ಬಾನು ಮುಷ್ತಾಕ್ & ಹಿಂದೂಗಳ ದಸರಾಗೂ ಏನು ಸಂಬಂಧ?

ನಾಡಹಬ್ಬ ದಸರಾ ಸಂಭ್ರಮಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿವಾದದ ಮಸಿ ಬಳಿದಿದೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ಆರೋಪಿಸಿದ್ದಾರೆ. ದಸರಾ ಉದ್ಘಾಟಕರಾಗಿ ಈ ಬಾರಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಐದು ಪ್ರಶ್ನೆಗಳನ್ನ ಕೇಳಿದ್ದಾರೆ. ಇಷ್ಟಕ್ಕೂ ಬಾನು ಮುಷ್ತಾಕ್ ಅವರ ಕೈಯಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಿಸಬೇಕು ಎನ್ನುವ ಐಡಿಯಾ ಯಾರದು? ಎಂದು ಕೇಳಿದ್ದಾರೆ.

ಇದು ಮುಖ್ಯಮಂತ್ರಿಗಳ ಐಡಿಯಾನೊ? ಅಥವಾ ಅವರ ಸಂಪುಟ ಸಹೋದ್ಯೋಗಿಗಳ ಐಡಿಯಾನೊ? ಅಥವಾ ಇದು ಕೂಡ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಕುಮ್ಮಕ್ಕು ಕೊಟ್ಟಿದ್ದ ಸೋ ಕಾಲ್ಡ್‌ ಬುದ್ಧಿಜೀವಿ, ಎಡಪಂಥೀಯ ನಗರ ನಕ್ಸಲರ ಐಡಿಯಾನೋ? ಎಂದು ಪ್ರಶ್ನಿಸಿದ್ದಾರೆ.

Dasara Festival Controversy R Ashoka Questions CM Siddaramaiah Congress Govt

ಬಾನು ಮುಷ್ತಾಕ್ ಅವರನ್ನು ಮುಂದಿನ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಅದು ಅವರಿಗೂ ಗೌರವ ತರುತ್ತಿತ್ತು. ಆದರೆ ಬಾನು ಮುಷ್ತಾಕ್ ಅವರಿಗೂ ಹಿಂದೂಗಳ ಆರಾಧ್ಯ ದೇವತೆ ತಾಯಿ ದುರ್ಗೆಯ ನವರೂಪಗಳನ್ನು ಪೂಜಿಸಿ ಆರಾಧಿಸುವ ದಸರಾ, ನವರಾತ್ರಿಗೂ ಏನು ಸಂಬಂಧ? ಎಂದು ಕೇಳಿದ್ದಾರೆ.

ನಮ್ಮ ತಾಯ್ನೆಲಕ್ಕೆ, ನಮ್ಮ ಜೀವನಾಡಿಯಾಗಿರುವ ನದಿಗಳಿಗೆ ಹೆಣ್ಣಿನ ಹೆಸರಿಟ್ಟು, ತಾಯಿ ಸ್ಥಾನದಲ್ಲಿ ಕೂರಿಸುವುದು ನಮ್ಮ ಭಾರತೀಯ ಸಂಸ್ಕೃತಿ. ಅದಕ್ಕಾಗಿಯೇ ರಾಷ್ಟಕವಿ ಕುವೆಂಪು ಅವರು ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ನಮ್ಮ ನಾಡಗೀತೆಯಲ್ಲಿ ಹೇಳಿರುವುದು. ಅದಕ್ಕಾಗಿಯೇ ನಾವು ಕನ್ನಡ ನಾಡಿನ ಜೀವ ನದಿ ಈ ಕಾವೇರಿ ಎಂದು ಹಾಡುವುದು ಎಂದಿದ್ದಾರೆ.

ಅಂಬಾರಿಗೂ ಆಕ್ಷೇಪ ಮಾಡಲ್ಲ ಅಂತ ಗ್ಯಾರಂಟಿ ಏನು?

ಆದರೆ ಕನ್ನಡಾಂಬೆಯನ್ನ ಭುವನೇಶ್ವರಿಯ ಸ್ಥಾನದಲ್ಲಿ ಕೂರಿಸಿ ಕನ್ನಡಮ್ಮನನ್ನ ದೌರ್ಜನ್ಯ ಮಾಡುತ್ತಿದ್ದೀರಿ ಎನ್ನುವ ಅಭಿಪ್ರಾಯ, ಮನಸ್ಥಿತಿ ಇರುವ ವ್ಯಕ್ತಿಯೊಬ್ಬರಿಂದ ದಸರಾ ಉದ್ಘಾಟನೆ ಮಾಡಿಸಿದರೆ, ಅವರು ನಾಳೆ ತಾಯಿ ಚಾಮುಂಡೇಶ್ವರಿಯನ್ನು ಆನೆಯ ಅಂಬಾರಿ ಮೇಲೆ ಕೂರಿಸುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿ ಕ್ಯಾತೆ ತೆಗೆಯುವುದಿಲ್ಲ ಎನ್ನುವದಕ್ಕೆ ಏನು ಗ್ಯಾರೆಂಟಿ? ಎಂದು ಅಶೋಕ್‌ ಕೇಳಿದ್ದಾರೆ.

ನಮ್ಮ ನೆಲ, ಜಲ, ಸಂಸ್ಕೃತಿಯ ಬಗ್ಗೆ ಗೌರವ, ಸಂವೇದನೆಯೇ ಇಲ್ಲದ ಒಬ್ಬ ವ್ಯಕ್ತಿಯಿಂದ ನಾಡಹಬ್ಬ ಉದ್ಘಾಟನೆ ಮಾಡಿಸುವುದು ಎಷ್ಟು ಸರಿ? ಇದು ತಾಯಿ ಚಾಮುಂಡೇಶ್ವರಿಯ ಅಸಂಖ್ಯಾತ ಆಸ್ತಿಕ ಭಕ್ತರಿಗೆ, ಚಾಮುಂಡಿ ಬೆಟ್ಟವನ್ನು ಪವಿತ್ರ ಶಕ್ತಿಪೀಠ ಎಂದು ನಂಬಿರುವ ಹಿಂದುಗಳಿಗೆ ಮಾಡುವ ಅಪಮಾನ ಅಲ್ಲವೇ? ಬಾನು ಮುಷ್ತಾಕ್ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದರೆ ಅದು ಸಹಜವಾಗಿ ವಿವಾದವಾಗುತ್ತದೆ, ಅದಕ್ಕೆ ವಿರೋಧ ವ್ಯಕ್ತವಾಗುತ್ತದೆ ಎಂಬ ವಿಷಯ ಸರ್ಕಾರಕ್ಕೆ ತಿಳಿದಿತ್ತು.

ಧರ್ಮಸ್ಥಳ, ಚಾಮುಂಡಿ ಬೆಟ್ಟ ಕಾಂಗ್ರೆಸ್‌ ಮುಂದೆ ತಲೆಬಾಗಬೇಕೇ?

ಆದರೂ ಹಠಕ್ಕೆ ಬಿದ್ದವರಂತೆ, ಉದ್ದೇಶಪೂರ್ವಕವಾಗಿ ವಿವಾದಕ್ಕೆ ಎಡೆಮಾಡಿಕೊಡುವ ವ್ಯಕ್ತಿಯನ್ನೇ ಆಯ್ಕೆ ಮಾಡಿದ್ದು ಯಾಕೆ? ಇದರಿಂದ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ನಾಡಿನ ಜನತೆಗೆ, ಅದರಲ್ಲೂ ವಿಶೇಷವಾಗಿ ಹಿಂದೂಗಳಿಗೆ ಏನು ಸಂದೇಶ ಕೊಡಲು ಹೊರಟಿದೆ? ಧರ್ಮಸ್ಥಳ, ಚಾಮುಂಡಿ ಬೆಟ್ಟ ಇವೆಲ್ಲವೂ ಒಂದಲ್ಲ ಒಂದು ದಿನ ಕಾಂಗ್ರೆಸ್ ಪಕ್ಷದ ತುಷ್ಟೀಕರಣ ರಾಜಕಾರಣದ ಮುಂದೆ ತಲೆ ಬಾಗಲೇಬೇಕು ಬೇಕು ಎನ್ನುವ ಎಚ್ಚರಿಕೆಯೋ? ಅಥವಾ ನಾವು ಎಷ್ಟೇ ಬಹಿರಂಗವಾಗಿ, ಹಿಂದೂಗಳನ್ನು ಅಣಕಿಸುವಂತೆ ತುಷ್ಟೀಕರಣ ರಾಜಕಾರಣ ಮಾಡಿದರೂ, ವೋಟ್ ಬ್ಯಾಂಕ್ ರಾಜಕಾರಣದಿಂದ ಗೆದ್ದು ಬರುತ್ತೇವೆ ಎನ್ನುವ ಅಹಂಕಾರದ ಧೋರಣೆಯೋ? ಎಂದು ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+