Get Updates
Get notified of breaking news, exclusive insights, and must-see stories!

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಪೂಜಾ ವಿಧಾನ; ಮೇಲ್ಮನವಿ ಅರ್ಜಿ ವಜಾ

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರಿಂದ ಪೂಜಾವಿಧಿಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶ ಮುಂದುವರಿಕೆಗೆ ಹೈಕೋರ್ಟ್ ವಿಭಾಗೀಯಪೀಠ ಆದೇಶಿಸಿದೆ.

ಬೆಂಗಳೂರು, ಮಾರ್ಚ್ 07; ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಪೂಜಾ ವಿಧಾನ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಏಕಸದಸ್ಯಪೀಠ 2018ರ ಮಾರ್ಚ್ 19ರಂದು ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಆ ಮೂಲಕ 2022ರಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಹೊಸದಾಗಿ ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರಿಂದ ಪೂಜಾವಿಧಿಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶ ಮುಂದುವರಿಕೆಗೆ ವಿಭಾಗೀಯಪೀಠ ಆದೇಶಿಸಿದೆ.

Datta Peetta Pooja Row: HC Dismissed Appeal Filed By Shakadri

ಏಕಸದಸ್ಯಪೀಠ ತೆಗೆದುಕೊಂಡಿದ್ದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರ ನಡುವೆ ಯಾವುದೇ ವಿವಾದ ಇಲ್ಲದ ಕಾರಣಗಳು ಐದು ದಶಕಗಳ ಹಿಂದೆ ಹುಟ್ಟಿದ ವಿವಾದಕ್ಕೆ ಅಂತ್ಯ ಹಾಡುವುದೇ ಒಳ್ಳೆಯದು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಪ್ರಕರಣವನ್ನು ಸರಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

Datta Peetta Pooja Row: HC Dismissed Appeal Filed By Shakadri

ಮೇಲ್ಮನವಿಯು 2022ರ ಆ.22ರಂದು ವಿಚಾರಣೆಗೆ ಬಂದ ವೇಳೆ, ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಿ 2022ರ ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ಪೂಜಾ ಕೈಂಕರ್ಯಗಳ ಮೇಲೆ ನಿಗಾ ವಹಿಸಲು ಎಲ್ಲ ಧರ್ಮದವರು ಒಳಗೊಂಡ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ ಎಂದು ಸರಕಾರ ಮಾಹಿತಿ ನೀಡಿತ್ತು.

ನ್ಯಾಯಾಲಯದ ತೀರ್ಪು ಏನು?; ಸಂವಿಧಾನದ ಕಲಂ 25ರಿಂದ 30ರವರೆಗೆ ಸಮಾನ ಸಮಾಜದ ಅಂಶಗಳನ್ನು ಅಡಕ ಮಾಡಲಾಗಿದೆ. ಕಲಂ 25(1)ರ ಸಾರ್ವಜನಿಕ ವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಯಾವುದೇ ವ್ಯಕ್ತಿ ತನಗಿಷ್ಟ ಬಂದ ಧರ್ಮವನ್ನು ಪಾಲಿಸಬಹುದು, ಆಚರಣೆ ಮಾಡಬಹುದು ಮತ್ತು ಅದನ್ನು ಪ್ರಚಾರ ಮಾಡಬಹುದು ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೇ, ಕಲಂ 26ರ ಪ್ರಕಾರ ಧಾರ್ಮಿಕ ಕೇಂದ್ರಗಳನ್ನು ಸರಕಾರಗಳು ರಕ್ಷಿಸಬೇಕಾಗಿದೆ. ರಾಜ್ಯ ಸರಕಾರ ಈ ಸೂಕ್ಷಮತೆಯನ್ನು ಅರಿತು ಎರಡೂ ಧರ್ಮದವರ ಪ್ರತಿನಿಧಿಗಳ ಜತೆ ಸಮಾಲೋಚಿಸಿ ನಿರ್ವಹಣೆಗೆ ಕ್ರಮ ಕೈಗೊಂಡಿದೆ. ಸರಕಾರ ರಚಿಸಿರುವ ಸಮಿತಿ ಯಾವುದೇ ಧರ್ಮದವರಿಂದಲೂ ದೂರಿಲ್ಲದ ರೀತಿಯಲ್ಲಿ ಧಾರ್ಮಿಕ ಕೇಂದ್ರದ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ. ಕೋರ್ಟ್ ಆದೇಶದ ನಂತರದ ಕ್ರಮಗಳು ಏಕಪಕ್ಷೀಯ, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಯಾವುದೇ ಸಮಾಜದವರು ಆಕ್ಷೇಪ ಎತ್ತಿಲ್ಲ ಎಂದೂ ನ್ಯಾಯಾಲಯ ಹೇಳಿದೆ.

ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ತಮ್ಮ ನಡವಳಿಕೆಯಿಂದ ನಿಜವಾದ ಜಾತ್ಯತೀತೆಯ ತಾಜಾ ಉದಾಹರಣೆಯಾಗಿದ್ದಾರೆ. ಅಲ್ಲದೆ, ಕೋರ್ಟ್ ಸಹ ಧಾರ್ಮಿಕ ಕೇಂದ್ರಗಳ ಸಂಪ್ರದಾಯ ಮತ್ತು ವಿಧಿ ವಿಧಾನಗಳ ಬಗ್ಗೆ ಜಾಗರೂಕವಾಗಿರುತ್ತದೆ. ವಿಶೇಷವಾಗಿ ಭಕ್ತಾಧಿಗಳ ನಡುವಿನ ಮೂಲಭೂತ ಹಕ್ಕುಗಳ ವಿಷಯದ ಕುರಿತು. ಹಾಗಾಗಿ ಈ ಕಾರಣಕ್ಕೆ ಕೋರ್ಟ್ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+