ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವೊಸ್ ಶೃಂಗಸಭೆ: ಲುಲು ಗ್ರೂಪ್ ಜೊತೆ 2000 ಕೋಟಿ ರೂ. ಹೂಡಿಕೆ ಒಪ್ಪಂದ

|
Google Oneindia Kannada News

ದಾವೋಸ್, ಮೇ 23: ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದಾರೆ. ಸಮಾವೇಶದ ಮೊದಲ ದಿನವೇ ಲುಲು ಗ್ರೂಪ್ ಇಂಟರ್ ನ್ಯಾಷನಲ್‌ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಗಿದೆ.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.

ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ನ್ನು ಸಹ ಪರಿಗಣಿಸಬಹುದಾಗಿದೆ ಎಂದರು.

ಸ್ವಿಟ್ಜರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹೀರೋ ಮೋಟೋಕಾರ್ಪ್ ನ ಅಧ್ಯಕ್ಷ ಹಾಗೂ ಸಿಇಒ ಪವನ್ ಮುಂಜಲ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಹೂಡಿಕೆ ಅವಕಾಶಗಳ ಕುರಿತು ಚರ್ಚಿಸಿದರು.

ಜ್ಯೂಬಿಲಿಯಂಟ್ ಫುಡ್ ವರ್ಕ್ಸ್

ಜ್ಯೂಬಿಲಿಯಂಟ್ ಫುಡ್ ವರ್ಕ್ಸ್

ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಹಿಟಾಚಿ ಎನರ್ಜಿ

ಹಿಟಾಚಿ ಎನರ್ಜಿ

ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇ ವಿ ಚಾರ್ಜಿಂಗ್‌ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ. ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕವನ್ನು ಉದ್ಘಾಟಿಸುತ್ತಿದ್ದಾರೆ. 2 ಸಾವಿರ ಇಂಜಿನಿಯರ್ ಗಳನ್ನು ಹೊಂದಿರುವ ಇಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಹಿಟಾಚಿ ಸಂಸ್ಥೆಯ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿದೆ.

2 ಯೋಜನೆ ಕೈಗೆತ್ತಿಕೊಳ್ಳಲಿರುವ ಸೀಮೆನ್ಸ್

2 ಯೋಜನೆ ಕೈಗೆತ್ತಿಕೊಳ್ಳಲಿರುವ ಸೀಮೆನ್ಸ್

ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಜ್ಞಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆ

ಸ್ಥಳೀಯ ಮಾರುಕಟ್ಟೆ ಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ 2022 ರಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲುಮುಖ್ಯ ಮಂತ್ರಿಗಳನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2500 ಇಂಜಿನಿಯರ್ ಗಳನ್ನು ಹೊಂದಿದೆ.

ಬಿಯಾಂಡ್ ಬೆಂಗಳೂರು

ಬಿಯಾಂಡ್ ಬೆಂಗಳೂರು

ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Agreement on Investing in Karnataka was signed with AV Anantha Raman, Director of the Lulu Group International, at the World Economic Forum conference in Davos, Switzerland, in the presence of Chief Minister Basavaraja Bommai today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X