ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪನ್ಯಾಸಕರ ನೇಮಕ: ಹಣಕಾಸು ಇಲಾಖೆಗೆ ಸರ್ಕಾರದ ಮಹತ್ವದ ಆದೇಶ!

|
Google Oneindia Kannada News

ಬೆಂಗಳೂರು, ಡಿ. 11: ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ ನಂತರವೂ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್‌ ನಾರಾಯಣ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಅನುದಾನಿತ ಪ್ರಾಧ್ಯಾಪಕರ ಒಕ್ಕೂಟದ ಪ್ರತಿನಿಧಿಗಳು, ಉನ್ನತ ಶಿಕ್ಷಣ ಹಾಗೂ ಹಣಕಾಸು ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಸಿಎಂ, ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅನುದಾನಿತ ಕಾಲೇಜುಗಳಿಗೆ ನೇಮಕ

ಅನುದಾನಿತ ಕಾಲೇಜುಗಳಿಗೆ ನೇಮಕ

ಒಟ್ಟು 907 ಮಂದಿ ಉಪನ್ಯಾಸಕರನ್ನು ಅನುದಾನಿತ ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಇದರಲ್ಲಿ 369 ಮಂದಿಗೆ ನೇಮಕಾತಿ ಅದೇಶ ನೀಡಿದ್ದು ಅವರೆಲ್ಲರೂ ತಮಗೆ ನಿಯೋಜನೆ ಆಗಿರುವ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯುಜಿಸಿ ನಿಯಮಗಳ ಅನುಸಾರವಾಗಿಯೇ ಅವರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಡಾ. ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

ಐಟಿ ಕ್ಷೇತ್ರದ 'ವರ್ಕ್ ಫ್ರಂ ಹೋಂ'ಗೆ ಶಾಸಕರ ವಿರೋಧ ಮತ್ತು ಕಂಪೆನಿಗಳ ಒಲವುಐಟಿ ಕ್ಷೇತ್ರದ 'ವರ್ಕ್ ಫ್ರಂ ಹೋಂ'ಗೆ ಶಾಸಕರ ವಿರೋಧ ಮತ್ತು ಕಂಪೆನಿಗಳ ಒಲವು

ಹಣಕಾಸು ಇಲಾಖೆಗೆ ಪ್ರಸ್ತಾವನೆ

ಹಣಕಾಸು ಇಲಾಖೆಗೆ ಪ್ರಸ್ತಾವನೆ

350 ಅಭ್ಯರ್ಥಿಗಳ ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. ಇವೆರಲ್ಲರ ನೇಮಕಾತಿ ಕುರಿತಂತೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಪ್ರಸ್ತಾವನೆ ಕಳುಹಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಕ್ಷಣ ಕ್ರಮದ ಭರವಸೆ

ತಕ್ಷಣ ಕ್ರಮದ ಭರವಸೆ

ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಅವರು ಕೂಡ ಉನ್ನತ ಶಿಕ್ಷಣ ಸಚಿವರ ಸೂಚನೆಗೆ ಸ್ಪಂಧಿಸಿದ್ದಾರೆ. ಇಲಾಖೆಯಿಂದ ಪ್ರಸ್ತಾವನೆ ಬಂದ ತಕ್ಷಣ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಹಣಕಾಸು ಇಲಾಖೆಯಿಂದ ಒಪ್ಪಿಗೆ ಕೊಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಾಸಕ ಮಹೇಶ್ ನೇತೃತ್ವದಲ್ಲಿ ಭೇಟಿ

ಶಾಸಕ ಮಹೇಶ್ ನೇತೃತ್ವದಲ್ಲಿ ಭೇಟಿ

ಕೊಳ್ಳೆಗಾಲದ ಶಾಸಕ ಮಹೇಶ್‌ ಅವರ ನೇತೃತ್ವಲ್ಲಿ ಡಾ.ಅಶ್ವಥ್ ನಾರಾಯಣ ಅವರನ್ನು ಭೇಟಿಯಾದ ಅನುದಾನಿತ ಕಾಲೇಜುಗಳ ಉಪನ್ಯಾಸಕರು ತಮ್ಮೆಲ್ಲ ಸಮಸ್ಯೆಗಳನ್ನು ನಿವೇದನೆ ಮಾಡಿಕೊಂಡರು. 2015ರ ಡಿಸೆಂಬರ್ 31ರವರೆಗಿನ ಬೋಧಕರ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಆ ಪ್ರಕಾರ ಈ ನೇಮಕ ಮಾಡಬೇಕಾಗಿದೆ.

ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್

English summary
DCM Dr. C.N. Ashwath Narayana suggested Recruitment of 350 lecturers of graduate colleges All ready Approved by the Finance Department, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X