ದಂಡುಪಾಳ್ಯ ಗ್ಯಾಂಗ್ ಸದಸ್ಯರಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ಸೆಪ್ಟೆಂಬರ್ 4 : 1999ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್‌ನ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲಾಗಿತ್ತು. ಕರ್ನಾಟಕ ಹೈಕೋರ್ಟ್ ಅದನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ.
ಬೆಂಗಳೂರಿನ ಮೂಡಲಪಾಳ್ಯದ ನಿವಾಸಿ ಸುಧಾಮಣಿಯನ್ನು ಹತ್ಯೆ ಮಾಡಿದ್ದು ದಂಡುಪಾಳ್ಯ ಗ್ಯಾಂಗ್‌ನ ಸದಸ್ಯರು, 1 ಲಕ್ಷ ರೂಪಾಯಿಗಳ ಹಣ ಮತ್ತು ಒಡೆವೆ ದೋಚಿದ್ದರು. ದಂದುಪಾಳ್ಯ ಗ್ಯಾಂಗ್‌ನ ವೆಂಕಟೇಶ್, ಮುನಿಕೃಷ್ಣ, ನಲ್ಲ ತಿಮ್ಮ, ಲಕ್ಷ್ಮೀ

ಈ ಪ್ರಕರಣದಲ್ಲಿ ಅಪರಾಧಿಗಳು ಎಂದು ಸಾಬೀತಾಗಿತ್ತು.
2011ರಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ ಐವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ದಂಡುಪಾಳ್ಯ ತಂಡದ ಸದಸ್ಯರು ಇದನ್ನಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಆದೇಶ ಹೊರಡಿಸಿದೆ.
ಗ್ಯಾಂಗ್ ಹಿನ್ನೆಲೆ : ರಾಜ್ಯದ ಹಲವು ಕಡೆ 1996ರಿಂದ 1999ರವರೆಗೆ ಒಂಟಿ ಮಹಿಳೆಯರನ್ನು ಅತ್ಯಾಚಾರ ನಡೆಸಿ, ಕತ್ತು ಸೀಳಿ ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣ ನಡೆದಿತ್ತು.
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ ರಾಜ್ಯದ ಎಲ್ಲ ಭಾಗಗಳಲ್ಲಿ ನಡೆದ ಪ್ರಕರಣಗಳನ್ನು ಒಂದೇ ರೀತಿಯ ಪ್ರಕರಣಗಳನ್ನಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಒಬ್ಬರನ್ನು ಖುಲಾಸೆ ಮಾಡಿತ್ತು.
ಅಲ್ಲದೆ, ಇನ್ನುಳಿದ ಆರು ಮಂದಿ ಆರೋಪಿಗಳ ವಿರುದ್ಧ ಸೂಕ್ತ ಪುರಾವೆ ಗಳಿಲ್ಲದಿದ್ದರೂ, ವೌಖಿಕವಾಗಿ ಸಾಕ್ಷಗಳನ್ನು ಪಡೆದು ಗಲ್ಲು ಶಿಕ್ಷೆ ನೀಡಿ ಆದೇಶಿಸಿತ್ತು. ಗ್ಯಾಂಗ್ ನ ಸದಸ್ಯರ ವಿರುದ್ಧ ವಿವಿಧ ಜಿಲ್ಲೆಗಳ ಕೋರ್ಟ್‌ಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಯುತ್ತಲೇ ಇದೆ.












Click it and Unblock the Notifications