ಉಪನ್ಯಾಸಕರ ನೇಮಕ: ಹಣಕಾಸು ಇಲಾಖೆಗೆ ಸರ್ಕಾರದ ಮಹತ್ವದ ಆದೇಶ!
ಬೆಂಗಳೂರು, ಡಿ. 11: ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ ನಂತರವೂ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಅನುದಾನಿತ ಪ್ರಾಧ್ಯಾಪಕರ ಒಕ್ಕೂಟದ ಪ್ರತಿನಿಧಿಗಳು, ಉನ್ನತ ಶಿಕ್ಷಣ ಹಾಗೂ ಹಣಕಾಸು ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಸಿಎಂ, ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅನುದಾನಿತ ಕಾಲೇಜುಗಳಿಗೆ ನೇಮಕ
ಒಟ್ಟು 907 ಮಂದಿ ಉಪನ್ಯಾಸಕರನ್ನು ಅನುದಾನಿತ ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಇದರಲ್ಲಿ 369 ಮಂದಿಗೆ ನೇಮಕಾತಿ ಅದೇಶ ನೀಡಿದ್ದು ಅವರೆಲ್ಲರೂ ತಮಗೆ ನಿಯೋಜನೆ ಆಗಿರುವ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯುಜಿಸಿ ನಿಯಮಗಳ ಅನುಸಾರವಾಗಿಯೇ ಅವರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಡಾ. ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

ಹಣಕಾಸು ಇಲಾಖೆಗೆ ಪ್ರಸ್ತಾವನೆ
350 ಅಭ್ಯರ್ಥಿಗಳ ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. ಇವೆರಲ್ಲರ ನೇಮಕಾತಿ ಕುರಿತಂತೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಪ್ರಸ್ತಾವನೆ ಕಳುಹಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಕ್ಷಣ ಕ್ರಮದ ಭರವಸೆ
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಅವರು ಕೂಡ ಉನ್ನತ ಶಿಕ್ಷಣ ಸಚಿವರ ಸೂಚನೆಗೆ ಸ್ಪಂಧಿಸಿದ್ದಾರೆ. ಇಲಾಖೆಯಿಂದ ಪ್ರಸ್ತಾವನೆ ಬಂದ ತಕ್ಷಣ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಹಣಕಾಸು ಇಲಾಖೆಯಿಂದ ಒಪ್ಪಿಗೆ ಕೊಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಾಸಕ ಮಹೇಶ್ ನೇತೃತ್ವದಲ್ಲಿ ಭೇಟಿ
ಕೊಳ್ಳೆಗಾಲದ ಶಾಸಕ ಮಹೇಶ್ ಅವರ ನೇತೃತ್ವಲ್ಲಿ ಡಾ.ಅಶ್ವಥ್ ನಾರಾಯಣ ಅವರನ್ನು ಭೇಟಿಯಾದ ಅನುದಾನಿತ ಕಾಲೇಜುಗಳ ಉಪನ್ಯಾಸಕರು ತಮ್ಮೆಲ್ಲ ಸಮಸ್ಯೆಗಳನ್ನು ನಿವೇದನೆ ಮಾಡಿಕೊಂಡರು. 2015ರ ಡಿಸೆಂಬರ್ 31ರವರೆಗಿನ ಬೋಧಕರ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಆ ಪ್ರಕಾರ ಈ ನೇಮಕ ಮಾಡಬೇಕಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications