ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸಿಎಂ ಹುದ್ದೆ ಬೇಕೆ?, ಸ್ವಲ್ಪ ಕಾಯುವ ತಾಳ್ಮೆ ಇರಲಿ

|
Google Oneindia Kannada News

ಬೆಂಗಳೂರು, ಸೆ.2 : ಡಿಸಿಎಂ ಪಟ್ಟದ ಪ್ರಮುಖ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಪರೋಕ್ಷ ಟಾಂಗ್ ನೀಡಿದ್ದಾರೆ. ದಲಿತರಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆಯಬೇಕು ಎಂದು ಹೇಳಿರುವ ಅವರು, ಅದಕ್ಕಾಗಿ ಕಾಲವೂ ಕೂಡಿ ಬರಬೇಕು ಎಂದು ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಎಚ್.ಅಂಜನೇಯ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ದಲಿತರಿಗೆ ಉಪ ಮುಖ್ಯಮಂತ್ರಿ ಹುದ್ದೆ ದೊರೆಯಬೇಕು ಎಂಬ ಬೇಡಿಕೆಗೆ ನನ್ನ ಬೆಂಬಲವಿದೆ, ಆದರೆ, ಅದಕ್ಕೆ ಕಾಲ ಕೂಡಿಬರಬೇಕು ಎಂದು ತಿಳಿಸಿದರು.

H.Anjaneya

ಕಾಂಗ್ರೆಸ್ ಪಕ್ಷ ದಲಿತರಿಗೆ ಅವಕಾಶ ಕೊಟ್ಟಷ್ಟು ಬೇರೆ ಯಾವ ಪಕ್ಷವೂ ಅವಕಾಶ ಕೊಟ್ಟಿಲ್ಲ. ಉನ್ನತ ಹುದ್ದೆಯ ಆಕಾಂಕ್ಷೆ ಇರುವವರು ಕಾಯುವ ತಾಳ್ಮೆಯನ್ನು ಹೊಂದಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಆಂಜನೇಯ ಅವರು ಪರೋಕ್ಷ ಟಾಂಗ್ ನೀಡಿದರು. [ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋದ ಕಾಂಗ್ರೆಸ್ ಶಾಸಕರು]

ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದ್ದರೆ ಅವರು ಮುಖ್ಯಮಂತ್ರಿಯಾಗುತ್ತಿದ್ದರು. ಆ ಅವಕಾಶ ತಪ್ಪಿ ಹೋಯಿತು. ಆದರೆ, ಕೇಂದ್ರದಲ್ಲಿ ಯುಪಿಎ ಸರ್ಕಾರ 2ನೇ ಬಾರಿ ಅಧಿಕಾರಕ್ಕೆ ಬಂದಾಗ ಅವರಿಗೆ ಸಚಿವ ಸ್ಥಾನ ದೊರೆಯಿತು ಎಂದು ಆಂಜನೇಯ ಹೇಳಿದರು.

ಪ್ರಸ್ತುತ ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದಾರೆ. ಇದು ದಲಿತರಿಗೆ ನೀಡಿದ ಅಪೂರ್ವ ಅವಕಾಶ ಎಂದು ಆಂಜನೇಯ ತಿಳಿಸಿದರು. ಕರ್ನಾಟಕದಲ್ಲಿಯೂ ಡಿಸಿಎಂ ಹುದ್ದೆ ಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಅಂದಹಾಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬುಧವಾರ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಇದಕ್ಕಾಗಿ 10 ಕ್ಕೂ ಹೆಚ್ಚು ಆಕಾಂಕ್ಷಿಗಳು ಲಾಬಿ ಆರಂಭಿಸಿದ್ದಾರೆ.

English summary
Social Welfare Minister H.Anjaneya said, dalits leaders wants Deputy Chief Minister post in Siddaramaiah government. Many Congress leaders demanding for DCM Post for G Parameshwar who belongs to the dalit community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X