Darshan Thoogudeepa: ಇಂದು ಕೋರ್ಟ್ ನಲ್ಲಿ ದರ್ಶನ್ ಭವಿಷ್ಯ ನಿರ್ಧಾರ: ದಾಸನಿಗೆ ಜೈಲಾ? ಬೇಲಾ?
ಬೆಂಗಳೂರು, ಸೆಪ್ಟೆಂಬರ್ 23: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ನವರು ಜೈಲು ಸೇರಿ ನೂರಕ್ಕೂ ಹೆಚ್ಚು ದಿನಗಳು ಕಳೆದಿದೆ. ಶನಿವಾರ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಈ ಮೂಲಕ ಇಂದು ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ನಟ ದರ್ಶನ್ ಅವರ ಪತ್ನಿ ದರ್ಶನ್ ವಿಚಾರದಲ್ಲಿ ದೇವರ ಮೊರೆ ಹೋಗಿದ್ದು, ಕಾನೂನು ಹೋರಾಟವನ್ನ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ಕೆಲವರು ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದರೆ ದರ್ಶನ್ ಮಾತ್ರ ಜಾಮೀನಿಗೆ ಅರ್ಜಿ ಸಲ್ಲಿಸಲು ಸ್ವಲ್ಪ ಹಿಂದೇಟು ಹಾಕಿದ್ರು. ಆದರೆ, ಇದೀಗ ಅವರು ಕೂಡ ತಮ್ಮ ವಕೀಲರ ಮೂಲಕ ಕಾನೂನು ಹೋರಾಟ ಶುರು ಮಾಡಿದ್ದು, ಈಗಾಗಲೇ 57 ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 21ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಿತ್ತು.
ಇಂದು ದರ್ಶನ್ ಅರ್ಜಿ ವಿಚಾರಣೆಗೆ ಬರಲಿದ್ದು, ಕಾಮಾಕ್ಷಿಪಾಳ್ಯ ಠಾಣೆ ತಾನಿಕಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ.
ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ದರ್ಶನ್ ಜೈಲಿಗೆ ಹೋದಾಗಿನಿಂದ ಸಾಕಷ್ಟು ತೊಂದರೆ ಅನುಭವಿಸ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಸಿಕ್ಕಷ್ಟು ಸೌಲಭ್ಯಗಳೂ ಬಳ್ಳಾರಿ ಜೈಲಿನಲ್ಲಿ ಸಿಗದೇ ವಿಲವಿಲ ಅಂತ ದರ್ಶನ್ ಒದ್ದಾಡ್ತಿದ್ದಾರೆ. ಅಲ್ಲದೇ ಹಲವು ಬೇಡಿಕೆಗಳನ್ನ ದರ್ಶನ್ ಜೈಲಾಧಿಕಾರಿಗಳ ಮುಂದೆ ಇಡ್ತಾನೇ ಬಂದಿದ್ದಾರೆ. ಆದರೆ, ಕೆಲ ಬೇಡಿಕೆಗಳನ್ನು ಜೈಲು ಸಿಬ್ಬಂದಿ ಈಡೇರಿದ್ದಾರೆ. ಇತ್ತ ಬಳ್ಳಾರಿ ಜೈನಿನಲ್ಲಿರುವ ದರ್ಶನ್ ಅವರನ್ನ ನೋಡಲು ಹಲವು ಬಾರೀ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ರೆ, ಬಳ್ಳಾರಿ ಜೈಲಿಗೆ ಬಂದ ಬಳಿಕ ಒಂದೇ ಬಾರಿಗೆ ದರ್ಶನ್ ತಾಯಿ ಬಂದು ಮಗನಿಗೆ ಧೈರ್ಯ ತುಂಬು ಹೋಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಆಗಿದ್ದು, ಬೇಲ್ ಸಿಗೋದು ಬಹುತೇಕ ಡೌಟ್ ಎನ್ನಲಾಗಿದೆ. ದರ್ಶನ್ ವಿರುದ್ಧ ನಾನ್ ಬೇಲೆಬಲ್ ಸೆಕ್ಷನ್ಗಳನ್ನೂ ಹಾಕಲಾಗಿದೆ. ಅತ್ತ ದರ್ಶನ್ ಪತ್ನಿ ವಿಜಯ ಲಕ್ಷ್ಮೀ ಸಾಕಷ್ಟು ದೇವರುಗಳ ಮೊರೆ ಹೋಗ್ತಿದ್ದಾರೆ. ಜೊತೆ ದರ್ಶನ್ ಅಭಿಮಾನಿಗಳು ಕೂಡ ನೆಚ್ಚಿನ ನಟನ ಬಿಡುಗಡೆಗಾಗಿ ಪ್ರಾರ್ಥಿಸ್ತಿದ್ದಾರೆ. ಈ ಮಧ್ಯೆ ದರ್ಶನ್ ಭವಿಷ್ಯ ಇಂದು ಏನಾಗಲಿದೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications