ಕರ್ನಾಟಕದ ಅತಿ ಕಿರಿಯ ಶಾಸಕರಾಗಿ ದರ್ಶನ್ ಧ್ರುವನಾರಾಯಣ್ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು, ಮೇ 22: ಕರ್ನಾಟಕ ವಿಧಾನಸಭೆಯ ಅತಿ ಕಿರಿಯ ಶಾಸಕರಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ದಿವಂಗತ ಆರ್. ಧ್ರುವನಾರಾಯಣ್ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರು ಸೋಮವಾರ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
28 ವರ್ಷದ ದರ್ಶನ್ ಧ್ರುವನಾರಾಯಣ್ ಅವರು ಇದೇ ಮೊದಲ ಬಾರಿ ಕರ್ನಾಟಕ ವಿಧಾನಸಭೆಗೆ ಸ್ಪರ್ಧೆ ಮಾಡಿದ್ದರು. ಅವರು ಈ ಚುನಾವಣಗೆ ಹಾಲಿ ಶಾಸಕರಾಗಿದ್ದ ಬಿ ಹರ್ಷವರ್ಧನ್ ಅವರನ್ನು 49,393 ಮತಗಳ ಅಂತರದಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ದರ್ಶನ್ ಧ್ರುವನಾರಾಯಣ್ ಅವರು 1,08,582 ಮತಗಳನ್ನು ಪಡೆದರೆ, ಹಾಲಿ ಶಾಸಕ ಬಿ ಹರ್ಷವರ್ಧನ್ ಅವರು 60,959 ಮತಗಳನ್ನು ಪಡೆದಿದ್ದರು.

ದರ್ಶನ್ ಪರ ಈ ಚುನಾವಣೆಯಲ್ಲಿ ಮೋಹಕ ತಾರೆ ರಮ್ಯಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅವರ ತಮ್ಮ ಸಂಸದ ಡಿಕೆ ಸುರೇಶ್ ಸೇರಿದಂತೆ ಅನೇಕ ಮಂದಿ ನಂಜನಗೂಡಿನಲ್ಲಿ ಪ್ರಚಾರ ಕೈಗೊಂಡಿದ್ದರು. ಸೋಮವಾರ ಮೇ 22ರಿಂದ ಆರಂಭವಾಗಿರುವ ಈ ವಿಧಾನಸಭಾ ಅಧಿವೇಶನ ಮೂರು ದಿನಗಳ ಕಾಲ ನಡೆಯಲಿದೆ. ಸದ್ಯ ಹಂಗಾಮಿ ಸಭಾಧ್ಯಕ್ಷರಾಗಿ ಆರ್‌ವಿ ದೇಶಪಾಂಡೆ ಅವರು ಅಧಿಕಾರರೂಢರಾಗಿದ್ದಾರೆ.
ದರ್ಶನ್ ಧ್ರುವನಾರಾಯಣ್ ಅವರೊಂದಿಗೆ 9 ಮಂದಿ ಯುವ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇದಲ್ಲದೆ ಕಾಂಗ್ರೆಸ್‌ನಿಂದ 32 ಮಂದಿ ಮೊದಲ ಬಾರಿ ಶಾಸಕರಾಗಿದ್ದಾರೆ. ಇದರೊಂದಿಗೆ ಬಿಜೆಪಿಯ 22 ಮಂದಿ ಮೊದಲ ಬಾರಿ ಶಾಸಕರಾಗಿದ್ದಾರೆ. ಜೆಡಿಎಸ್‌ನಿಂದ 8 ಹಾಗೂ 4 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 58 ಮಂದಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಂಜನಗೂಡಿನಲ್ಲಿ ಬಿಜೆಪಿಯಿಂದ ವಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ಅವರು ಸ್ಪರ್ಧೆ ಮಾಡಿದ್ದರು. ಈ ಚುನಾವಣೆಗೆ ಜೆಡಿಎಸ್‌ನಿಂದ ಇಲ್ಲಿ ಅಭ್ಯರ್ಥಿಯನ್ನು ಹಾಕಲಾಗಿರಲಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲಿ ಹರ್ಷವರ್ಧನ್ ಅವರು 78,030 ಮತಗಳನ್ನು ಪಡೆದು 12,479 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು. ಇವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಕಳಲೆ ಕೇಶವಮೂರ್ತಿ ಅವರು 65,551 ಮತಗಳನ್ನು ಪಡೆದು ಪರಾಭಾವಗೊಂಡಿದ್ದರು. ಇನ್ನು ಜೆಡಿಎಸ್‌ನಿಂದ ದಯಾನಂದಮೂರ್ತಿ ಎಚ್‌ಎಚ್ ಅವರು 13,679 ಮತಗಳನ್ನು ಪಡೆದಿದ್ದರು.

ಇಲ್ಲಿ ಬಿಜೆಪಿಯ ಹರ್ಷವರ್ಧನ್ ಅವರು ಶೇಕಡ 47.59 ರಷ್ಟು ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಕಳಲೆ ಕೇಶವಮೂರ್ತಿ ಅವರು ಶೇಕಡ 39.98ರಷ್ಟು ಮತಗಳನ್ನು ಪಡೆದಿದ್ದರು, ಇನ್ನು ಜೆಡಿಎಸ್‌ನ ದಯಾನಂದಮೂರ್ತಿ ಅವರು ಶೇಕಡ 8.34 ರಷ್ಟು ಮತಗಳನ್ನು ಪಡೆದಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 80ರಷ್ಟು ಮತದಾನವಾಗಿತ್ತು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಇಬ್ಬರು ಪ್ರಮುಖ ಅಭ್ಯರ್ಥಿಗಳಾದ ಎಚ್‌ಸಿ ಮಹದೇವಪ್ಪ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ಧ್ರುವನಾರಾಯಣ್ ಅವರು ಅಕಾಲಿಕವಾಗಿ ಮರಣ ಹೊಂದಿದರು. ಆದರೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಧ್ರುವನಾರಾಯಣ್ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications