ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಎಸ್ಎಸ್ ಮಲ್ಲಿಕಾರ್ಜುನ

|
Google Oneindia Kannada News

ದಾವಣಗೆರೆ, ಮಾ. 24 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ತನ್ನ ಶಕ್ತಿ ಪ್ರದರ್ಶಿಸಿರುವ ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಕಣಕ್ಕೆ ಇಳಿಸಿದೆ. 2009ರ ಚುನಾವಣೆಯಲ್ಲಿ ಸೋಲುಂಡಿದ್ದ ಮಲ್ಲಿಕಾರ್ಜುನ ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಅವರ ಶಾಮನೂರು ಮಲ್ಲಿಕಾರ್ಜುನ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ 87,521 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಅವರನ್ನು ಲೋಕಸಭೆ ಚುನಾವಣೆ ಕಣಕ್ಕೂ ಪಕ್ಷ ಇಳಿಸಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

SS Mallikarjun

1987ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಎಸ್.ಎಸ್.ಮಲ್ಲಿಕಾರ್ಜುನ 2013ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1998ರಲ್ಲಿ ಮೊದಲ ಬಾರಿ ಶಾಸಕರಾಗಿ ವಿಧಾನಸೌಭೆ ಪ್ರವೇಶಿಸಿದ ಅವರು, 199ರಲ್ಲಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಲ್ಲಿಕಾರ್ಜುನ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.

* 1987ರಲ್ಲಿ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಪಕ್ಷ ಸೇರಿದರು
* 1998 ಮತ್ತು 2013ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ
* 1999ರಲ್ಲಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ
* ಬಿ.ಕಾಂ ಪದವೀಧರರು
* ಕರ್ನಾಟಕ ರಾಜ್ಯ ಒಲಂಪಿಕ್ ಅಸೋಸಿಯೇಶನ್ ನ ಉಪಾಧ್ಯಕ್ಷರು
* ಬಾಪುಜಿ ಎಜುಕೇಶನಲ್ ಇನ್ಸಿಟಿಟ್ಯೂಟ್ ನ ಜಂಟಿ ಕಾರ್ಯದರ್ಶಿ
* ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು
* ರಾಜೀವ್ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ
* ದಾವಣಗೆರೆ ಷುಗರ್ ಕಂಪನಿಯ ಕಾರ್ಯಕಾರಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ
* ಶಾಮನೂರು ಷುಗರ್ಸ್ ಕಂಪನಿಯ ನಿರ್ದೇಶಕರು

ಹಿನ್ನೋಟ : 2009ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ 423,447 ಮತಗಳನ್ನು ಪಡೆದು ದಾವಣಗೆರೆಯಲ್ಲಿ ಜಯಗಳಿಸಿದ್ದರು. ಎಸ್.ಎಸ್. ಮಲ್ಲಿಕಾರ್ಜುನ್ 421,423 ಮತಗಳನ್ನು ಪಡೆದು ಎರಡನೇ ಸ್ಥಾನ ಗಳಿಸಿದ್ದರು. [ಮಾಹಿತಿ ಇಂಡಿಯಾ ವೋಟ್ಸ್.ಕಾಮ್]

English summary
Elections 2014 : S.S.Mallikarjun Congress candidate for Davanagere constituency. Mallikarjun contesting for Lok Sabha Elections second time. He is also sitting MLA of Davanagere North constituency, here is the brief profile.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X