ಬೆಣ್ಣೆ ನಗರಿ ಜನತೆಗೆ ಗುಡ್‌ ನ್ಯೂಸ್:‌ ದಾವಣಗೆರೆ ಟು ಬೆಂಗಳೂರು ಜಸ್ಟ್‌ ಎರಡೂವರೆ ಗಂಟೆ ಮಾತ್ರ!

ಮಧ್ಯ ಕರ್ನಾಟಕದ ಜನರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರವಾಗುತ್ತಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿ ಭರದಿಂದ ಸಾಗುತ್ತಿದ್ದು, 2027ರ ಡಿಸೆಂಬರ್ ವೇಳೆಗೆ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಈ ಯೋಜನೆ ಪೂರ್ಣಗೊಂಡರೆ ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಹಲವು ಭಾಗಗಳಿಂದ ಬೆಂಗಳೂರಿಗೆ ರೈಲು ಸಂಪರ್ಕ ಮತ್ತಷ್ಟು ಸುಲಭವಾಗಲಿದೆ. ವಿಶೇಷವಾಗಿ ಉದ್ಯೋಗ, ಶಿಕ್ಷಣ, ವ್ಯಾಪಾರ ಹಾಗೂ ವೈದ್ಯಕೀಯ ಸೇವೆಗಳಿಗಾಗಿ ಬೆಂಗಳೂರಿಗೆ ಪ್ರಯಾಣಿಸುವ ಜನರಿಗೆ ಈ ಮಾರ್ಗ ಅನುಕೂಲ ಕಲ್ಪಿಸುವ ನಿರೀಕ್ಷೆಯಿದೆ.

Davanagere to Bengaluru in Just 2 5 Hours Tumakuru-Davanagere Railway Line Targeted for 2027 Completion

ತೋಳಹುಣಸೆಯಿಂದ ಆನಗೋಡುವಿನವರೆಗೆ ಕಾಮಗಾರಿ ಪರಿಶೀಲನೆ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ತೋಳಹುಣಸೆಯಿಂದ ಆನಗೋಡುವಿನವರೆಗೆ ಮೋಟಾರ್ ಟ್ರ್ಯಾಲಿಯಲ್ಲಿ ಸಂಚರಿಸಿ ಕಾಮಗಾರಿಯನ್ನು ಖುದ್ದಾಗಿ ವೀಕ್ಷಿಸಿದ್ದಾರೆ. ಯೋಜನೆಯ ವಿವಿಧ ಹಂತಗಳ ಪ್ರಗತಿ, ಕಾಮಗಾರಿಯ ವೇಗ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ಈ ರೈಲು ಮಾರ್ಗವು ಮಧ್ಯ ಕರ್ನಾಟಕದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಯೋಜನೆಯಾಗಿದೆ. ಹಲವು ವರ್ಷಗಳಿಂದ ನೇರ ರೈಲು ಸಂಪರ್ಕಕ್ಕಾಗಿ ಕಾಯುತ್ತಿದ್ದ ಜನರಿಗೆ ಯೋಜನೆಯ ಕಾಮಗಾರಿ ಪ್ರಗತಿ ಹೊಸ ನಿರೀಕ್ಷೆ ಮೂಡಿಸಿದ್ದು, ನಿಗದಿತ ಗುರಿಯಂತೆ ಕಾಮಗಾರಿ ಪೂರ್ಣಗೊಂಡರೆ ಈ ಭಾಗದ ಜನರ ದೈನಂದಿನ ಪ್ರಯಾಣದ ಸ್ವರೂಪವೇ ಬದಲಾಗುವ ಸಾಧ್ಯತೆಯಿದೆ.

ಬೆಂಗಳೂರಿಗೆ ಪ್ರಯಾಣ ಮತ್ತಷ್ಟು ಸುಲಭ

ಪ್ರಸ್ತುತ ದಾವಣಗೆರೆಯಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುವಾಗ ಲಭ್ಯವಿರುವ ರೈಲುಗಳ ಮಾರ್ಗ ಹಾಗೂ ವೇಳಾಪಟ್ಟಿಯನ್ನು ಅವಲಂಬಿಸಿ ಸುತ್ತುಮಾರ್ಗದಲ್ಲಿ ಸಂಚರಿಸಬೇಕಾದ ಸಂದರ್ಭಗಳಿವೆ. ಇದರಿಂದ ಕೆಲವು ಪ್ರಯಾಣಗಳಿಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ರಸ್ತೆ ಮಾರ್ಗದಲ್ಲಿ ಬಸ್ ಮೂಲಕ ಪ್ರಯಾಣಿಸಲು ಸಾಮಾನ್ಯವಾಗಿ ನಾಲ್ಕರಿಂದ ಐದು ಗಂಟೆಗಳವರೆಗೆ, ಕಾರಿನಲ್ಲಿ ತೆರಳಲು ಮೂರುರಿಂದ ನಾಲ್ಕು ಗಂಟೆಗಳವರೆಗೆ ಸಮಯ ಹಿಡಿಯಬಹುದು. ಸಂಚಾರ ದಟ್ಟಣೆ, ಪ್ರಯಾಣದ ಸಮಯ ಹಾಗೂ ರಸ್ತೆ ಪರಿಸ್ಥಿತಿಯ ಆಧಾರದ ಮೇಲೆ ಈ ಅವಧಿ ಬದಲಾಗುತ್ತದೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣಗೊಂಡ ಬಳಿಕ ದಾವಣಗೆರೆ ಮತ್ತು ಬೆಂಗಳೂರು ನಡುವಿನ ರೈಲು ಸಂಪರ್ಕಕ್ಕೆ ಹೊಸ ಆಯ್ಕೆ ಲಭ್ಯವಾಗಲಿದೆ. ಈ ಮಾರ್ಗದ ಮೂಲಕ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವ ನಿರೀಕ್ಷೆಯಿದ್ದು, ದಾವಣಗೆರೆಯಿಂದ ಬೆಂಗಳೂರಿಗೆ ಸುಮಾರು ಎರಡೂವರೆ ಗಂಟೆಗಳಲ್ಲಿ ತಲುಪುವ ಸಾಧ್ಯತೆ ಇದೆ.

ಮೂರು ಜಿಲ್ಲೆಗಳ ಜನರಿಗೆ ಅನುಕೂಲ

ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗವು ಕೇವಲ ರೈಲು ಸಂಪರ್ಕ ಯೋಜನೆಯಲ್ಲ, ಮಧ್ಯ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ನೀಡಬಲ್ಲ ಮೂಲಸೌಕರ್ಯ ಯೋಜನೆಯಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಸಂಚರಿಸುವ ಪ್ರಯಾಣಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಸಣ್ಣ ವ್ಯಾಪಾರಿಗಳು ಯೋಜನೆಯಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ನಿಲ್ದಾಣಗಳಲ್ಲಿ 21 ಬೋಗಿಗಳ ರೈಲು ನಿಲ್ಲುವ ವ್ಯವಸ್ಥೆ

ಭವಿಷ್ಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ನಿಲ್ದಾಣಗಳ ಮೂಲಸೌಕರ್ಯಕ್ಕೂ ಮಹತ್ವ ನೀಡಲಾಗುತ್ತಿದೆ. ನಿಲ್ದಾಣಗಳಲ್ಲಿ ಕನಿಷ್ಠ 21 ಬೋಗಿಗಳನ್ನು ಹೊಂದಿರುವ ರೈಲುಗಳು ನಿಲ್ಲಲು ಅನುಕೂಲವಾಗುವಂತೆ ವ್ಯವಸ್ಥೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ.

2027ರ ಡಿಸೆಂಬರ್ ಗಡುವಿನತ್ತ ಎಲ್ಲರ ಚಿತ್ತ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿಯನ್ನು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವ ಗುರಿ ಹೋದಿದೆ. ಯೋಜನೆಯ ವಿವಿಧ ಹಂತಗಳ ಕಾಮಗಾರಿ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವುದು, ಅಗತ್ಯ ಮೂಲಸೌಕರ್ಯ ಸಿದ್ಧವಾಗುವುದು ಮತ್ತು ರೈಲು ಸಂಚಾರಕ್ಕೆ ಸಂಬಂಧಿಸಿದ ಅನುಮತಿಗಳು ದೊರೆಯುವುದು ಅಂತಿಮ ಗಡುವು ಸಾಧಿಸುವಲ್ಲಿ ನಿರ್ಣಾಯಕವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+