ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ: ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆಗೆ ಮುಹೂರ್ತ ನಿಗದಿ
ಬೆಂಗಳೂರು ಫೆಬ್ರವರಿ, 27: ಶಿಕ್ಷಣಾ ಇಲಾಖೆಯಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಇದೀಗ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಪ್ರೌಢಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸಲು ನಾಳೆ ಅಂದರೆ ಫೆಬ್ರವರಿ 28ರಂದು ಮಹತ್ವದ ಸಭೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಸಭೆಯನ್ನು ನಿಗದಿ ಮಾಡಲಾಗಿದೆ.

ಈ ಕುರಿತಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಫೆಬ್ರವರಿ 28, 2025ರ ಬೆಳಗ್ಗೆ 11 ಗಂಟೆಗೆ ಕೊಠಡಿ ಸಂಖ್ಯೆ 649, ಸಭಾಂಗಣ, 6ನೇ ಮಹಡಿ, ಶಾಲಾ ಶಿಕ್ಷಣ ಇಲಾಖೆ, ಇಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ತಾವುಗಳು ತಪ್ಪದೇ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ಮಾಹಿತಿಯನ್ನಯ ನೀಡಿದೆ.
ಸರ್ಕಾರಿ ನೌಕರರಿಗೆ ಮಾಹಿತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963ರ ಅನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ.
ಯೋಜನೆಗೆ ಅರ್ಹ ಅವಲಂಬಿತರು ಯಾರು?: ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ನಿಯಮ 2ರಲ್ಲಿನ ಕುಟುಂಬ (Family) ಅಂದರೆ ಸರ್ಕಾರಿ ನೌಕರರ ಪತಿ ಅಥವಾ ಪತ್ನಿ.
* ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ-ಕುಟುಂಬ ಪಿಂಚಣಿ 8,500 ರೂಪಾಯಿ ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು.
* ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ)
* KASS ಯೋಜನೆಗೆ ಒಳಪಡದ ನೌಕರರ ವರ್ಗ
* ಸಾರ್ವಜನಿಕ ವಲಯದ ಇತರೇ ನೌಕರರು ಅಂದರೆ, ಸ್ಥಳಿಯ ಸಂಸ್ಥೆ, ಸ್ನಾಯತ್ತ ಸಂಸ್ಥೆಗಳು, ಅನುದಾನಿತ ಸಂಸ್ಥೆ, ವಿಶ್ವವಿದ್ಯಾಲಯಗಳು, ಶಾಸನಬದ್ಧ ಸಂಸ್ಥೆಗಳು, ಗುತ್ತಿಗೆ/ಹೊರಗುತ್ತಿಗೆ ನೌಕರರು, ಅರೆಕಾಲಿಕ ನೌಕರರು, ದಿನಗೂಲಿ ನೌಕರರು ಈ ಯೋಜನೆಗೆ ಒಳಪಡುವುದಿಲ್ಲ.
* ಈಗಾಗಲೇ ಬೇರೆ ಆರೋಗ್ಯ ಯೋಜನೆಯಡಿ ಒಳಪಟ್ಟ ಸರ್ಕಾರಿ ನೌಕರರು (ಉದಾ: ಪೊಲೀಸ್ ಇಲಾಖೆಯಲ್ಲಿನ 'ಆರೋಗ್ಯ ಭಾಗ್ಯ' ಯೋಜನೆಗೆ ಒಳಪಟ್ಟ ಸರ್ಕಾರಿ ನೌಕರರು) ಈ ಯೋಜನೆಗೆ ಒಳಪಡುವುದಿಲ್ಲ.
* ರಾಜ್ಯ ಸೇವೆಯಲ್ಲಿ ನಿಯೋಜನೆ/ಎರವಲು ಸೇವೆಯ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ಸ್ಥಾಪನೆಯ ನೌಕರರು ಈ ಯೋಜನೆಗೆ ಒಳಪಡುವುದಿಲ್ಲ.
* ಸಾರ್ವಜನಿಕ ವಲಯದ ಸ್ಥಾಪನೆ ಎಂದರೇ "ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 5ರಲ್ಲಿ ನಿರ್ಧಿಷ್ಟಪಡಿಸಲಾದ ಸ್ಥಾಪನೆಗಳ ನೌಕರರು".
* ವೈದ್ಯಕೀಯ ಚಿಕಿತ್ಸೆ ನೀಡುವ ಸಂಬಂಧ ರಾಜ್ಯ ಸರ್ಕಾರವು ರೂಪಿಸಿರುವ ಪ್ರತ್ಯೇಕ ನಿಯಮಗಳು ಅನ್ವಯವಾಗುವ ಇತರೇ ಯಾವುದೇ ವರ್ಗದ ವ್ಯಕ್ತಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
* ನ್ಯಾಯಾಂಗ ಸೇವೆಯ ಅಧಿಕಾರಿಗಳು ಮತ್ತು ರಾಜ್ಯ ಉಚ್ಚ ನ್ಯಾಯಲಯದ ನೌಕರರು ಈ ಯೋಜನೆ ಒಳಪಡುವುದಿಲ್ಲ.
1. ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು.
2. ರಾಜ್ಯ ವಿಧಾನಮಂಡಲದ ನೌಕರರು.
* KASS ಅಡಿಯಲ್ಲಿ ಕುಟುಂಬ ಪದದ ವ್ಯಾಖ್ಯಾನವೇನು?: ಕರ್ನಾಟಕ ಸರ್ಕಾರಿ ನೌಕರರ ನಿಯಮಗಳು 1963ರ ನಿಯಮ 2ರಲ್ಲಿನ ಕುಟುಂಬ ಎಂದರೆ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಹಾಗೂ ಸಂಪೂರ್ಣವಾಗಿ ಅವಲಂಬಿತವಾಗಿರುವ ಮಕ್ಕಳು (ದತ್ತು ಪಡದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ಎಂದು ವ್ಯಾಖ್ಯಾನಿಸಲಾಗಿದೆ.
* ವೃತ್ತಿಪರ ಅವಧಿಯಲ್ಲಿರುವ ಸರ್ಕಾರಿ ನೌಕರನು KASS ಯೋಜನೆಗೆ ಅರ್ಹನಾಗಿರುತ್ತಾನೆ.
* ದಂಪತಿಗಳಿಬ್ಬರು ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿದ್ದರೆ, ಹೆಚ್ಚಿನ ಮೂಲ ವೇತನವನ್ನು ಪಡೆಯುವ ಉದ್ಯೋಗಿ ಮುಖ್ಯ ಕಾರ್ಡ್ ಹೋಲ್ಡರ್ ಆಗಿ ನೋಂದಾಯಿಸಿಕೊಳ್ಳುತ್ತಾರೆ. ಆದರೆ ಇಬ್ಬರೂ ಉದ್ಯೋಗಿಗಳು ತಮ್ಮ ಪೋಷಕರನ್ನು ಅವಲಂಬಿತರನ್ನಾಗಿ ಸೇರಿಸಲು ಬಯಸಿದರೆ, ಇಬ್ಬರೂ ಪ್ರತ್ಯೇಕವಾಗಿ ಯೋಜನೆಗೆ ನೋಂದಾಯಿಸಿಕೊಳ್ಳತಕ್ಕದ್ದು.
* ಒಬ್ಬ ಮಹಿಳಾ ಸರ್ಕಾರಿ ನೌಕರನು ತನ್ನ ತಂದೆ-ತಾಯಿಯನ್ನು ಅಥವಾ ಅತ್ತೆ-ಮಾವರನ್ನು ಸೇರಿಸಿಕೊಳ್ಳುವ ಆಯ್ಕೆಯನ್ನು ಹೊಂದಿದ್ದು, ಕೆ.ಎ.ಎಸ್.ಎಸ್ ಅಡಿಯಲ್ಲಿ KASS ನಿಯಮದಂತೆ ಸರ್ಕಾರಿ ನೌಕರರನೊಂದಿಗೆ ವಾಸವಾಗಿದ್ದು ಕನಿಷ್ಠ ಮಾಸಿಕ ಆದಾಯ -ಕುಟುಂಬ ಪಿಂಚಣಿ 8,500 ರೂಪಾಯಿ ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು.
* ಹೆಣ್ಣು ಅಥವಾ ಗಂಡು ಮಕ್ಕಳು ಗಳಿಸಲು ಪ್ರಾರಂಭಿಸುವವರೆಗೆ (ಉದ್ಯೋಗ) ಅಥವಾ 30ವರ್ಷ ವಯಸ್ಸನ್ನು ತಲುಪುವವರೆಗೆ ಅಥವಾ ಮದುವೆಯಾಗುವವರೆಗೆ ಅರ್ಹನಾಗಿರುತ್ತಾರೆ. ಆದಾಗ್ಯೂ ಮಕ್ಕಳು ಯಾವುದೇ ರೀತಿಯ (ದೈಹಿಕ ಅಥವಾ ಮಾನಸಿಕ) ಶಾಶ್ವತ ಅಂಗವೈಕಲ್ಯದಿಂದ ಬಳಲುತ್ತಿದ್ದರೆ ಅವರು KASS ಪ್ರಯೋಜನಗಳಿಗೆ ಅರ್ಹನಾಗಿರುತ್ತಾರೆ.
* ವಾರ್ಡ್ ಮಾನದಂಡಕ್ಕಿಂತ ಉನ್ನತ ಮಟ್ಟದ (Ward Up gradation) ಪಡೆಯಲು ಫಲಾನುಭವಿಯು ವ್ಯತ್ಯಾಸದ ಹಣವನ್ನು ಪಾವತಿಮಾಡಿ ರಶೀದಿಯನ್ನು ಪಡೆಯಬಹುದಾಗಿದೆ.
* ಫಲಾನುಭವಿಯ ನೊಂದಾಯಿತ ಸಮಯದಲ್ಲಿ ನೀಡುವ ಡಿ.ಡಿ.ಓ ಇ-ಸಹಿ ಹೊಂದಿರುವ ಧೃಡಿಕರಣ ಪತ್ರ ಅಥವಾ KASS ಕಾರ್ಡ್ ಅವಶ್ಯಕತೆ ಇರುತ್ತದೆ.
* ಸರ್ಕಾರಿ ವೈದ್ಯರಿಂದ ಯಾವುದೇ ನಿರ್ದೇಶನದ (ರೆಫರಲ್) ಅಗತ್ಯವಿಲ್ಲ. ಕೆಲವೊಂದು ಚಿಕಿತ್ಸೆಗೆ (IVF, Replacement, Transplant) ಚಿಕಿತ್ಸೆಗಳಿಗೆ ನಿಗದಿ ಪಡಿಸಿದ ಅನುಮೋದನೆಯೊಂದಿಗೆ ಮಂಜೂರಾತಿ ಕ್ರಮ ಕೈಗೊಳ್ಳಲಾಗುವುದು.
* CGHS ಆಧಾರದಲ್ಲಿ ವೈದ್ಯಕೀಯ ಚಿಕಿತ್ಸೆ ಆಧಾರದ ಮಿತಿಯಲ್ಲಿ ಯಾವುದೇ ಹೊರಮಿತಿ ಇಲ್ಲದೆ ಪಾವತಿಸಲಾಗುವುದು.
* KASS ಫಲಾನುಭವಿಗಳು ಆರೋಗ್ಯ ಸೇವೆಗಳನ್ನು ಸರ್ಕಾರಿ ಆಸ್ಪತ್ರೆಗಳು ಮತ್ತು ಕೆಎಎಸ್‌ಎಸ್ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಫಲಾನುಭವಿಗಳು ಸೇವೆ ಪಡೆಯಬಹುದು. ತುರ್ತು ಸಂದರ್ಭದಲ್ಲಿ ನೋಂದಾವಣೆ ಮಾಡದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಮತ್ತು ನಿಯಮಾನುಸಾರ ಹಿಂಬರಿಸಿಕೊಳ್ಳಲು ಅರ್ಹರಿರುತ್ತಾರೆ.
* ಮೊದಲ ಹಂತದಲ್ಲಿ KASSನ ಅಡಿಯಲ್ಲಿ ಒಳರೋಗಿ ಚಿಕಿತ್ಸೆ, ಹಗಲು ಚಿಕಿತ್ಸಾ ಕೇಂದ್ರ, ಕಣ್ಣಿನ ಚಿಕಿತ್ಸಾ ಆಸ್ಪತ್ರೆ ಮತ್ತು ದಂತ ಚಿಕಿತ್ಸಾ ಆಸ್ಪತ್ರೆಗಳು.
* , KASS ಫಲಾನುಭವಿಗಳು ಮುಂದಿನ ಆದೇಶದವರೆಗೆ ಹೋರರೋಗಿ ಚಿಕಿತ್ಸಾ ಸೌಲಭ್ಯವನ್ನು ಹಿಂಬರಿಸಿಕೊಳ್ಳಲು ಅರ್ಹರಾಗಿರುತ್ತಾರೆ.
* ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ (UIP) ಅಡಿಯಲ್ಲಿ ಆವರಿಸಿರುವ ಲಸಿಕೆಗಳು ಹಾಗೂ KASS ನಡಿಯಲ್ಲಿ ನಿರ್ಧಿಷ್ಟ ಪಡಿಸಿದ ಲಸಿಕೆಗಳಿಗೆ ಮಾತ್ರ ಅರ್ಹರಿರುತ್ತಾರೆ.
* ಕೆ.ಎ.ಎಸ್.ಎಸ್ ಫಲಾನುಭವಿಯು ಒಂದೇ ನೋಂದಾಯಿತ ಆಸ್ಪತ್ರೆಗೆ ಒಂದು ತಿಂಗಳ ಅವಧಿಯಲ್ಲಿ ಮೂರು ಬಾರಿ ಭೇಟಿ ನೀಡಬಹುದು. ಪ್ರತಿ ಭೇಟಿಯ ಸಮಯದಲ್ಲಿ ಫಲಾನುಭವಿಯು ಒಂದೇ ಆಸ್ಪತ್ರೆಯಲ್ಲಿ ಮೂರು ವಿಭಿನ್ನ ತಜ್ಞರನ್ನು ಸಂಪರ್ಕಿಸಬಹುದು.
* ಖಾಸಗಿ ನೋಂದಾವಣೆ ಮಾಡದ ಆಸ್ಪತ್ರೆಗಳಿಂದ ಸರ್ಕಾರದ ಆದೇಶದ ಪ್ರಕಾರ ತುರ್ತು ಸಂದರ್ಭದಲ್ಲಿ ತೆಗೆದುಕೊಳ್ಳಲಾದ ಚಿಕಿತ್ಸೆಯನ್ನು KASS ದರಗಳಲ್ಲಿ ಹಿಂಬರಿಸಿಕೊಳ್ಳಲು KASS ಪರಿಗಣಿಸುತ್ತದೆ. ಹಿಂಬರಿಸಿಕೊಳ್ಳುವಿಕೆಯನ್ನು KASS ಪ್ಯಾಕೇಜ್ ದರ ಅಥವಾ ನಿಜವಾದ ವೆಚ್ಚದಲ್ಲಿ ಯಾವುದು ಕಡಿಮೆಯೋ ಅದನ್ನು ಪರಿಗಣಿಸಿ ಆಯಾ ಇಲಾಖಾ ಮುಖ್ಯಸ್ಥರಿಂದ ಹಿಂಬರಿಸಿಕೊಳ್ಳುವಿಕೆಗೆ ಅರ್ಹರಿರುತ್ತಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications