ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್
ರಾಜ್ಯ ಕಾಂಗ್ರೆಸ್‌ನಲ್ಲಿ ದಲಿತ ನಾಯಕರು ತಮ್ಮ ಬಲ ಪ್ರದರ್ಶನಕ್ಕಾಗಿ ದಲಿತ ಸಮಾವೇಶ ಆಯೋಜಿಸಲು ಉತ್ಸುಕರಾಗಿದ್ದರು. ಈ ಮೂಲಕ ದಲಿತ ಸಿಎಂ ಹಾಗೂ ದಲಿತರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳುವ ಅಂದಾಜಿನಲ್ಲಿದ್ದರು. ಆದರೆ ಈ ದಲಿತ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ವಿಚಾರ ಈಗ ಸಂಚಲನ ಸೃಷ್ಟಿಸಿದೆ.
ಶೋಷಿತರ ಸಮಾವೇಶದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾವು ದಲಿತ ಸಮಾವೇಶ ನಡೆಸಲು ಸಿದ್ಧತೆ ನಡೆಸುತ್ತಿದ್ದೆವು. ಈಗ ಹೈಕಮಾಂಡ್ ಸೂಚನೆ ಮೇರೆಗೆ ಈ ಸಮಾವೇಶವನ್ನು ಮುಂದೂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ನಾಯಕರಿಗೆ ಇದರಿಂದ ನಿರಾಸೆಯಾಗಿದೆ.

ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾವೇಶ ಆಯೋಜಿಸಿದ್ದೆವು. ಆ ಸಮಾವೇಶದಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾದರೂ ಕೆಲವು ಈವರೆಗೆ ಅನುಷ್ಠಾನವೇ ಆಗಿಲ್ಲ. ಇದರ ಬಗ್ಗೆ ಚರ್ಚಿಸಲೆಂದೇ ದಲಿತ ಸಮಾವೇಶಕ್ಕೆ ತಯಾರಿ ನಡೆಸಿದ್ದೆವು. ಆದರೆ, ಸದ್ಯಕ್ಕೆ ಸಮಾವೇಶ ನಡೆಸುವುದು ಬೇಡ ಎಂದು ಹೈಕಮಾಂಡ್ ಹೇಳಿದೆ. ಇದರ ಹಿಂದೆ ರಾಜಕೀಯ ಕಾರಣವೂ ಇದೆ ಎಂದು ಬಾಂಬ್ ಸಿಡಿಸಿದ್ದಾರೆ.
ಸದ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಬೂದಿ ಮುಚ್ಚಿದ ಕೆಂಡದಂತಿದೆ. ಒಂದೆಡೆ ಸಿಎಂ ಬದಲಾವಣೆ ವಿಚಾರದ ಕಿಚ್ಚು ಹೊತ್ತಿಕೊಂಡಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಅತ್ತ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮೇಲೆ ಹಲವರು ಕಣ್ಣಿಟ್ಟಿದ್ದರೆ, ಇತ್ತ ಡಿ.ಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ನಾಯಕರು ಹದ್ದಿನಕಣ್ಣಿಟ್ಟಿದ್ದಾರೆ.

ಮತ್ತೊಂದೆಡೆ ಈ ಎರಡು ಕುರ್ಚಿಗಳಿಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದ್ದು, ದಲಿತ ನಾಯಕರು ಕೂಡ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಲವು ವರ್ಷಗಳಿಂದ ಈಡೇರದ ದಲಿತ ಸಿಎಂ ಕನಸನ್ನು ಸಾಕಾರಗೊಳಿಸಲು ತುದಿಗಾಗಲಲ್ಲಿ ನಿಂತಿದ್ದಾರೆ. ಇದಕ್ಕಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ದಲಿತ ನಾಯಕರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಯೂ ಬಂದಿದೆ.
ರಾಜ್ಯದಲ್ಲಿ ದಲಿತ ಸಮುದಾಯದ ನಾಯಕರಿಗೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಕೂಡ ಇತ್ತೀಚೆಗೆ ದೆಹಲಿಗೆ ತೆರಳಿ, ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅಲ್ಲದೆ ಹೈಕಮಾಂಡ್ ಸೂಚಿಸಿದರೆ ನಾನು ನನ್ನ ಸಚಿವ ಸ್ಥಾನದಿಂದ ಕೆಳಗಿಳಿದು ಕೆಪಿಸಿಸಿ ಅಧ್ಯಕ್ಷನಾಗುವೆ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಲೋಕಸಭೆ ಚುನಾವಣೆವರೆಗೆ ಮಾತ್ರವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಹೇಳಿತ್ತು. ಆದರೆ ಈಗಲೂ ಯಾವುದೇ ಬದಲಾವಣೆಯಾಗಿಲ್ಲ. ನಾವು ಡಿಕೆ ಶಿವಕುಮಾರ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೋರುತ್ತಿಲ್ಲ. ಹೈಕಮಾಂಡ್ ಈ ಗೊಂದಲವನ್ನು ಪರಿಹರಿಸಬೇಕು ಎಂದು ಪರೋಕ್ಷವಾಗಿ ರಾಜಣ್ಣ ಹೇಳಿದ್ದರು. ಅಲ್ಲದೆ ನಾವು ದಲಿತ ಸಮಾವೇಶ ನಡೆಸಲು ಹೈಕಮಾಂಡ್‌ಗೆ ತಿಳಿಸಿದ್ದೇವೆ. ಅವರನ್ನೂ ಈ ಸಮಾವೇಶಕ್ಕೆ ಆಹ್ವಾನಿಸುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ದಿಢೀರನೆ ದಲಿತ ಸಮಾವೇಶಕ್ಕೆ ಹೈಕಮಾಂಡ್ ಬ್ರೇಕ್ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications