Get Updates
Get notified of breaking news, exclusive insights, and must-see stories!

ಬೆಂಗಳೂರು-ಬೆಳಗಾವಿ ನಡುವೆ ದಸರಾ ವಿಶೇಷ ರೈಲು, ವೇಳಾಪಟ್ಟಿ

ಬೆಂಗಳೂರು, ಸೆಪ್ಟೆಂಬರ್ 27 : ದಸರಾ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಬೆಳಗಾವಿ ನಡುವೆ ಸುವಿಧಾ ವಿಶೇಷ ರೈಲನ್ನು ಓಡಿಸಲಿದೆ. ಅಕ್ಟೋಬರ್ 4 ಮತ್ತು ಅಕ್ಟೋಬರ್ 8ರಂದು ಈ ರೈಲು ಸಂಚಾರ ನಡೆಸಲಿದೆ.

ನೈಋತ್ಯ ರೈಲ್ವೆ ಈ ಕುರಿತು ಪ್ರಕಟಣೆ ಹೊರಡಿಸಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ರೈಲನ್ನು ಓಡಿಸಲಾಗುತ್ತಿದೆ ಎಂದು ತಿಳಿಸಿದೆ.

Dasara 2019 Special Train Between Bengaluru Belagavi

ಬೆಂಗಳೂರಿನ ಯಶವಂತಪುರ ನಿಲ್ದಾಣದಿಂದ ಬೆಳಗಾವಿ ತನಕ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲು ನಂಬರ್ 82657 ಮತ್ತು 82658 ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ ಎಂದು ಪ್ರಕಟಣೆ ಹೇಳಿದೆ.

ವೇಳಾಪಟ್ಟಿ : ಯಶವಂತಪುರ-ಬೆಳಗಾವಿ (82657) ರೈಲು ಅಕ್ಟೋಬರ್ 4ರಂದು ರಾತ್ರಿ 11 ಗಂಟೆಗೆ ಯಶವಂತಪುರದಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಬೆಳಗಾವಿಗೆ ತಲುಪಲಿದೆ.

ಬೆಳಗಾವಿ-ಯಶವಂತಪುರ (82658) ರೈಲು ಅಕ್ಟೋಬರ್ 8ರಂದು ಸಂಜೆ 7ಕ್ಕೆ ಬೆಳಗಾವಿಯಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 6.20ಕ್ಕೆ ಯಶವಂತಪುರಕ್ಕೆ ತಲುಪಲಿದೆ.

ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ನಡುವೆಯೂ ದಸರಾ ವಿಶೇಷ ರೈಲನ್ನು ಓಡಿಸುವುದಾಗಿ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 4ರಂದು 10.20ಕ್ಕೆ ಯಶವಂತಪುರದಿಂದ ಈ ರೈಲು ಹೊರಡಲಿದೆ. ಅಕ್ಟೋಬರ್ 8ರಂದು ರಾತ್ರಿ 10.15ಕ್ಕೆ ಮಂಗಳೂರು ಜಂಕ್ಷನ್‌ನಿಂದ ರೈಲು ಬೆಂಗಳೂರಿಗೆ ಹೊರಡಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+