ದಸರಾ ಉಡುಗೊರೆ: ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

Recommended Video

      ದಸರಾ ಉಡುಗೊರೆ : ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | Oneindia Kannada

      ಬೆಂಗಳೂರು, ಅಕ್ಟೋಬರ್ 12: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ ಸಿಕ್ಕಿದೆ.

      ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಉಡುಗೊರೆ ರೂಪದಲ್ಲಿ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕುಮಾರಸ್ವಾಮಿ ಅವರ ಸರ್ಕಾರವು ಶುಕ್ರವಾರ(ಅಕ್ಟೋಬರ್ 12) ಸಂಜೆ ಆದೇಶ ಹೊರಡಿಸಿದೆ.

      ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ನೌಕರರ ಮೂಲ ವೇತನದ ಶೇ 1.75ರಿಂದ 3.75ರಷ್ಟು ಹೆಚ್ಚಳ ಮಾಡಿದ್ದಾರೆ. ಜುಲೈ 1ರಿಂದ ಪೂರ್ವನ್ವಯವಾಗುವಂತೆ ಆದೇಶ ಜಾರಿಗೆ ಬರಲಿದೆ ಎಂದಿದ್ದಾರೆ.

      ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

      ಸರ್ಕಾರಿ ನೌಕರರ ಬೇಡಿಕೆ ಏನಿತ್ತು?

      ಸರ್ಕಾರಿ ನೌಕರರ ಬೇಡಿಕೆ ಏನಿತ್ತು?

      ಬೇಡಿಕೆ ಏನಿತ್ತು?: ಮೂಲ ವೇತನ 4.25ರಷ್ಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ಹಿಂದೆ ಜನವರಿ 01, 2018ರಿಂದ ಪೂರ್ವಾನ್ವಯವಾಗುವಂತೆ ಶೇ 1.75ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಶೇ 2ರಷ್ಟು ಹೆಚ್ಚಳವಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರವು ಕಳೆದ ದೀಪಾವಳಿ ಹಬ್ಬದ ವೇಳೆಗೆ ಶೇ2ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಿಸಿತ್ತು.

      ಯಾರು ಯಾರಿಗೆ ಈ ಕೊಡುಗೆ ತಲುಪುತ್ತೆ

      ಯಾರು ಯಾರಿಗೆ ಈ ಕೊಡುಗೆ ತಲುಪುತ್ತೆ

      ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.

      ನಿವೃತ್ತ ಪಿಂಚಣಿದಾರರಿಗೂ ಉಡುಗೊರೆ

      ನಿವೃತ್ತ ಪಿಂಚಣಿದಾರರಿಗೂ ಉಡುಗೊರೆ

      ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

      ತುಟ್ಟಿ ಭತ್ಯೆ(dearness allowance)

      ತುಟ್ಟಿ ಭತ್ಯೆ(dearness allowance)

      ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+