ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಸಿಇಟಿ 2021 ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಡಿಸಿಎಂ ಡಾ. ಅಶ್ವಥ್ ನಾರಾಯಣ

|
Google Oneindia Kannada News

ಬೆಂಗಳೂರು, ಜು. 09: "ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ 2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್.‌ ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಸಿಇಟಿ ಅರ್ಜಿ ಸಲ್ಲಿಕೆ ಕುರಿತು ಹೇಳಿಕೆ ನೀಡಿರುವ ಅವರು, "ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.

"ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿ ಆದೇಶ ಮಾಡಲಾಗಿದೆ. ಇದರೊಂದಿಗೆ ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ಎನ್‌ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್‌ ಆ್ಯಂಡ್ ಗೈಡ್ಸ್‌ ವರ್ಗಗಳನ್ನು ಕ್ಲೇಮ್‌ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ." ಎಂದು ಡಾ. ಅಶ್ವಥ್ ನಾರಾಯಣ ಅವರು ವಿವರಿಸಿದ್ದಾರೆ.

 Date Extended to apply online for CET-2021

Recommended Video

Tokyo Olympics 2021 ವಿಚಾರವಾಗಿ ಸರ್ಕಾರ ತಗೊಂಡಿರೊ ದೊಡ್ಡ ನಿರ್ಧಾರ | Oneindia Kannada

ಹೆಚ್ಚಿನ ಮಾಹಿತಿಗೆ ಇಲಾಖೆಯ http://kea.kar.nic.in ವೆಬ್‌ತಾಣಕ್ಕೆ ಭೇಟಿ ವಿವರ ಪಡೆಯಬಹುದು ಎಂದು ಮಾಹಿತಿ ಕೊಡಲಾಗಿದೆ.

English summary
The last date for submitting the online application for CET-2021 has been extended till July 16, DyCM, Dr.C.N.Ashwatha Narayana, who also holds the higher education portfolio, stated on Friday. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X