ಜನಕಲ್ಯಾಣ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ, ಜುಲೈ 09 : ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವರು ಮತ್ತು ಬಾಪೂಜಿ ವಿದ್ಯಾಸ0ಸ್ಥೆಯ ನಾಲ್ಕು ದಶಕಗಳ ಕಾಲದ ಗೌರವ ಕಾರ್ಯದರ್ಶಿಗಳಾದ ಡಾ. ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ಪ್ರಸ್ತುತ 'ಡಾ. ಶಾಮನೂರು ಶಿವಶ0ಕರಪ್ಪ ಜನಕಲ್ಯಾಣ ಟ್ರಸ್ಟ್' ರೂಪಗೊ0ಡಿದೆ. ಕರ್ನಾಟಕದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಟ್ರಸ್ಟ್ ಸಹಾಯ ಮಾಡಲಿದೆ.
ಕಳೆದ ಮೂರು ವರ್ಷಗಳಿ0ದ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ಟ್ರಸ್ಟ್ ಮೂಲಕ ನೀಡುತ್ತಿದ್ದು, 2014ನೇ ಸಾಲಿನಲ್ಲಿ 1063 ವಿದ್ಯಾರ್ಥಿಗಳಿಗೆ ವೇತನಗಳನ್ನು ವಿತರಣೆ ಮಾಡಲಾಗಿದೆ. ಸದ್ಯ, 2015ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. [ವೀರಶೈವ ಬಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ]

ಪದವಿಪೂರ್ವ ಕಾಲೇಜು/ಪದವಿ ಕಾಲೇಜು/ವೃತ್ತಿ ಶಿಕ್ಷಣ ಕಾಲೇಜು/ಕಾನೂನು ಕಾಲೇಜು/ಮ್ಯಾನೇಜ್‍ಮೆ0ಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2015-16ರ ಶೈಕ್ಷಣಿಕ ಅವಧಿಯಲ್ಲಿ ವ್ಯಾಸ0ಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಆರ್ಥಿಕವಾಗಿ ಹಿ0ದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆಯಾ ಶಾಲಾ/ಕಾಲೇಜುಗಳ ಮುಖ್ಯಸ್ಥರ ಮೂಲಕ ಕ್ರಮಬದ್ಧವಾದ ಪ್ರಮಾಣ ಪತ್ರಗಳೊ0ದಿಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದುದಾಗಿದೆ. ಕೊನೆಯ ದಿನಾಂಕ ಆಗಸ್ಟ್ 15, 2015.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗಾಗಿ http://www.ssjanakalyantrust.org/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications