ಬಜೆಟ್ ನಲ್ಲಿ ಸರ್ಕಾರಿ ದಿನಗೂಲಿ ನೌಕರರ ಬೇಡಿಕೆ ಈಡೇರಿಸಲು ಸಿಎಂಗೆ ಮನವಿ

ಬೆಂಗಳೂರು, ಫೆಬ್ರವರಿ 17: ಕರ್ನಾಟಕ ಸರ್ಕಾರಿ ದಿನಗೂಲಿ ನೌಕರರ ಅನೇಕ ಬೇಡಿಕೆಗಳನ್ನು ಈ ಸಾಲಿನ ರಾಜ್ಯ ಬಜೆಟ್ ನಲ್ಲಿ ಈಡೇರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನೌಕರರ ಸಂಘವು ಮನವಿ ಮಾಡಿದೆ.

ಈ ಕುರಿತು ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಕೋಳಿಯವರು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದು, ಮಾರ್ಚ್ 5 ರಂದು ಮಂಡಿಸುವ ಬಜೆಟ್ ನಲ್ಲಿ ಸರ್ಕಾರಿ ದಿನಗೂಲಿ ನೌಕರರ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರವು ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ದಿನಗೂಲಿ ನೌಕರರಿಗೂ ನೀಡಬೇಕೆಂದು ಒತ್ತಾಯಿಸಿದ್ದಾರೆ.

Daily Wagers Request CM Yediyurappa To Fullfill Demands In State Budget

ದಿನಗೂಲಿ ನೌಕರರ ರಾಜ್ಯಾಧ್ಯಕ್ಷ ಹನುಮಂತಪ್ಪ ಕೋಳಿ ಅವರ ನಿಯೋಗವು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Daily Wagers Request CM Yediyurappa To Fullfill Demands In State Budget

ಗೃಹ ಭತ್ಯೆ ಮತ್ತು ತುಟ್ಟಿ ಭತ್ಯೆಯನ್ನು ಶೇ.100 ರಷ್ಟು ನೀಡುವುದು, ವೈದ್ಯಕೀಯ ಸೌಲಭ್ಯ ನೀಡುವುದು ಸೇರಿದಂತೆ ಹತ್ತು ವರ್ಷಗಳ ನಿರಂತರ ಸೇವೆಯನ್ನು ಪರಿಗಣಿಸಿ 10-04-2006 ರಿಂದ ವೇತನ ನಿಗದಿಗೊಳಿಸಿ ವಾರ್ಷಿಕ ವೇತನ ಬಡ್ತಿ ಮಾಡುವಂತೆ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+