Darshan Thoogudeepa ದರ್ಶನ್ ಚಾರ್ಜ್‌ಶೀಟ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು

Darshan Chargesheet: ನಟ ಹಾಗೂ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ತುಗುದೀಪ ಅವರ ಚಾರ್ಜ್‌ಶೀಟ್‌ನ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್‌ ಅವರು ಮಾತನಾಡಿದ್ದಾರೆ. ಈ ಬಗ್ಗೆ ಕೋರ್ಟ್‌ ಸಹ ಮಹತ್ವದ ಆದೇಶ ನೀಡಿದೆ. ಕೋರ್ಟ್‌ ಆದೇಶಕ್ಕೂ ಮುನ್ನ ಜಿ. ಪರಮೇಶ್ವರ ಅವರು ಮಾತನಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರೇಶ್ವರ್‌ ಅವರು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗೂ ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.

Darshan Thoogudeepa Charge Sheet What did Home Minister Parameshwar said

ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ.

ಇನ್ನು ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದಷ್ಟೇ ಹೇಳಿದರು.

Darshan Thoogudeepa Charge Sheet What did Home Minister Parameshwar said

ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದು ಹೇಳಿದರು‌.

ಬಿಜೆಪಿ ಕಚೇರಿ ಸ್ಫೋಟಿಸುವ ಸಂಚು ನಡೆದಿದ್ದ ಅಂಶ ಇದೆ

ಇನ್ನು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದೆ. ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಉಳಿದ ವಿಚಾರಗಳ ಬಗ್ಗೆ ಗೊತ್ತಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+