Good News: ರಾಜ್ಯದಲ್ಲಿ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Vidyasiri Scholarship 2024: ಸರ್ಕಾರದಿಂದ ರಾಜ್ಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಆಗಲೆಂದು ವಿವಿಧ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತದೆ. ಅದರಲ್ಲೂ ಪಿಯುಸಿಯಿಂದಲೇ ವಿದ್ಯಾಭ್ಯಾಸಕ್ಕೆ ಹೆಚ್ಚು ಖರ್ಚು ತಗಲುತ್ತದೆ. ಆದ್ದರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಇದರ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15 ಇದ್ದ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ, ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024ರವರೆಗೆ ವಿಸ್ತರಿಸಲಾಗಿದೆ.
ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30, 2024ರೊಳಗೆ ಅರ್ಜಿ ಸಲ್ಲಿಸಬೇಕು. https://ssp.postmatric.karnataka.gov.in ಮೂಲಕ ಅಕ್ಟೋಬರ್ 31, 2024ರೋಳಗಾಗಿ ಅರ್ಜಿ ಸಲ್ಲಿಸಬಹುದು. ಇನ್ನು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಅಥವಾ [email protected] ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ ಸ್ಕಾಲರ್ ಶಿಪ್: ಸಾಮಾನ್ಯವಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸ್ಕಾಲರ್ ಶಿಪ್ ಅನ್ನು ನೀಡಲಾಗುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಹಾಗಾದರೆ ಯಾರಿಗೆ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದ ಕಂದವಾರದ ಬಳಿಯ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಕಾಲರ್ ಶಿಪ್ ನೀಡುವುದಾಗಿ ಘೋಷಣೆ ಮಾಡಿದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಸ್ಕಾಲರ್ ಶಿಪ್‌ಗೆ ಪ್ರದೀಪ್ ಈಶ್ವರ್ ಎಂಎಲ್ಎ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಒಟ್ಟು 5,00,00,000 ರೂಪಾಯಿಗೂ ಹೆಚ್ಚು ಹಣ ಖರ್ಚಾಗಲಿದೆ ಎಂದು ನಿರೀಕ್ಷಸಲಾಗಿದೆ.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ಹಣ.?
* 10ನೇ (SSLC) ತರಗತಿ- 1,000 ರೂಪಾಯಿ
* ಐಟಿಐ, ಡಿಪ್ಲೋಮಾ- 1,500 ರೂಪಾಯಿ
* ದ್ವಿತೀಯ ಪಿಯುಸಿ- 2,000 ರೂಪಾಯಿ
* ಡಿಗ್ರಿ ಫೈನಲ್ ಇಯರ್ (ಬಿಎ. ಬಿಕಾಮ್, ಬಿಎಸ್ಸಿ, ಬಿಬಿಎ, ವಿಸಿಎ, ಬಿಎಸ್ಡಬ್ಲು, ಎಲ್ಎಲ್ಬಿ)- 2,000 ರೂಪಾಯಿ
* ಸ್ನಾತಕೋತ್ತರ ಫೈನಲ್ ಇಯರ್ (ಎಂಬಿಬಿಎಸ್, ಬಿಇ, ಎಂಎಸ್ಸಿ, ಎಂಎ, ಎಂಕಾಮ್, ಎಂಬಿಎ, ಎಂಎಸ್‌ಡಬ್ಲ್ಯು, ಬಿಎಎಂಎಸ್, ಡೆಂಟಲ್) - 3,000
ಇನ್ನು ಸ್ಕಾಲರ್ ಶಿಪ್‌ಗೆ ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ ನವೆಂಬರ್ 15, 2024 ಆಗಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಐಡೇಡ್ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 080-24413333, ಸ್ವಾಮ್ಯ- 90084 95576, ಹರೀಶ್- 97430 64840 ಹಾಗೂ www.pradeepeshwarmla.com ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.












Click it and Unblock the Notifications