• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ರಾಜ್ಯಪಾಲರಿಗೆ ಡಿಸಿಎಂ ವಿವರಣೆ

|

ಬೆಂಗಳೂರು, ಮೇ 27: ಗುರುವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ವಿವರಣೆ ನೀಡಿದ್ದಾರೆ.

ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆಗಿರುವ ಅಶ್ವಥ್ ನಾರಾಯಣ, ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಜೊತೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದ್ದಾರೆ. ಲಾಕ್‌ಡೌನ್ ಸೇರಿದಂತೆ ರಾಜ್ಯದಲ್ಲಿನ ಲಸಿಕೆ ಅಭಿಯಾನ, ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳು, ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

 ರಾಜ್ಯದಲ್ಲಿ ಆಫ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ: ಅಶ್ವತ್ಥ ನಾರಾಯಣ ರಾಜ್ಯದಲ್ಲಿ ಆಫ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ: ಅಶ್ವತ್ಥ ನಾರಾಯಣ

   ಮುಂದೊಂದು ದಿನ BY Vijayendra ರಾಜ್ಯದ ಮುಖ್ಯಮಂತ್ರಿಯಾಗ್ತಾರೆ.. | Oneindia Kannada

   ರಾಜ್ಯದಲ್ಲೀಗ ಲಾಕ್‌ಡೌನ್‌ ಸಮಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ ಎಂದು ರಾಜ್ಯಪಾಲರಿಗೆ ವಿವರಿಸಿದ್ದಾರೆ. ಕರ್ನಾಟಕದಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿರುವ ಕುರಿತು ಮಾಹಿತಿ ನೀಡಿದ್ದು, ಕಪ್ಪು ಶಿಲೀಂಧ್ರ ಸಮಸ್ಯೆ ನಿವಾರಣೆ ಸಂಬಂಧ ಔಷಧ ಪೂರೈಕೆಗೆ ಸತತ ಪ್ರಯತ್ನ ನಡೆಯುತ್ತಿವೆ. ರಾಜ್ಯ ಸರ್ಕಾರ ಕೊರೊನಾ ನಿವಾರಣೆಗೆ ಎಲ್ಲಾ ಆಯಾಮಗಳಿಂದ ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದಾರೆ.

   English summary
   DCM Ashwath Narayan met governor Vajubhai wala and explains covid situation of state
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X