Darshan Case: ದರ್ಶನ್‌ ವಿಚಾರವಾಗಿ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ, ಒತ್ತಡ ಹಾಕಿದ್ರೂ ಕೇಳಲ್ಲ: ಸಿಎಂ ಹೇಳಿದ್ದೇನು?

ಬೆಂಗಳೂರು, ಜೂನ್ 19: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರ ಬದಲಾವಣೆಯ ಬಗ್ಗೆ ಒಂದಷ್ಟು ಮಾತುಗಳು ಕೇಳಿ ಬರುತ್ತಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ, ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Darshan Case There Is No Pressure From Anyone About SPP Change Said Siddaramaiah

ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇನ್ನೂ ಈ ಕುರಿತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಮಾತನಾಡಿ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಕಾನೂನು ಸಲಹೆಗಾರರು ಏನೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಎಲ್ಲರು ಸ್ಡ್ರಿಕ್ಟ್ ಆಗಿಯೇ ಇರಬೇಕಲ್ಲವೇ? ಕಾನೂನು ಬಿಟ್ಟು ಯಾರು ಕೆಲಸ ಮಾಡಲಾಗುವುದಿಲ್ಲ. ಕಾನೂನು ಪ್ರಕಾರವೇ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಕೆಲಸ ಮಾಡಬೇಕು. ಯಾರನ್ನೇ ನೇಮಿಸಿದರು ಸಹ ಕಾನೂನು ಪುಸ್ತಕ ಒಂದೇ ಅಲ್ಲವೇ? ಅದರ ಪ್ರಕಾರವೇ ಕೆಲಸ ಮಾಡಬೇಕಾಗುತ್ತದೆ ಎಂದರು.

ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಬದಲಾವಣೆ ಮಾಡಿದರು ಸಹ ಅದರಲ್ಲೇನು ತಪ್ಪಿಲ್ಲ. ಕಾರಣ ಇಟ್ಟುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ರೇಣುಕಾಸ್ವಾಮಿ‌ ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಮುಲಾಜಿಲ್ಲದೇ, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಪ್ರಕರಣದ ತನಿಖೆ ನಡೆಯುತ್ತಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾಯಿಸುವ ಸಂದರ್ಭ ಬಂದರೆ ಕಾರಣ ಇರುತ್ತದೆ. ಇಲ್ಲದೇ ಮಾಡುವುದಿಲ್ಲ‌ ಎಂದು ಹೇಳಿದರು‌.

ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ‌. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+