ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ; ಆಕ್ರೋಶ

ಬೆಂಗಳೂರು, ಸೆಪ್ಟೆಂಬರ್ 07; ಅಕ್ಟೋಬರ್ ತಿಂಗಳಿನಲ್ಲಿ ಶಾಲೆಗಳಿಗೆ ದಸರಾ ರಜೆ ಸಿಗಲಿದೆ ಎಂದು ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ದಸರಾ ರಜೆ ನೀಡುವ ಕುರಿತು ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ರಜೆಯಲ್ಲಿ ಕಡಿತ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 2ರಿಂದ 29ರ ತನಕ ದಸರಾ ರಜೆಯನ್ನು ನೀಡಲಾಗುತ್ತಿತ್ತು.

Dasara Holiday 2023 For Schools At Karnataka Revised

ಕೋವಿಡ್ ಸಂದರ್ಭದಲ್ಲಿ ಲಾಕ್‌ಡೌನ್ ಸಮಯದಲ್ಲಿ ನಡೆಯದ ತರಗತಿ ಸರಿದೂಗಿಸಲು ದಸರಾ ರಜೆ ಕಡಿತ ಮಾಡಲಾಗಿತ್ತು. ಆದರೆ ಈ ಬಾರಿ ಜನ ಜೀವನ ಸಾಮಾನ್ಯವಾಗಿದ್ದರೂ ಸಹ ರಜೆ ಕಡಿತ ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.

ಯಾವಾಗ ಸಿಗಲಿದೆ ರಜೆ?; 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭವಾಗಿ, ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳು ನಡೆಯುತ್ತಿವೆ. ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯಂತೆ ಈ ಬಾರಿ ದಸರಾ ರಜೆಯಲ್ಲಿ ಕಡಿತ ಮಾಡಲಾಗಿದೆ.

ಈ ಬಾರಿ ಸಾಮಾನ್ಯ ಶಾಲೆಗಳಿಗೆ ಅಕ್ಟೋಬರ್ 8 ರಿಂದ 24ರ ತನಕ ದಸರಾ ರಜೆ ನೀಡಲಾಗಿದೆ. ವಿಶೇಷ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಶಿಕ್ಷಕರು ನಿರಂತರವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕಿದೆ.

ಸರ್ಕಾರ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದಾಗಲೇ ದಸರಾ ರಜೆ ಕಡಿತಗೊಳ್ಳುವ ಸೂಚನೆ ಸಿಕ್ಕಿತ್ತು. ಈ ವರ್ಷ ಒಟ್ಟು ಲಭ್ಯವಾಗುವ ಶಾಲಾ ಕರ್ತವ್ಯದ ದಿನಗಳು 244. ಪರೀಕ್ಷೆ, ಮೌಲ್ಯಾಂಕನ ಕಾರ್ಯಗಳಿಗೆ 26 ದಿನಗಳು. ಪಠ್ಯೇತರ ಚಟುವಟಿಕೆ/ ಪಠ್ಯ ಚಟುವಿಕೆ/ ಸ್ಪರ್ಧೆಗಳ ನಿರ್ವಹಣೆಗಾಗಿ 24 ದಿನಗಳು. ಬೋಧನಾ-ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯದ ದಿನಗಳು 180 ಎಂದು ಪಟ್ಟಿ ಮಾಡಲಾಗಿತ್ತು.

ಮೊದಲನೇ ಶಾಲಾ ಅವಧಿಯ ಕರ್ತವ್ಯದ ದಿನಗಳು 29/5/2023 ರಿಂದ 2/10/2023 ಮತ್ತು ಎರಡನೇ ಅವಧಿಯ ಶಾಲಾ ಕರ್ತವ್ಯದ ದಿನಗಳು 25/10/2023 ರಿಂದ 10/4/2023ರ ವರೆಗೆ ಎಂದು ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಾಹಿತಿ ನೀಡಲಾಗಿತ್ತು.

ದಸರಾ ರಜೆಯು ಇರುವ ಕಾರಣ ಅಕ್ಟೋಬರ್‌ ತಿಂಗಳಿನಲ್ಲಿ ಶಾಲಾ ಕರ್ತವ್ಯದ ದಿನಗಳು ಕಡಿಮೆ ಇರಲಿವೆ. ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಶಿಕ್ಷಣ ಇಲಾಖೆ ಪ್ರತಿ ತಿಂಗಳು ಶಾಲಾ ಕರ್ತವ್ಯದ ದಿನಗಳು ಎಷ್ಟಿರಲಿವೆ? ಎಂದು ಪಟ್ಟಿ ಮಾಡುತ್ತದೆ.

ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಅಕ್ಟೋಬರ್ 15ರಂದು ಆರಂಭವಾಗಿ, ಅಕ್ಟೋಬರ್ 24ರಂದು ಮುಕ್ತಾಯಗೊಳ್ಳಲಿದೆ. ಅಕ್ಟೋಬರ್ 15ರ ಸೋಮವಾರ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಉದ್ಘಾಟಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+