ಸದ್ಗುರು ಶ್ರೀ ಮಧುಸೂದನ ಸಾಯಿಗೆ ಬಸವ ಸಮಿತಿಯಿಂದ ಪ್ರತಿಷ್ಠಿತ "ದಾಸೋಹ ರತ್ನ ಪ್ರಶಸ್ತಿ' ಗೌರವ

ಬೆಂಗಳೂರು: ಅಕ್ಷರ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ ಬಸವ ಸಮಿತಿಯು ಪ್ರತಿಷ್ಠಿತ 'ದಾಸೋಹ ರತ್ನ' ಪ್ರಶಸ್ತಿ ಗೌರವ ಸಂದಿದೆ.

ಬಸವ ಸಮಿತಿಯ 62ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಬಸವ ಸಮಿತಿಯ ಸಂಸ್ಥಾಪಕ, ಮಾಜಿ ಉಪರಾಷ್ಟ್ರಪತಿ ಡಾ. ಬಿ.ಡಿ. ಜತ್ತಿ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ಸೆಪ್ಟೆಂಬರ್ 10ರಂದು ಬೆಂಗಳೂರಿನ ಬಸವ ಸಮಿತಿಯ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Dasoha Ratna Award Basava Samiti Honours Sadhguru Sri Madhusudan Sai with Prestigious Award

'ವಸುಧೈವ ಕುಟುಂಬಕಂ-ಒಂದು ಜಗತ್ತು, ಒಂದು ಕುಟುಂಬ' ಎಂಬ ಭಾರತೀಯ ಚಿಂತನೆಯ ಆಧಾರದಲ್ಲಿ ಸೇವೆ, ಅಧ್ಯಾತ್ಮ ಮತ್ತು ಮಾನವೀಯ ಮೌಲ್ಯಗಳನ್ನು ಸಮನ್ವಯಗೊಳಿಸಿ ಜಾಗತಿಕ ಮಟ್ಟದಲ್ಲಿ ನಿಸ್ವಾರ್ಥ ಸೇವಾ ಕಾರ್ಯಗಳನ್ನು ಮುನ್ನಡೆಸುತ್ತಿರುವ ಸದ್ಗುರು ಮಧುಸೂದನ ಸಾಯಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಬೆಳಗ್ಗೆ 10 ಗಂಟೆಗೆ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿ ಭಾಗವಹಿಸುತ್ತಾರೆ.

ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಹಸಿದವರಿಗೆ ಅನ್ನ, ಅಗತ್ಯವಿರುವವರಿಗೆ ಆರೋಗ್ಯ ಸೇವೆ, ಮಕ್ಕಳಿಗೆ ಶಿಕ್ಷಣ ಹಾಗೂ ಪ್ರತಿಯೊಬ್ಬರಿಗೂ ಗೌರವಯುತ ಬದುಕಿನ ಅವಕಾಶ ಕಲ್ಪಿಸುತ್ತಿದ್ದು, ಅವರ ಸೇವಾ ದೃಷ್ಟಿಕೋನವು ಬಸವಣ್ಣನವರ ದಾಸೋಹ ತತ್ವದೊಂದಿಗೆ ಸಾಮ್ಯ ಹೊಂದಿದೆ ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಗುರು ಶ್ರೀ ಮಧುಸೂದನ ಸಾಯಿ ಹಿನ್ನೆಲೆ

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಆಧ್ಯಾತ್ಮಿಕ ನಾಯಕರು ಹಾಗೂ ಜಾಗತಿಕ ಮಾನವತಾವಾದಿಯಾಗಿದ್ದು, ಉಚಿತ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶ ಸೇವೆಗಳ ಮೂಲಕ ಮನೆ ಮಾತಾಗಿದ್ದಾರೆ. ಅನ್ನ (ಪೌಷ್ಟಿಕ ಆಹಾರ), ಅಕ್ಷರ (ಉಚಿತ ಶಿಕ್ಷಣ) ಮತ್ತು ಆರೋಗ್ಯ (ಉಚಿತ ವೈದ್ಯಕೀಯ ಸೇವೆ) ಈ ಸಂಸ್ಥೆಯ ಉದ್ದೇಶವಾಗಿದೆ. ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಮಾರ್ಗದರ್ಶನ ಹಾಗೂ ಆಶಯದಂತೆ 'ಒಂದೇ ಜಗತ್ತು, ಒಂದೇ ಕುಟುಂಬ' (One World One Family) ಎಂಬ ತತ್ವದಡಿ ಸೇವಾ ಕಾರ್ಯಗಳು ಜಾಗತಿಕವಾಗಿ ನಡೆಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+