Government Employees: 2024-25ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಡೇಟ್ ಫಿಕ್ಸ್

ಬೆಂಗಳೂರು, ಫೆಬ್ರವರಿ 22: ರಾಜ್ಯ ಸರ್ಕಾರಿ ನೌಕರರು ಈ ಬಾರಿಯ ಬಜೆಟ್‌ ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಮಾರ್ಚ್‌ 7 ರಂದು ಬಜೆಟ್‌ ಮಂಡನೆಯಾಗಲಿದ್ದು, ಈ ಬಜೆಟ್‌ ನಲ್ಲಿ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು ಈಡೇರುವ ನಿರೀಕ್ಷೆ ಇದೆ. ಇತ್ತ 2024-25ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಆಯೋಜಿಸಲು ದಿನಾಂಕವೂ ಕೂಡ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ' ಹಾಗೊ ದಿನಾಂಕ 7-08-2025 ರಿಂದ 9-08-2025 ರವರೆಗೂ 2023-24 ಹಾಗೂ 2024- 25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ ಎಂದಿದ್ದಾರೆ.

Date fixed for 2024-25 district-level state government employees games

ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಸಂಘಟಿಸುವಂತೆ ಮನವಿ ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಕೆಲವು ಜಿಲ್ಲೆಗಳಲ್ಲಿ ಅನುದಾನವನ್ನು ಮೀಸಲಿಟ್ಟಿರುವುದನ್ನು ಕೆಲವು ಸಹಾಯಕ ನಿರ್ದೇಶಕರು ಆಯುಕ್ತಾಲಯದ ಗಮನಕ್ಕೆ ತಂದಿರುತ್ತಾರೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರುಗಳು ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಪಂಚಾಯತ್‌ನ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸದರಿ ವಿಷಯದ ಕುರಿತು ಚರ್ಚಿಸಿ, ಅನುದಾನವು ವ್ಯಪಗತವಾಗದಂತೆ 2025ನೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಅನುಬಂಧ-01 ರಲ್ಲಿ ತಿಳಿಸಿರುವಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿಯಮಾವಳಿಗಳನ್ವಯ ಆಯೋಜಿಸಲು ಈ ಮೂಲಕ ಸೂಚಿಸಿದ್ದಾರೆ.

ಇನ್ನೂ ರಾಜ್ಯ ಸರ್ಕಾರದಿಂದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸರ್ಕಾರಿ ನೌಕರರು ಇನ್ಮುಂದೆ ವೇತನ ಮತ್ತು ಭತ್ಯೆಗಳನ್ನು ರಾಜ್ಯದ ಸಂಚಿತ ನಿಧಿಯಿಂದಲೇ ನೀಡುವುದಾಗಿ ಆದೇಶ ಮಾಡಿದೆ. ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಲ್ಲೇಖಿತ(1)ರ ಪ್ರಸ್ತಾವನೆ ಕುರಿತು, ಉಲ್ಲೇಖಿತ(2)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ಪಾವತಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಅಧಿಕಾರಿ/ಸಿಬ್ಬಂದಿಗಳ ವೇತನಕ್ಕೆ ಅನುದಾನವನ್ನು ಲೆಕ್ಕ ಶೀರ್ಷಿಕೆ:2250-00-102-4-00 ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮಾದಾಯ ದತ್ತಿಗಳು ಅಡಿ ಒದಗಿಸಲಾಗುವುದು. DDO ರವರು ಈ ಲೆಕ್ಕಶೀರ್ಷಿಕೆ ಅನ್ನು ಮ್ಯಾಪ್ ಮಾಡಿಕೊಳ್ಳುವಂತೆ ಹಾಗೂ ಈ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು HRMS ನಲ್ಲಿ ದಾಖಲಿಸುವಂತೆ ತಿಳಿಸಿದೆ. ಈ ರೀತಿ ಮ್ಯಾಪ್ ಮಾಡಿ HRMS ಪುಕ್ರಿಯೆ ಮುಗಿದ ನಂತರ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದಲ್ಲಿ ಪುನರ್-ವಿನಿಯೋಗದ ಮೂಲಕ ಹೆಚ್ಚುವರಿ ಒದಗಿಸಲಾಗುವುದೆಂದು ಆರ್ಥಿಕ ಇಲಾಖೆಯು ತಿಳಿಸಿರುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕ ಇಲಾಖೆಯು ಸೂಚಿಸಿರುವಂತೆ ಜರೂರಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಮತ್ತು ಈ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಅಂದಾಜು ಮಾಡಿ 2025-26 ನೇ ಸಾಲಿನ ಏಪ್ರಿಲ್-ಮೇ ರಲ್ಲಿ ಆರ್ಥಿಕ ಇಲಾಖೆಗೆ ಪುಸ್ತಾವನೆಯನ್ನು ಸಲ್ಲಿಸಲು ಅನುವಾಗುವಂತೆ ಪೂರ್ಣವಿವರಗಳೊಂದಿಗೆ ಮಾಹಿತಿ ಸಲ್ಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+