ದಾವಣಗೆರೆ- ಕೊಡಗು ಜಿಲ್ಲೆಯ ತಾಲೂಕುವಾರು ಮಳೆ ವಿವರ
ಮಡಿಕೇರಿ ಅ.05: ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 12.41 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2513.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2467.37 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.23 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3429.35 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3450.96 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.47 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2120.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2293.58 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.53 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1990.41 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1657.59 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 4.4, ನಾಪೋಕ್ಲು 8.2, ಸಂಪಾಜೆ 6.5, ಭಾಗಮಂಡಲ 1.8, ವಿರಾಜಪೇಟೆ ಕಸಬಾ 29, ಹುದಿಕೇರಿ 20, ಶ್ರೀಮಂಗಲ 47.6, ಪೊನ್ನಂಪೇಟೆ 2.2, ಅಮ್ಮತ್ತಿ 16, ಬಾಳೆಲೆ 62, ಸೋಮವಾರಪೇಟೆ ಕಸಬಾ 9.8, ಶಾಂತಳ್ಳಿ 3, ಕೊಡ್ಲಿಪೇಟೆ 2.2, ಕುಶಾಲನಗರ 0.2, ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (04-10-2021) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.93 ಅಡಿಗಳು. ಕಳೆದ ವರ್ಷ ಇದೇ ದಿನ 2858.64 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.8 ಮಿ.ಮೀ., ಇಂದಿನ ನೀರಿನ ಒಳಹರಿವು 1713 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1134 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 700 ಕ್ಯುಸೆಕ್, ನಾಲೆಗೆ 550 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 800 ಕ್ಯುಸೆಕ್, ನಾಲೆಗೆ 700 ಕ್ಯುಸೆಕ್.

****
ದಾವಣಗೆರೆ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13.06 ಮಿ.ಮೀ. ಸರಾಸರಿ ಮಳೆಯಾಗಿದ್ದು, ಒಟ್ಟಾರೆ ಅಂದಾಜು ರೂ.8.10 ಲಕ್ಷ ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕಿನಲ್ಲಿ 22.75 ಮಿ.ಮೀ. ವಾಸ್ತವ ಮಳೆಯಾಗಿದ್ದು, ದಾವಣಗೆರೆ 26.46 ಮಿ.ಮೀ., ಹರಿಹರ 3.40 ಮಿ.ಮೀ., ಹೊನ್ನಾಳಿ 5.70 ಮಿ.ಮೀ., ಜಗಳೂರು 7 ಮಿ.ಮೀ. ನಷ್ಟು ವಾಸ್ತವ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾ ಮನೆಗಳಿಗೆ ಭಾಗಶ: ಹಾನಿಯಾಗಿದ್ದು ರೂ. 2.10 ಲಕ್ಷ ಹಾಗೂ 4 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು ರೂ. 1 ಲಕ್ಷ ಸೇರಿದಂತೆ ಒಟ್ಟು 3.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆಗಳಿಗೆ ಭಾಗಶ: ಹಾನಿಯಾಗಿದ್ದು ರೂ.1.20 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.0.30 ಲಕ್ಷ ಒಟ್ಟು ರೂ.1.50 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.1.00 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.00 ಲಕ್ಷ ಮತ್ತು 1 ಕಚ್ಚಾ ಮನೆ ತೀವ್ರಹಾನಿಯಾಗಿದ್ದು ರೂ.1.50 ಲಕ್ಷ. ಒಟ್ಟು 3.50 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications