Dam Water Level: ರಾಜ್ಯದಲ್ಲಿ ಮಳೆ ಅಬ್ಬರ; KRS ಸೇರಿ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯ ಅಬ್ಬರ ಮುಂದುವರಿದಿದೆ. ಬೆಂಗಳೂರು, ಹಾಸನ, ಕರಾವಳಿ ಕರ್ನಾಟಕ, ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲೂ ಬದಲಾವಣೆ ಕಂಡುಬಂದಿದೆ. ಕೃಷ್ಣಾ ಕೊಳ್ಳದ ಕೆಲವು ಜಲಾಶಯಗಳು ಉತ್ತಮ ಸಂಗ್ರಹ ಹೊಂದಿದ್ದರೆ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದರಿಂದ ಕೆಆರ್‌ಎಸ್‌, ಕಬಿನಿ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳ ಮೇಲೆ ಒತ್ತಡ ಮುಂದುವರಿದಿದೆ. ಮಂಡ್ಯ ಹಾಗೂ ಮೈಸೂರು ಭಾಗದ ಪ್ರಮುಖ ಜಲಮೂಲವಾಗಿರುವ ಕೆಆರ್‌ಎಸ್‌ ಜಲಾಶಯದಲ್ಲಿ ಪ್ರಸ್ತುತ ಸುಮಾರು 26.48 ಟಿಎಂಸಿ ನೀರು ಸಂಗ್ರಹವಿದ್ದು, ಬಳಕೆಗೆ ಲಭ್ಯವಿರುವ ಲೈವ್‌ ಸ್ಟೋರೇಜ್‌ ಸುಮಾರು 18.6 ಟಿಎಂಸಿ ಇದೆ.

Dam Water Level Check the latest water storage inflow and outflow levels of KRS Kabini reservoirs

ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ಆಲಮಟ್ಟಿ ಜಲಾಶಯ

ಆಲಮಟ್ಟಿ ಜಲಾಶಯದ ಒಟ್ಟು ಸಾಮರ್ಥ್ಯ 123.08 ಟಿಎಂಸಿ. ಪ್ರಸ್ತುತ 105.57 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 86ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ ಒಳಹರಿವು 0 ಕ್ಯೂಸೆಕ್ ಇದ್ದರೆ, ಹೊರಹರಿವು 8,750 ಕ್ಯೂಸೆಕ್ ಇದೆ.

ಕೆಆರ್‌ಎಸ್‌ ಜಲಾಶಯ

ಕೆಆರ್‌ಎಸ್‌ ಜಲಾಶಯದ ಒಟ್ಟು ಸಾಮರ್ಥ್ಯ 49.45 ಟಿಎಂಸಿ. ಪ್ರಸ್ತುತ 26.48 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 53ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ 482 ಕ್ಯೂಸೆಕ್ ಒಳಹರಿವು ಬರುತ್ತಿದ್ದು, 3,197 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕಬಿನಿ ಜಲಾಶಯ

ಕಬಿನಿ ಜಲಾಶಯದ ಒಟ್ಟು ಸಾಮರ್ಥ್ಯ 19.52 ಟಿಎಂಸಿ. ಸದ್ಯ 11.17 ಟಿಎಂಸಿ ನೀರು ಸಂಗ್ರಹವಿದ್ದು, ಶೇ.57ರಷ್ಟು ಭರ್ತಿಯಾಗಿದೆ. ಒಳಹರಿವು 916 ಕ್ಯೂಸೆಕ್ ಇದ್ದರೆ, ಹೊರಹರಿವು 1,600 ಕ್ಯೂಸೆಕ್ ಇದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯದ ಒಟ್ಟು ಸಾಮರ್ಥ್ಯ 105.79 ಟಿಎಂಸಿ. ಪ್ರಸ್ತುತ 71.87 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 68ರಷ್ಟು ಭರ್ತಿಯಾಗಿದೆ. ಒಳಹರಿವು ಸದ್ಯ 0 ಕ್ಯೂಸೆಕ್ ಇದ್ದು, ಹೊರಹರಿವು 9,181 ಕ್ಯೂಸೆಕ್ ಇದೆ.

ವಾಣಿವಿಲಾಸ ಸಾಗರ

ವಾಣಿವಿಲಾಸ ಸಾಗರದ ಒಟ್ಟು ಸಾಮರ್ಥ್ಯ 30.42 ಟಿಎಂಸಿ. ಪ್ರಸ್ತುತ 20.22 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 66ರಷ್ಟು ಭರ್ತಿಯಾಗಿದೆ. ಒಳಹರಿವು 0 ಕ್ಯೂಸೆಕ್ ಇದ್ದು, ಹೊರಹರಿವು 500 ಕ್ಯೂಸೆಕ್ ಇದೆ.

ಹಾರಂಗಿ ಜಲಾಶಯ

ಹಾರಂಗಿ ಜಲಾಶಯದ ಒಟ್ಟು ಸಾಮರ್ಥ್ಯ 8.50 ಟಿಎಂಸಿ. ಪ್ರಸ್ತುತ 6.28 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 74ರಷ್ಟು ಭರ್ತಿಯಾಗಿದೆ. ಜಲಾಶಯಕ್ಕೆ 649 ಕ್ಯೂಸೆಕ್ ಒಳಹರಿವು ಬರುತ್ತಿದ್ದು, 100 ಕ್ಯೂಸೆಕ್ ಹೊರಹರಿವು ಇದೆ.

220 ತಾಲೂಕುಗಳಲ್ಲಿ ಮಳೆ ಕೊರತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಈ ಮುಂಗಾರು ಅವಧಿಯಲ್ಲಿ ಮಳೆ ಕೊರತೆ ಕಂಡುಬಂದಿದೆ. ರಾಜ್ಯದ 240 ತಾಲೂಕುಗಳ ಪೈಕಿ ಸುಮಾರು 220 ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ವರದಿಯಾಗಿದೆ.

ವಿಶೇಷವಾಗಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬರುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಕೃಷಿ ಹಾಗೂ ನೀರಾವರಿ ಬಳಕೆಯ ಬಗ್ಗೆ ಆತಂಕ ಮುಂದುವರಿದಿದೆ.

ಇದೇ ವೇಳೆ ಅಕ್ಟೋಬರ್‌ನಲ್ಲಿ ಆರಂಭವಾಗಲಿರುವ ಈಶಾನ್ಯ ಮಾನ್ಸೂನ್‌ ಮೇಲೆ ರಾಜ್ಯದ ಪ್ರಮುಖ ಜಲಾಶಯಗಳ ನಿರೀಕ್ಷೆ ನೆಟ್ಟಿದೆ. ಈ ಅವಧಿಯಲ್ಲಿ ಉತ್ತಮ ಮಳೆಯಾದರೆ ಜಲಾಶಯಗಳ ನೀರಿನ ಮಟ್ಟ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್‌ 6ರವರೆಗೆ ಮಳೆ ಸಾಧ್ಯತೆ

ಅರೇಬಿಯನ್ ಸಮುದ್ರದಿಂದ ಬೀಸುತ್ತಿರುವ ತೇವಾಂಶಭರಿತ ಗಾಳಿಯ ಪರಿಣಾಮ ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅಕ್ಟೋಬರ್‌ 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಮಾರುತಗಳು ಅಕ್ಟೋಬರ್‌ 15ರ ವೇಳೆಗೆ ರಾಜ್ಯದಿಂದ ಸಂಪೂರ್ಣವಾಗಿ ನಿರ್ಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮುಂದಿನ ಕೆಲ ದಿನಗಳ ಮಳೆ ಜಲಾಶಯಗಳ ನೀರಿನ ಮಟ್ಟದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+