ಬೈಕ್ ಹಿಂದಿಕ್ಕಿದ್ದಕ್ಕೆ ಮರಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು: ಕೋಲಾರದಲ್ಲಿ ದಲಿತ ಯುವಕ ಆತ್ಮಹತ್ಯೆ
ಬೆಂಗಳೂರು, ಡಿಸೆಂಬರ್ 02: ಬೈಕ್ ಹಿಂದಿಕ್ಕಿದ್ದಾನೆ ಎಂಬ ಕಾರಣಕ್ಕೆ ದಲಿತ ಯುವಕನೊಬ್ಬನನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿದ ಯುವಕರು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ನಡೆದಿದೆ. ದುರಂತವೆಂದರೆ, ಅವಮಾನಕ್ಕೊಳಗಾದ ಪರಿಶಿಷ್ಟ ಜಾತಿಗೆ ಸೇರಿದ ಯುವಕ ಬೇವ ಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆರೋಪಿಗಳು ದಲಿತ ಯುವಕನನ್ನು ಥಳಿಸಿದ್ದಲ್ಲದೇ, ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ..
ಆತ್ಮಹತ್ಯೆಗೆ ಶರಣಾದ ಯುವಕ ಬೇವಹಳ್ಳಿಯ ಉದಯ್ ಕಿರಣ್ ಎಂದು ತಿಳಿದುಬಂದಿದೆ. ಆತನನ್ನು ಮರಕ್ಕೆ ಕಟ್ಟಿ ಥಳಿಸಿದ ಆರೋಪಿಗಳನ್ನು ಸವರ್ಣೀಯ ಜಾತಿಗೆ (ಒಕ್ಕಲಿಗ ಸಮುದಾಯ) ಸೇರಿದವರೆಂದು ಗೊತ್ತಾಗಿದೆ. ಆರೋಪಿಗಳಾದ ಗೋಪಾಲಕೃಷ್ಣಪ್ಪ, ಶಿವರಾಜ್, ರಾಜು ಹಾಗೂ ಮುನಿವೆಂಕಟಪ್ಪ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಉದಯ್ ಕಿರಣ್ ಸೋದರ ಮಾವ ಬಿ.ಎಚ್.ನಾಗರಾಜ್ ಎಂಬುವವರು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳೆಲ್ಲರೂ ತಲೆಮರೆಸಿಕೊಂಡಿದ್ದು, ಅವರಿಗೆ ತೀವ್ರ ಶೋಧ ನಡೆಸಲಾಗುತ್ತಿದೆ.
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಆರೋಪಿಗಳನ್ನು ಅತಿ ಶೀಘ್ರದಲ್ಲೇ ಬಂಧಿಸಲಾಗುವುದು' ಎಂದು ನಂಗಲಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರದೀಪ್ ಸಿಂಗ್ ತಿಳಿಸಿದ್ದಾರೆ.

ದಲಿತರು ಬೈಕನ್ನೂ ಓಡಿಸದಿರುವ ಸ್ಥಿತಿ ನಿರ್ಮಾಣ
ಪ್ರಕರಣದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಬಿಜೆಪಿ ಆಡಳಿತದಲ್ಲಿ ದಲಿತರು ಬೈಕನ್ನೂ ಓಡಿಸದಿರುವ ಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ. ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಗೆ ಸಾಕ್ಷಿ. ಬಿಜೆಪಿಯ ಯಾವೊಬ್ಬ ನಾಯಕನೂ ದೌರ್ಜನ್ಯಗಳ ಬಗ್ಗೆ ತುಟಿ ಬಿಚ್ಚದಿರುವುದೇಕೆ' ಎಂದು ಪ್ರಶ್ನಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications