ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ದಲಿತ ಸಿಎಂ ಚರ್ಚೆ ಹುಟ್ಟುಹಾಕಿದ ಸಂಘಟನೆಗಳು

|
Google Oneindia Kannada News

ಬೆಂಗಳೂರು, ಫೆ. 24 : ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದ ಸಂಘಟನೆಗಳು ಜನಾಂದೋಲನ ನಡೆಸಲು ತೀರ್ಮಾನಿಸಿವೆ. ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಂಡಿವೆ.

ದಲಿತರನ್ನು ಸಿಎಂ ಮಾಡುವ ವಿಚಾರ ಅಪ್ರಸ್ತುತ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ಸಿಎಂ ಸ್ಥಾನದ ಬೇಡಿಕೆ ಇಟ್ಟಿದ್ದ ದಲಿತ ಸಂಘಟನೆಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನಾಂದೋಲನ ನಡೆಸಲು ತೀರ್ಮಾನಿಸಿವೆ. [ದಲಿತ ಸಿಎಂ, ಚರ್ಚೆಗೆ ತೆರೆ ಎಳೆದ ದಿಗ್ವಿಜಯ್]

Chief Minister

ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಿದ್ದ ದಲಿತ ಸಂಘಟನೆಗಳ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಂಗಳವಾರ ಬಳ್ಳಾರಿಯಲ್ಲಿ ಜನಾಂದೋಲನಕ್ಕೆ ಚಾಲನೆ ನೀಡಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಆಂದೋಲನ ನಡೆಸಿ, ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ. [ದಲಿತರಿಗೆ ಪಟ್ಟ, ಕಾಂಗ್ರೆಸ್ ನಾಯಕರು ಹೇಳುವುದೇನು?]

ದೆಹಲಿಗೆ ನಿಯೋಗ : ಕರ್ನಾಟಕದಲ್ಲಿ ಜನಾಂದೋಲನ ನಡೆಸುವ ದಲಿತ ಸಂಘಟನೆಗಳು ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ. ಸಂಘಟನೆಗಳ ಮುಖಂಡರ ನಿಯೋಗ ಇದಕ್ಕಾಗಿ ದೆಹಲಿಗೆ ತೆರಳಲಿದೆ.

ದಲಿತ ಸಿಎಂ ಚರ್ಚೆ ಮುಗಿದ ಅಧ್ಯಾಯ : ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಚರ್ಚೆ ಮುಗಿದ ಅಧ್ಯಾಯ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರು ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು.

English summary
Dalits organizations in Karnataka decided to begins campaign in all districts to demands for Chief Minister post for Dlit leader. Campaign will start form Ballari form Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X