ಕರ್ನಾಟಕ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಲು ಸಿಎಸ್‌ಗೆ ಪತ್ರ
ಬೆಂಗಳೂರು, ಏಪ್ರಿಲ್ 04; ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು ಎಂದು ಪತ್ರ ಬರೆಯಲಾಗಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ದಿನಾಂಕ ಘೋಷಣೆಯಾದ ತಕ್ಷಣ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್.ಷಡಾಕ್ಷರಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1/1/2023ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ ಎಂದು ಪತ್ರದಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ.

ಕೇಂದ್ರ ಸರ್ಕಾರದ ಆದೇಶದ ದಿನಾಂಕ 7/4/2023 ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ 1/1/2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಸಹ ದಿನಾಂಕ 1/1/2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಡಿಎ ಹೆಚ್ಚಳ; ಮಾರ್ಚ್ 23ರಂದು ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ಡಿಎ ಶೇ 42ಕ್ಕೆ ಏರಿಕೆ ಆದಂತೆ ಆಗಿದೆ. ಈ ಆದೇಶ ಜನವರಿ 2023ರಿಂದಲೇ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ತೀರ್ಮಾನದಿಂದ 47.58 ಲಕ್ಷ ಉದ್ಯೋಗಿಗಳು, 69.76 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು. ಕೇಂದ್ರ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಸರ್ಕಾರ ಜನವರಿಂದಲೇ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಮೂಲಕ ನೌಕರರ ಬೇಡಿಕೆ ಈಡೇರಿಸಿತ್ತು.

ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರಂದು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ್ದರು. ಬಳಿಕ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನೌಕರರ ವೇತನವನ್ನು ಶೇ 17ರಷ್ಟು ಹೆಚ್ಚಳ ಮಾಡಿದ್ದರು.
ಪ್ರತಿಬಾರಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದ ಬಳಿಕ ರಾಜ್ಯದಲ್ಲಿಯೂ ಡಿಎ ಏರಿಕೆಯಾಗುತ್ತದೆ. ಈಗ ಶೇ4 ರಷ್ಟು ತುಟ್ಟಿಭತ್ಯೆಯನ್ನು ಕೇಂದ್ರ ಹೆಚ್ಚಳ ಮಾಡಿರುವ ಕಾರಣ ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳ ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ತೀರ್ಮಾನವನ್ನು ಕೈಗೊಳ್ಳಬೇಕು. ಆದ್ದರಿಂದ ರಾಜ್ಯ ಸರ್ಕಾರಿ ನೌಕರರ ಸಂಘ ಅವರಿಗೆ ಪತ್ರವನ್ನು ಬರೆದಿದೆ. ಈ ಸಂದರ್ಭದಲ್ಲಿ ಡಿಎ ಹೆಚ್ಚಳ ಮಾಡಲು ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಸಹ ಪಡೆಯಬೇಕಾಗಿದೆ.

Click it and Unblock the Notifications