ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ!

|
Google Oneindia Kannada News

ಬೆಂಗಳೂರು, ಮಾ. 16: ಕೊರೊನಾ ವೈರಸ್‌ನಿಂದಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಹೊಡೆತ ಬಿದ್ದಿದೆ. ಕೊರೊನಾ ವೈರಸ್ ಲಾಕ್‌ಡೌನ್‌ ಕಾಲದಲ್ಲಂತೂ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಬದುಕು ಬೀದಿಗೆ ಬಂದಿತ್ತು. ಮಕ್ಕಳ ಭವಿಷ್ಯ ರೂಪಿಸುವ ಉಪನ್ಯಾಸಕರು ಉದ್ಯೋಗ ಕಳೆದುಕೊಂಡು ಬೇರೆ ಉದ್ಯೋಗಗಳಿಗೆ ಮೊರೆ ಹೋಗಿದ್ದರು.

ಲಾಕ್‌ಡೌನ್ ಸಂದರ್ಭದಲ್ಲಿನ ಶೈಕ್ಷಣಿಕ ರಂಗದ ಪರಿಸ್ಥಿತಿ ಅದರಲ್ಲೂ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಸ್ಥಿತಿಯನ್ನು ನೋಡಿ ಇಡೀ ನಾಡಿನ ಜನರು ನೊಂದುಕೊಂಡು ಸರ್ಕಾರಕ್ಕೆ ಶಾಪ ಹಾಕಿದ್ದರು. ಅದನ್ನೆಲ್ಲ ಗಮನಿಸಿದ್ದ ಉನ್ನತ ಶಿಕ್ಷಣ ಇಲಾಖೆ ಇದೀಗ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟಿದೆ.

ಕಾಲೇಜುಗಳಿಗೆ ರಜೆ ಘೋಷಣೆ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದೇನು? ಕಾಲೇಜುಗಳಿಗೆ ರಜೆ ಘೋಷಣೆ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದೇನು?

ಅತಿಥಿ ಉಪನ್ಯಾಸಕರಿಗೆ ಡಿಸಿಎಂ ಭರವಸೆ

ಅತಿಥಿ ಉಪನ್ಯಾಸಕರಿಗೆ ಡಿಸಿಎಂ ಭರವಸೆ

ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂಪಾಯಿ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ. ಸಿ.ಎನ್.‌ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ಸೇವೆ ಕಾಯಂ?

ಅತಿಥಿ ಉಪನ್ಯಾಸಕರ ಸೇವೆ ಕಾಯಂ?

ಹತ್ತು ವರ್ಷ ಸೇವಾವಧಿ ಪೂರೈಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂ ಮಾಡಿ. ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಕಾಯಂ ಆಗುವವರೆಗೆ ಅವರ ಸೇವೆಯನ್ನು ನಿರಂತರವಾಗಿ ಬಳಸಿಕೊಳ್ಳುತ್ತಿರಬೇಕು. ಇನ್ನು, ಗೌರವ ಧನದ ಮೊತ್ತವನ್ನು ಮಾಸಿಕ ಕನಿಷ್ಠ 25,000 ರೂ.ಗಳನ್ನಾದರೂ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ. ಇವೆಲ್ಲವನ್ನು ಪರಿಶೀಲನೆ ಮಾಡಲಾಗುವುದು ಎಂದು ಡಾ. ಅಶ್ವಥ್ ನಾರಾಯಣ ಅವರು ಭರವಸೆ ನೀಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಕಚೇರಿಯಲ್ಲಿ ಸಭೆ

ಸಭಾಪತಿ ಬಸವರಾಜ ಹೊರಟ್ಟಿ ಕಚೇರಿಯಲ್ಲಿ ಸಭೆ

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ನಂತರ ಈ ವಿಷಯ ತಿಳಿಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು, ಮಾನವೀಯತೆ ಆಧಾರದ ಮೇಲೆ ಈ ಬೇಡಿಕೆಗಳನ್ನು ಪರಿಶೀಲನೆ ಮಾಡಲಾಗುವುದು. ಜೊತೆಗೆ ಬೇಡಿಕೆ ಈಡೇರಿಸಲು ಸರ್ಕಾರ ಪ್ರಯತ್ನ ನಡೆಸಲಿದೆ ಎಂದರು.

Recommended Video

ಆರೋಗ್ಯ ತಜ್ಞರು ಕೋರೋನ ಬಗ್ಗೆ ಎನ್ ಹೇಳಿದಾರೆ ಗೊತ್ತಾ ?? | Oneindia Kannada
ಸಭಾಪತಿ ಬಸವರಾಜ ಹೊರಟ್ಟಿ ಮನವಿ

ಸಭಾಪತಿ ಬಸವರಾಜ ಹೊರಟ್ಟಿ ಮನವಿ

ಅತಿಥಿ ಉಪನ್ಯಾಸಕರ ಸೇವಾ ಸಕ್ರಮ, ಸೇವಾ ಭದ್ರತೆಗೆ ಸಂಬಂಧಿಸಿದಂತೆ ಮಾನವೀಯ ನೆಲೆಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸದಸ್ಯರು ಕೂಡ ಮನವಿ ಮಾಡಿದ್ದಾರೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ.


ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್‌, ಅರುಣ್‌ ಶಹಾಪೂರ್, ಎಸ್.ಎಲ್. ಬೋಜೇಗೌಡ, ಎಸ್.ವಿ.ಸಂಕನೂರು, ಸುಶೀಲ್ ನಮೋಶಿ ಮುಂತಾದವರು ಭಾಗವಹಿಸಿದ್ದರು.

English summary
DCM Ashwath Narayan gives assurance that he will Discuss with CM on providing salary and job security to guest lecturers in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X