Darshan Thoogudeepa: ಪೊಲೀಸರ ಕೈ ಸೇರಿದ ಬಲವಾದ ಸಾಕ್ಷಿ-ಸ್ಪೋಟಕ ಮಾಹಿತಿ ಇಲ್ಲಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ್ ಹಾಗೂ ಗ್ಯಾಂಗ್ ಜೈಲಿನಲ್ಲಿ ಕಂಬಿ ಏಣಿಸುತ್ತಿದೆ. ಈ ಕೊಲೆ ಪ್ರಕರಣವನ್ನು ಬೇಧಿಸಲು ಪೊಲೀಸ್ ಇಲಾಖೆ ಹಲವು ತಂತ್ರಗಳನ್ನು ಬಳಸುತ್ತಿದೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಈಗಾಗಲೇ ಹಲವು ತಂಡಗಳನ್ನು ಬಳಸಿ, ತನಿಖೆಯನ್ನು ಚುರುಕು ಗೊಳಿಸಿದೆ.
ಜುನ್ 11 ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದರು. ಅಲ್ಲದೆ ಈ ವಿಚಾರಣೆಯ ವೇಳೆ ಹಲವು ಸಾಕ್ಷಿಗಳನ್ನು ವಶಕ್ಕೆ ಪಡೆದಿದ್ದರು. ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳವನ್ನು ಮಹಜರು ಸಹ ಮಾಡಿದ್ದಾರೆ. ಈ ವೇಳೆ ದರ್ಶನ್ ತಾನು ಅವನಿಗೆ ಹೊಡೆದು ಬೆದರಿಸಲು ತಿಳಿಸಿದ್ದಾಗೂ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ 3 ಸೆಕೆಂಡ್‌ಗಳ ವಿಡಿಯೋವನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಈಗ ಪೊಲೀಸರ ಕೈ ಸೇರಿರುವ ಸಾಕ್ಷ್ಯ ನಿಜಕ್ಕೂ ಗಾಬರಿ ಹುಟ್ಟಿಸುವಂತಿದೆ. ದರ್ಶನ್ ಹಾಗೂ ಸಹಚರರ ಕ್ರುರ ತನ ಈ ವರದಿಯಲ್ಲಿ ಬಹಿರಂಗವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾಮಾಕ್ಷಿಪಾಳ್ಯ ಪೊಲೀಸರ ಕೈಗೆ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಕೈ ಸೇರಿದೆ. ಇದರಲ್ಲಿ ರೇಣುಕಾಸ್ವಾಮಿ ಅವರಿಗೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿರುವ ರಹಸ್ಯ ಬಯಲಾಗಿದೆ. ಆರೋಪಿಗಳು ಐದು ಗಂಟೆಗಳ ಕಾಲ ರೇಣುಕಾಸ್ವಾಮಿ ಅವರಿಗೆ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂಬ ಸತ್ಯ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಅವರಿಗೆ ಬಲವಾದ ಹೊಡೆತ ಬಿದ್ದಿದ್ದರಿಂದ ನೋವು ತಾಳಲಾರದೆ ಸಾವನ್ನಪ್ಪಿದ್ದಾನೆ. ಅಲ್ಲದೆ ಮೃತನ ದೇಹದ ಮೇಲೆ ಗಂಭೀರ ಗಾಯದ ಗುರುತುಗಳ ಕಂಡು ಬಂದಿವೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ವರದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ಆದರೆ ಈ ಪರೀಕ್ಷೆಯನ್ನು ನಡೆಸಿದ ವ್ಯದ್ಯ ಪವಿತ್ರಾ ಗೌಡ ಅವರ ಸ್ನೇಹಿತೆಯ ಗಂಡ ಎನ್ನುವುದು ಅನುಮಾನ ಹೆಚ್ಚಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಹಿಂದೆ ಬಂದಿಯಾಗಿ ತಿಂಗಗಳೇ ಕಳೆದಿವೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಟ್ವಿಸ್ಟ್ ಕಾಣುತ್ತಲೇ ಇದೆ.












Click it and Unblock the Notifications