ವಿದ್ಯಾರ್ಥಿಗಳಿಗೆ ಶಾಕ್‌: ಇನ್ಮುಂದೆ ಈ ಜಿಲ್ಲೆಗಳ ಶಾಲೆಗಳಲ್ಲಿ ಶನಿವಾರವೂ ಫುಲ್ ಡೇ ಕ್ಲಾಸ್!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದ ಕಾರಣ ಶಾಲಾ-ಕಾಲೇಜುಗಳಿಗೆ ಸತತ ರಜೆಗಳನ್ನ ನೀಡಲಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಹಿಂದುಳಿದಿರುವ ಪಠ್ಯಕ್ರಮವನ್ನ ಪೂರ್ಣಗೊಳಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಶಾಲೆಗಳು, ಅಂದರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೆಪ್ಟೆಂಬರ್ ಎರಡನೇ ವಾರದಿಂದ, ಅಂದರೆ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರದಂದು ಪೂರ್ಣಾವಧಿ ತರಗತಿಗಳನ್ನ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Dakshina Kannada Schools to Work Full Day on Saturdays from Sept 12 to Make Up for Rain Holidays

ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ವಿವಿಧ ತಾಲೂಕುಗಳಲ್ಲಿ 10ಕ್ಕೂ ಹೆಚ್ಚು ದಿನಗಳ ಕಾಲ ಶಾಲೆಗಳಿಗೆ ತುರ್ತು ರಜೆ ಘೋಷಿಸಿತ್ತು. ಈ ಸತತ ರಜೆಗಳಿಂದಾಗಿ ಶಾಲಾ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಭಾರಿ ಹಿಂದೆ ಉಳಿದಿದೆ.

ಇದರಿಂದಾಗಿ ಶಿಕ್ಷಕರಿಗೆ ನಿಗದಿತ ಸಮಯದೊಳಗೆ ಶಾಲಾ ಪಠ್ಯಕ್ರಮ ಮುಗಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳೆರಡರಲ್ಲೂ ಪಠ್ಯ ಬೋಧನೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ, ಈ ಶೈಕ್ಷಣಿಕ ಹಿನ್ನಡೆಯನ್ನ ಸರಿದೂಗಿಸಲು ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶನಿವಾರದ ತರಗತಿಗಳ ಕುರಿತು ಶಿಕ್ಷಣ ಇಲಾಖೆ ಆದೇಶ

ಈ ಶೈಕ್ಷಣಿಕ ನಷ್ಟವನ್ನ ಸರಿದೂಗಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಬರುವ ವಾರಾಂತ್ಯಗಳನ್ನ ಹಾಗೂ ಸಾರ್ವಜನಿಕ ರಜಾದಿನಗಳನ್ನ ಸದ್ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಸಾಮಾನ್ಯವಾಗಿ ಶನಿವಾರದಂದು ಶಾಲೆಗಳು ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸುತ್ತವೆ. ಆದರೆ ನೂತನ ಶಿಕ್ಷಣ ಇಲಾಖೆ ಆದೇಶದ ಪ್ರಕಾರ, ಸೆಪ್ಟೆಂಬರ್ 12 ಅಂದರೆ ಇಂದಿನಿಂದ ಶಾಲಾ ಆಡಳಿತ ಮಂಡಳಿಗಳು ಶನಿವಾರದಂದು ಸಂಪೂರ್ಣ ದಿನದ ಶೈಕ್ಷಣಿಕ ವೇಳಾಪಟ್ಟಿಯನ್ನ ಅನುಸರಿಸಬೇಕು.

ಜೊತೆಗೆ, ಅಗತ್ಯವಿದ್ದರೆ ಉಳಿದಿರುವ ಸಾಮಾನ್ಯ ರಜಾದಿನಗಳನ್ನ ಸಹ ಬಳಸಿಕೊಂಡು ವಿಶೇಷ ತರಗತಿಗಳನ್ನ ಆಯೋಜಿಸುವ ಮೂಲಕ ನಷ್ಟವಾಗಿರುವ ಪಠ್ಯದ ಅವಧಿಯನ್ನ ಸರಿದೂಗಿಸಲು ಸೂಚಿಸಲಾಗಿದೆ.

ಕಡ್ಡಾಯ ದಾಖಲಾತಿ

ಮಂಗಳೂರು ಶಾಲೆಗಳು ಮತ್ತು ಸುತ್ತಮುತ್ತಲಿನ ತಾಲೂಕುಗಳ ಪ್ರತಿಯೊಂದು ಶಾಲಾ ಆಡಳಿತ ಮಂಡಳಿಗೂ ತಮ್ಮದೇ ಆದ ರೀತಿಯಲ್ಲಿ ಈ ವಿಶೇಷ ತರಗತಿಗಳ ವೇಳಾಪಟ್ಟಿಯನ್ನ ರೂಪಿಸಿಕೊಳ್ಳುವ ಸ್ವಾತಂತ್ರ್ಯವನ್ನ ನೀಡಲಾಗಿದೆ. ಆದರೆ, ಈ ರೀತಿ ನಡೆಸಲಾಗುವ ಹೆಚ್ಚುವರಿ ತರಗತಿಗಳ ಸಂಪೂರ್ಣ ದಾಖಲಾತಿ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಲಾಗ್‌ಬುಕ್ ಅನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಚ್ಚರಿಸಿದ್ದಾರೆ. ಇಲಾಖೆಯ ತಪಾಸಣೆಯ ವೇಳೆ ಈ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ.

ಈಗಾಗಲೇ ದಕ್ಷಿಣ ಕನ್ನಡದ ಬಹುತೇಕ ಸರ್ಕಾರಿ ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಶನಿವಾರದಿಂದಲೇ ಹೊಸ ನಿಯಮ ಜಾರಿಗೆ ಬಂದಿದೆ. ಬದಲಾದ ಶಾಲಾ ಸಮಯದ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮುಂಚಿತವಾಗಿಯೇ ಮಾಹಿತಿಯನ್ನ ರವಾನಿಸಲಾಗಿದೆ. ಈ ಮೂಲಕ ಶೈಕ್ಷಣಿಕ ವರ್ಷದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ಉಂಟಾಗದಂತೆ ತಡೆಯಲು ಇಲಾಖೆ ಈ ಮುಂಜಾಗ್ರತಾ ಕ್ರಮವನ್ನ ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+