ಕಾಂಗ್ರೆಸ್ ಪಕ್ಷದಲ್ಲಿ ದಲಿತರು ಮುಖ್ಯಮಂತ್ರಿ ಆಗುವ ಅವಕಾಶವಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು,ಡಿಸೆಂಬರ್ 9: ಕಾಂಗ್ರೆಸ್ ಪಕ್ಷದಲ್ಲಿ ದಲಿತರು ಮುಖ್ಯಮಂತ್ರಿ ಆಗುವ ಅವಕಾಶವಿದೆ. ಅವರಿಗೆ ಅರ್ಹತೆ ಹಾಗೂ ಹಿರಿತನ ಎರಡೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಈ ಕುರಿತು ನಗರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಲಿತರು ಸಿಎಂ ಯಾಕೆ ಆಗಬಾರದು? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ನಾನು ಬೇರೆಯವರಂತೆ ಮುಸಲ್ಮಾನರನ್ನು ಮುಖ್ಯಮಂತ್ರಿ ಮಾಡುತ್ತೇನೆ, ದಲಿತರನ್ನು ಮಾಡುತ್ತೇನೆ ಎಂದು ಹೇಳುವುದಿಲ್ಲ.ಕಾಂಗ್ರೆಸ್ ಪಕ್ಷದಲ್ಲಿ ದಲಿತರು ಮುಖ್ಯಮಂತ್ರಿ ಆಗುವ ಅವಕಾಶವಿದೆ. ಅವರು ಪಕ್ಷಕ್ಕೆ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ನಮ್ಮ ಮನೆ ಆಸ್ತಿ ಅಲ್ಲ. ಇದು ಎಲ್ಲ ವರ್ಗದವರಿಗೂ ಸೇರಿರುವ ಪಕ್ಷ. ಇದೇ ನಮ್ಮ ಪಕ್ಷದ ಶಕ್ತಿ. ವೀರಪ್ಪ ಮೋಯ್ಲಿ, ಧರಂ ಸಿಂಗ್, ಬಂಗಾರಪ್ಪನವರ ಸಮಾಜ ಎಷ್ಟು ಸಂಖ್ಯೆಯಲ್ಲಿತ್ತು? ಹಿಂದುಳಿದ ವರ್ಗದ ಸಮುದಾಯದವರು ಮುಖ್ಯಮಂತ್ರಿಗಳಾಗಿಲ್ಲವೇ? ಗುಂಡೂರಾವ್ ಅವರು ಆಗಿಲ್ಲವೇ? ನಮ್ಮಲ್ಲಿ ಅನೇಕ ಸಮರ್ಥರಿದ್ದಾರೆ. ರಂಗನಾಥ್ ಅವರಿಂದ ಹಿಡಿದು ಮಲ್ಲಿಕಾರ್ಜುನ ಖರ್ಗೆ ಅವರು, ಪರಮೇಶ್ವರ್ ಅವರು ನಮ್ಮ ಪಕ್ಷವನ್ನು ಕಷ್ಟದ ಸಮಯದಲ್ಲಿ ಮುನ್ನಡೆಸಿಕೊಂಡು ಬಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಭೇಟಿ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ನಾನು ಹಾಗೂ ವಿಶ್ವನಾಥ್ ಇಬ್ಬರೂ ಶ್ರೀನಿವಾಸ್ ಪ್ರಸಾದ್ ಅವರ ಕೈಕೆಳಗೆ ಯೂತ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡಿದ್ದೇವೆ. ಆಗಿನಿಂದಲೂ ನಾವು ಹಲವು ಸರ್ಕಾರಗಳಲ್ಲಿ ಸಚಿವರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರಿಗೆ ಸಾಕಷ್ಟು ಅನುಭವ, ಆಲೋಚನೆಗಳಿದ್ದು, ಪಕ್ಷದ ಪ್ರಣಾಳಿಕೆಯಲ್ಲಿ ರಾಜ್ಯದ ಹಿತಕ್ಕಾಗಿ ಏನೆಲ್ಲಾ ಅಗತ್ಯವಿದೆ ಎಂದು ಚರ್ಚೆ ಮಾಡಿದ್ದೇವೆ. ಆತ್ಮೀಯತೆ ಮೇರೆಗೆ ನನ್ನನ್ನು ಭೇಟಿ ಮಾಡಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ವಿಶ್ವನಾಥ್ ಅವರು ಶಿಕ್ಷಣ ಸಚಿವರಾಗಿದ್ದಾಗ ಮೊದಲು ಹೈದರಾಬಾದ್ ಕರ್ನಾಟಕ ಭಾಗದ ಶಾಲೆಗಳಲ್ಲಿ ಜಾರಿಗೆ ತಂದಿದ್ದರು. ರಾಜ್ಯದ ಹಿತಕ್ಕಾಗಿ ಚರ್ಚೆ ಮಾಡಿದ್ದೇವೆ. ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ ಎಂದು ತಿಳಿಸಿದರು.

Dalits in Congress have a chance to become Chief Minister Says DK Shivakumar

ಬಿಜೆಪಿಯವರು ಅವರನ್ನು ಬಿಟ್ಟುಕೊಟ್ಟಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಗೊತ್ತಿಲ್ಲ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಅವರ ಪಕ್ಷದ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ನನ್ನ ಪಕ್ಷದ ವಿಚಾರದ ಬಗ್ಗೆ ಮಾತ್ರ ಗಮನಹರಿಸುತ್ತೇನೆ ಎಂದು ಹೇಳಿದರು.

ವಿಶ್ವನಾಥ್ ಅವರು ತಮ್ಮ ಆಪ್ತರೊಂದಿಗೆ ಮತ್ತೆ ಕಾಂಗ್ರೆಸ್ ಸೇರುವ ಪ್ರಯತ್ನದಲ್ಲಿದ್ದಾರೆಯೇ ಎಂಬ ವಿಚಾರವಾಗಿ ಮಾತನಾಡಿ, ನಿಮ್ಮ ಊಹಾಪೋಹಗಳು ನಮಗೆ ಬೇಡ. ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ. ಮಸ್ಕಿ, ಹೊಸಕೋಟೆಯಲ್ಲಿ ಪಕ್ಷ ಬಿಟ್ಟು ಹೋದವರ ಜಾಗಕ್ಕೆ ಬೇರೆಯವರು ಬಂದಿದ್ದಾರೆ. ಹೀಗೆ ಒಬ್ಬರು ಖಾಲಿಯಾದರೆ ಆ ಸ್ಥಾನಕ್ಕೆ ಬೇರೆಯವರು ಬರುತ್ತಾರೆ. ವಿ.ಎಸ್ ಪಾಟೀಲ್, ಯು.ಬಿ ಬಣಕಾರ್ ಅವರು ಪಕ್ಷಕ್ಕೆ ಸೇರಿದ್ದಾರೆ. ಜೆಡಿಎಸ್ ನಿಂದ ಸೋತವರು ಅರ್ಜಿ ಹಾಕಿದ್ದಾರೆ. ರಾಜಕೀಯ ನಿಂತ ನೀರಲ್ಲ. ಏನೂಬೇಕಾದರೂ ಸಾಧ್ಯವಾಗಬಹುದು ಎಂದರು.

ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವುದು ಪಕ್ಷಕ್ಕೆ ಹಿನ್ನಡೆಯಾಗುವುದೇ ಎಂಬ ಬಗ್ಗೆ ಮಾತನಾಡಿ, ಆ ರೀತಿ ಆಗುವುದಿಲ್ಲ. ಎಲ್ಲರೂ ಮತದಾರರ ಪಟ್ಟಿ ಪರಿಶೀಲಿಸುತ್ತಿದ್ದಾರೆ. ನಾವು ಈ ವಿಚಾರವಾಗಿ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದರು.

Dalits in Congress have a chance to become Chief Minister Says DK Shivakumar

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ರಾಜ್ಯದ ಮೇಲೆ ಪರಿಣಾಮ ಬೀರುವುದೇ ಎಂಬ ಪ್ರಶ್ನೆಗೆ, 'ನಾವು ಗುಜರಾತಿನಲ್ಲಿ ಹೆಚ್ಚಿನ ಕ್ಷೇತ್ರಗಳ ನಿರೀಕ್ಷೆ ಇಟ್ಟುಕೊಂಡಿದ್ದೆವು. ಅಲ್ಲಿಯೂ ಆಪರೇಶನ್ ಕಮಲ ಮಾಡಿ ಚುನಾವಣೆ ಮಾಡಿದ್ದರು. ಹಿಮಾಚಲ ಪ್ರದೇಶ ಚುನಾವಣೆಯು ಭ್ರಷ್ಟಾಚಾರ ಹೆಚ್ಚು ದಿನ ನಡೆಯುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ನಮ್ಮ ನಾಯಕರೆಲ್ಲರೂ ಅಲ್ಲಿ ಉತ್ತಮ ಪ್ರಚಾರ ಮಾಡಿದ್ದಾರೆ. ಅಲ್ಲಿನ ಮತದಾರರು ಒಬ್ಬೊಬ್ಬರಿಗೆ ಒಂದೊಂದು ಬಾರಿ ಅವಕಾಶ ನೀಡುತ್ತಾ ಬಂದಿದ್ದಾರೆ. ರಾಜ್ಯದಲ್ಲಿಯೂ ಅದು ಮರುಕಳಿಸಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ' ಎಂದು ತಿಳಿಸಿದರು.

ಬಂಡವಾಳ ಹೂಡಿಕೆ ವಿಚಾರ ಪ್ರಸ್ತಾಪಿಸಿದಾಗ, 'ಅನಿವಾಸಿ ಕನ್ನಡಿಗರಿಗೆ ಉತ್ತಮ ಆಡಳಿತದ ಭರವಸೆ ನೀಡಿದ್ದು, ಅವರು ಸಂಪಾದನೆ ಹಣವನ್ನು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಮನವಿ ಮಾಡಿದ್ದೇನೆ. ಸರ್ಕಾರದ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಮಂಗಳೂರು, ಉಡುಪಿ ಭಾಗದಲ್ಲಿ ಎಷ್ಟು ಹೂಡಿಕೆಯಾಗಿದೆ ಎಂಬ ಪಟ್ಟಿಯನ್ನು ಸಚಿವ ನಿರಾಣಿ ಅವರು ನೀಡಲಿ ಎಂದು ಬೊಮ್ಮಾಯಿ ಅವರು ಸೂಚಿಸಲಿ' ಎಂದು ತಿಳಿಸಿದರು.

ಹಿಮಾಚಲ ಪ್ರದೇಶದಲ್ಲಿ ಆಪರೇಷನ್ ಕಮಲ ಮಾಡುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆಗೆ, 'ಅವರು ಪ್ರಯತ್ನಿಸಲಿ, ಅವರಿಗೆ ಶುಭಕೋರುತ್ತೇನೆ' ಎಂದರು.

Dalits in Congress have a chance to become Chief Minister Says DK Shivakumar

ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ತಿಂಗಳಿಗೆ 2 ಬಾರಿ ಇಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದಿನ ನಿತ್ಯ ಇಲ್ಲೇ ಪ್ರಚಾರ ಮಾಡಲಿ. ಕೇವಲ 2 ದಿನ ಯಾಕೆ. ಅವರು ತಾರಾ ಪ್ರಚಾರಕರಾಗಿದ್ದು, ಇಲ್ಲೇ ವಾಸ್ತವ್ಯ ಹೂಡಲಿ. ಅವರು ಪ್ರಧಾನಮಂತ್ರಿಗಳಾಗಿದ್ದು, ಅವರ ಸ್ಥಾನಕ್ಕೆ ನೀಡಬೇಕಾದ ಗೌರವ ನೀಡೋಣ. ಕಳೆದ ಬಾರಿ 10% ಸರ್ಕಾರ ಎಂದು ಹೇಳಿದ್ದರು, ಈಗ ಅವರ ಸರ್ಕಾರ 40% ಆಗಿದೆ' ಎಂದು ಹೇಳಿದರು.

ಗುಬ್ಬಿ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದರೆ ಬಂಡಾಯ ನಿಲ್ಲುವ ಹೇಳಿಕೆ ವಿಚಾರವಾಗಿ ಮಾತನಾಡಿ, ಪಕ್ಷಕ್ಕೆ ಅನುಕೂಲ ಆಗುವ ರೀತಿ ನಾವು ಟಿಕೆಟ್ ನೀಡುತ್ತೇವೆ. ಯಾರು ಯಾವ ಬಂಡಾಯ ಬೇಕಾದರೂ ಏಳಲಿ. ನಾವು ಪ್ರತಿಯೊಬ್ಬರ ಅರ್ಹತೆ ಮೇಲೆ ನಿರ್ಧರಿಸುತ್ತೇವೆ' ಎಂದರು.

ಉದಯಪುರ ನಿರ್ಣಯದಂತೆ ಈ ಬಾರಿ ಹೊಸಬರಿಗೆ ಆದ್ಯತೆ ನೀಡಲಾಗುವುದೇ ಎಂಬ ಪ್ರಶ್ನೆಗೆ, ಮಾತನಾಡಿ, ಮಲ್ಲಿಕಾರ್ಜುನ್ ಖರ್ಗೆ ಅವರು ಕೂಡ ಹೊಸಬರಿಗೆ ಆದ್ಯತೆ ನೀಡುವ ವಿಚಾರ ಹೊಂದಿದ್ದು, ಅವರು ಆರಂಭದ ದಿನಗಳಲ್ಲೇ ಈ ನಿರ್ಣಯದ ಬಗ್ಗೆ ದೇಶದ ಜನರಿಗೆ ತಿಳಿಸಿದ್ದಾರೆ ಎಂದರು.

ಹಿರಿಯರು ಹಾಗೂ ಕುಟುಂಬ ರಾಜಕಾರಣದಲ್ಲಿ ಬದಲಾವಣೆ ಇದೆಯೇ ಎಂಬ ಪ್ರಶ್ನೆಗೆ, 'ನಮ್ಮ ರಾಜಕೀಯ ತಂತ್ರಗಳನ್ನು ಒಂದೇ ದಿನಗಳಲ್ಲಿ ಹೇಳಲು ಸಾಧ್ಯವಿಲ್ಲ' ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಅವರು ಕಷ್ಟಪಡುತ್ತಿದ್ದು, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂಬ ಪರಮೇಶ್ವರ್ ಅವರ ಹೇಳಿಕೆ ಕುರಿತು ಮಾತನಾಡಿ, ದಿನದಲ್ಲಿ ಕೇವಲ 24 ಗಂಟೆ ಮಾತ್ರ ಇದೆ. ಇನ್ನು ಹೆಚ್ಚಾಗಿದ್ದರೆ ಇನ್ನು ಹೆಚ್ಚಾಗಿ ದುಡಿಯಬಹುದಾಗಿತ್ತು. ನಮ್ಮ ಮುಂದಿರುವ ಸವಾಲಿನ ಬಗ್ಗೆ ಅವರಿಗೂ ಗೊತ್ತಿದೆ. ಎಲ್ಲವೂ ಸುಲಭವಾಗಿ ಸಿಗುವುದಿಲ್ಲ. ಬಿಜೆಪಿ ಅವರದು ಡಬಲ್ ಇಂಜಿನ್ ಸರ್ಕಾರ, ಅವರು ಸಾವಿಧಾನಿಕ ಸಂಸ್ಥೆಗಳು, ಸರ್ಕಾರಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು, ಪೊಲೀಸ್ ಅಧಿಕಾರಿಗಳು, ರೌಡಿಗಳು ಹೀಗೆ ಅನೇಕರನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಜವಾಬ್ದಾರಿ ಕಂಡು ಪರಮೇಶ್ವರ್ ಅವರು ಅನುಕಂಪದಿಂದ ಈ ರೀತಿ ಹೇಳಿದ್ದಾರೆ. ಇಲ್ಲಿ ನಾವು ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗಬೇಕು. ನಾವು ಒಬ್ಬರೆ ಹೋಗುವುದಾದರೆ ವೇಗವಾಗಿ ಹೋಗಬಹುದು, ನಾವು ದೂರದವರೆಗೂ ಹೋಗಬೇಕಾದರೆ ನಾವು ಎಲ್ಲರ ಜತೆಗೂಡಿ ಸಾಗಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ' ಎಂದರು.

ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹೇಗೆ ನಿಭಾಯಿಸುತ್ತೀರಿ ಎಂಬ ಪ್ರಶ್ನೆಗೆ, 'ಚಿಕ್ಕಮಗಳೂರಿನಲ್ಲಿ ಹೋಗಿ ಎಲ್ಲರ ಜತೆ ಮಾತನಾಡಿದ್ದೇನೆ. ಪಕ್ಷ ಇದ್ದರಷ್ಟೇ ಅಧಿಕಾರ ಅನುಭವಿಸಬಹುದು. ಪಕ್ಷ ಅಧಿಕಾರಕ್ಕೆ ಬಂದರೆ ನಾವು ಅಧಿಕಾರ ಅನುಭವಿಸಬಹುದು. 350ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ಅಧಿಕಾರ ಇದೆ. 75 ಪರಿಷತ್ ಸ್ಥಾನ, 16 ರಾಜ್ಯಸಭಾ ಸ್ಥಾನಗಳಿದ್ದು, ಅರ್ಹತೆಗೆ ತಕ್ಕಂತೆ ಎಲ್ಲರಿಗೂ ನಾವು ಅಧಿಕಾರ ನೀಡುತ್ತೇವೆ. ನಮ್ಮ ಪಕ್ಷದಲ್ಲಿ ಶಾಸಕರಾಗಬೇಕು ಎಂದು ಬಹಳ ಹುರುಪಿನಿಂದ 1350 ಜನ ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ದಟ್ಟವಾಗಿದೆ' ಎಂದರು.

ಅನೇಕ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಲ್ಲ, ಪಕ್ಷ ಬಿಟ್ಟು ಹೋಗಿರುವವರೇ ಮತ್ತೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಲವು ಕ್ಷೇತ್ರಗಳಲ್ಲಿ ಅಚ್ಚರಿ ಕಾದಿವೆ. ಕೇವಲ ವಲಸಿಗರ ಬಗ್ಗೆ ಯಾಕೆ ಆಲೋಚಿಸುತ್ತೀರಿ? ಪಾಟೀಲ್, ಯು.ಬಿ ಬಣಕಾರ್, ಮಧುಬಂಗಾರಪ್ಪ, ಶರತ್ ಬಚ್ಚೇಗೌಡ ಅವರು ವಲಸಿಗರೇ?' ಎಂದು ಕೇಳಿದರು.

ಚಿತ್ರದುರ್ಗದಲ್ಲಿ ದಲಿತರ ಸಮಾವೇಶ ನಡೆಯುತ್ತಿದ್ದು, ದಲಿತ ಸಿಎಂ ಬಗ್ಗೆ ಚರ್ಚೆಯಾಗುತ್ತಿರುವ ಬಗ್ಗೆ ಮಾತನಾಡಿ, ಯಾಕೆ ಆಗಬಾರದು? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ನಾನು ಬೇರೆಯವರಂತೆ ಮುಸಲ್ಮಾನರನ್ನು ಮುಖ್ಯಮಂತ್ರಿ ಮಾಡುತ್ತೇನೆ, ದಲಿತರನ್ನು ಮಾಡುತ್ತೇನೆ ಎಂದು ಹೇಳುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ದಲಿತರು ಮುಖ್ಯಮಂತ್ರಿ ಆಗುವ ಅವಕಾಶವಿದೆ. ಅವರಿಗೆ ಅರ್ಹತೆ ಹಾಗೂ ಹಿರಿತನ ಎರಡೂ ಇದೆ. ಅವರು ಪಕ್ಷಕ್ಕೆ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ನಮ್ಮ ಮನೆ ಆಸ್ತಿ ಅಲ್ಲ. ಇದು ಎಲ್ಲ ವರ್ಗದವರಿಗೂ ಸೇರಿರುವ ಪಕ್ಷ. ಇದೇ ನಮ್ಮ ಪಕ್ಷದ ಶಕ್ತಿ. ವೀರಪ್ಪ ಮೋಯ್ಲಿ, ಧರಂ ಸಿಂಗ್, ಬಂಗಾರಪ್ಪನವರ ಸಮಾಜ ಎಷ್ಟು ಸಂಖ್ಯೆಯಲ್ಲಿತ್ತು? ಹಿಂದುಳಿದ ವರ್ಗದ ಸಮುದಾಯದವರು ಮುಖ್ಯಮಂತ್ರಿಗಳಾಗಿಲ್ಲವೇ? ಗುಂಡೂರಾವ್ ಅವರು ಆಗಿಲ್ಲವೇ? ನಮ್ಮಲ್ಲಿ ಅನೇಕ ಸಮರ್ಥರಿದ್ದಾರೆ. ರಂಗನಾಥ್ ಅವರಿಂದ ಹಿಡಿದು ಮಲ್ಲಿಕಾರ್ಜುನ ಖರ್ಗೆ ಅವರು, ಪರಮೇಶ್ವರ್ ಅವರು ನಮ್ಮ ಪಕ್ಷವನ್ನು ಕಷ್ಟದ ಸಮಯದಲ್ಲಿ ಮುನ್ನಡೆಸಿಕೊಂಡು ಬಂದಿದ್ದಾರೆ.

ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದೇವೆ. ಅವರು ದಲಿತರು ಎಂಬುದಕ್ಕಿಂತ ಅವರು ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಎಂದು ಈ ಸ್ಥಾನ ಕೊಟ್ಟಿದೆ. 371ಜೆ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದ್ದು ಖರ್ಗೆ ಅವರ ಸಾಧನೆಗೆ ಸಾಕ್ಷಿ. ಇದು ಕೇವಲ ದಲಿತರಿಗೆ ಮಾತ್ರವಲ್ಲ, ಎಲ್ಲ ವರ್ಗದವರಿಗೂ ನೆರವಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಬೇರೆ ಪಕ್ಷಗಳಲ್ಲಿ ಇಂತಹ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+