ ಏಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯನ್ನು ಪರಿಷ್ಕರಿಸಿರುವ ಕುರಿತು ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಈ ಕುರಿತು ಆದೇಶ ಹೊರಡಿಸಿದ್ದಾರೆ.

ಈ ಆದೇಶ 2016ರ ಪರಿಷ್ಕೃತ ಯುಜಿಸಿ/ ಐಸಿಎಆರ್/ ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ಎಂಬ ವಿಷಯ ಒಳಗೊಂಡಿದ್ದು, ಭಾರತ ಸರ್ಕಾರದ ದಿನಾಂಕ 3/4/2023ರ ಅಧಿಕೃತ ಜ್ಞಾಪನ ಪತ್ರ, ಸರ್ಕಾರಿ ಆದೇಶ ದಿನಾಂಕ 31ನೇ ಮೇ 2023 ಉಲ್ಲೇಖಿಸಿದ್ದಾರೆ.
ಆದೇಶದಲ್ಲಿ ಏನಿದೆ?; 2016ರ ಪರಿಷ್ಕೃತ ಯುಜಿಸಿ/ ಐಸಿಎಆರ್/ ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38 ರಿಂದ ಶೇಕಡ 42ಕ್ಕೆ 1ನೇ ಜನವರಿ 2023ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.

ಈ ಆದೇಶದ ಉದ್ದೇಶಗಳಿಗಾಗಿ 'ಮೂಲ ವೇತನ' ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ ಐಸಿಎಆರ್/ ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ವೇತನ ಎಂದು ತಿಳಿಸಲಾಗಿದೆ.
ಯುಜಿಸಿ/ ಐಸಿಎಆರ್/ ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ ಎಂದು ಹೇಳಿದೆ.
ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. ಈ ಆದೇಶದ ಮೇರೆಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು. ಯುಜಿಸಿ/ ಐಸಿಎಆರ್/ ಎಐಸಿಟಿಇ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ ಈ ಆದೇಶಗಳು ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳು ಮತ್ತು ಪಿಂಚಣಿದಾರರಿಗೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು, 2023ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎನ್‌ಜೆಪಿಸಿ ವೇತನ ಶ್ರೇಣಿ; ಉಮಾ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಮತ್ತೊಂದು ಆದೇಶದಲ್ಲಿ 2016ರ ಪರಿಷ್ಕೃತ ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿನ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ಆದೇಶ ಹೊರಡಿಸಿದ್ದಾರೆ.
2016ರ ಪರಿಷ್ಕೃತ ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿನ ನ್ಯಾಯಾಂಗ ಅಧಿಕಾರಿಗಳ ಮತ್ತು 2016ರ ಪರಿಷ್ಕೃತ ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಮತ್ತು ಮೂಲ ಪಿಂಚಣಿಯ ಶೇಕಡ 38 ರಿಂದ ಶೇಕಡ 42ಕ್ಕೆ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿದ್ದಾರೆ.
ಈ ಆದೇಶದ ಉದ್ದೇಶಗಳಿಗಾಗಿ 'ಮೂಲವೇತನ' ಎಂದರೆ ನ್ಯಾಯಾಂಗ ಅಧಿಕಾರಿಯು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಪಡೆಯುವ ವೇತನ. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. ಈ ಆದೇಶದನ್ವಯ ಲಭ್ಯವಾಗುವ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು ಎಂದು ಹೇಳಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications